ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಬೈಕ್​​ ಸವಾರನಿಗೆ ಗಾಯ

Updated By: ಪ್ರಸನ್ನ ಹೆಗಡೆ

Updated on: Dec 05, 2025 | 1:04 PM

KSRTC ಬಸ್​​ ಚಾಲಕನ ಯಡವಟ್ಟಿನಿಂದ ಆನೇಕಲ್​​ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದೆ. ಬಸ್​​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದರೆ, ಕಾರಿಗೆ ಹಿಂಬದಿಯಿಂದ ಬೈಕ್​​ ಗುದ್ದಿದ ಪರಿಣಾಮ ಬೈಕ್​​ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಅಪಘಾತದ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್​​ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆನೇಕಲ್​​, ಡಿಸೆಂಬರ್​​ 05: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದ್ದು, ಘಟನೆಯ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಎಸ್​ಆರ್​ಟಿಸಿ ಬಸ್​​ ಚಾಲಕನ ಯಡವಟ್ಟಿನಿಂದ ಅಪಘಾತ ನಡೆದಿದ್ದು, ಆತ ಏಕಾಏಕಿ ಬ್ರೇಕ್​ ಹಾಕಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಬಸ್​​ಗೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿದ್ದರೆ, ಕಾರಿಗೆ ಡಿಕ್ಕಿಯಾಗಿ ಬೈಕ್​ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.