ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಾಯ
KSRTC ಬಸ್ ಚಾಲಕನ ಯಡವಟ್ಟಿನಿಂದ ಆನೇಕಲ್ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದೆ. ಬಸ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದರೆ, ಕಾರಿಗೆ ಹಿಂಬದಿಯಿಂದ ಬೈಕ್ ಗುದ್ದಿದ ಪರಿಣಾಮ ಬೈಕ್ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಅಪಘಾತದ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಆನೇಕಲ್, ಡಿಸೆಂಬರ್ 05: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದ್ದು, ಘಟನೆಯ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕನ ಯಡವಟ್ಟಿನಿಂದ ಅಪಘಾತ ನಡೆದಿದ್ದು, ಆತ ಏಕಾಏಕಿ ಬ್ರೇಕ್ ಹಾಕಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಬಸ್ಗೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿದ್ದರೆ, ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
