ಬನ್ನೇರುಘಟ್ಟ ರಸ್ತೆಯಲ್ಲಿ ಸರಣಿ ಅಪಘಾತ: ರಸ್ತೆ ಬದಿ ನಿಂತಿದ್ದ ವ್ಯಕ್ತಿ ದುರಂತ ಸಾವು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆಯ ಜೊತೆಗೆ ಅಪಘಾತಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇದೀಗ ಬನ್ನೇರುಘಟ್ಟ ಮುಖ್ಯ ರಸ್ತೆ(Bannerghatta road)ಯ ಪಾರಿಜಾತ ಆಸ್ಪತ್ರೆ ಎದುರು ಸರಣಿ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ನಿಂತಿದ್ದ ವ್ಯಕ್ತಿ ದುರಂತ ಸಾವನ್ನಪ್ಪಿದ್ದಾನೆ.

ಬನ್ನೇರುಘಟ್ಟ ರಸ್ತೆಯಲ್ಲಿ ಸರಣಿ ಅಪಘಾತ: ರಸ್ತೆ ಬದಿ ನಿಂತಿದ್ದ ವ್ಯಕ್ತಿ ದುರಂತ ಸಾವು
ಬನ್ನೇರುಘಟ್ಟ ರಸ್ತೆಯಲ್ಲಿ ಸರಣಿ ಅಪಘಾತ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 11, 2024 | 5:21 PM

ಬೆಂಗಳೂರು, ಜು.11: ಆನೇಕಲ್ ತಾಲೂಕಿನ ಬನ್ನೇರುಘಟ್ಟ ಮುಖ್ಯ ರಸ್ತೆ(Bannerghatta road)ಯ ಪಾರಿಜಾತ ಆಸ್ಪತ್ರೆ ಎದುರು ಸರಣಿ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ನಿಂತಿದ್ದ ವ್ಯಕ್ತಿ ದುರಂತ ಸಾವನ್ನಪ್ಪಿದ್ದಾನೆ. ಅಡ್ಡ ಬಂದ ಬೈಕ್ ಸವಾರನನ್ನು ಉಳಿಸಲು ಹೋಗಿ ಈ ಸರಣಿ ಅಪಘಾತ(Accident) ನಡೆದಿದ್ದು, 2 ಬೈಕ್, ಗೂಡ್ಸ್ ವಾಹನ, ಥಾರ್ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಬಸ್​, 4 ವಾಹನಗಳಿಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ  ಆಂಧ್ರಪ್ರದೇಶ ಮೂಲದ ಪ್ರಸಾದ್ ರಾವ್(60) ಕೊನೆಯುಸಿರೆಳೆದಿದ್ದಾರೆ.

ಇನ್ನುಳಿದಂತೆ ಪಾದಚಾರಿ, ಇಬ್ಬರು ಬೈಕ್ ಸವಾರರು ಹಾಗೂ ಬಸ್ಸಿನಲ್ಲಿದ್ದ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ. ಕೂಡಲೇ ಗಾಯಗೊಂಡವರನ್ನು ಸ್ಥಳೀಯರು ಸೇರಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕ್ರೇನ್ ಮೂಲಕ ಬಿಎಂಟಿಸಿ ಬಸ್ ಹಾಗೂ ಬೈಕ್, ಗೂಡ್ಸ್ ವಾಹನವನ್ನು ತೆರವು ಮಾಡಿ, ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಮದ್ಯ ತುಂಬಿದ ಲಾರಿ ಪಲ್ಟಿ ಕೇಸ್​ಗೆ ಬಿಗ್ ಟ್ವಿಸ್ಟ್; ಅಪಘಾತ ಎಂದು ನಾಟಕ ಮಾಡಿದ್ನಾ ಚಾಲಕ?

ಟಿಪ್ಪರ್​ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು

ಬೆಂಗಳೂರು: ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಚಿಕ್ಕಬಿದರಕಲ್ಲು ನಿವಾಸಿ ಕಮಲಮ್ಮ(50) ಮೃತಪಟ್ಟಿದ್ದಾರೆ. ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಘಟನೆ ನಂತರ ಟಿಪ್ಪರ್ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿ ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ