AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಚಿರತೆ, ಜಿಂಕೆಗಳ ಸರಣಿ ಸಾವು: ಇದೊಂದು ಆಘಾತಕಾರಿ ಹಾಗೂ ದುಃಖದ ವಿಷಯ: ಸಚಿವ ಈಶ್ವರ ಖಂಡ್ರೆ

ಪ್ರಾಣಿ- ಪಕ್ಷಿ ಪ್ರಿಯರ ನೆಚ್ಚಿನ ತಾಣ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳ ಸರಣಿ ಸಾವು ಸಂಭವಿಸುತ್ತಿದೆ. ಮಾರಕ ವೈರಸ್​ನಿಂದ ಚಿರತೆ ಮರಿಗಳ ಸಾವಿನ ಪ್ರಕರಣ ಮಾಸುವ ಮುನ್ನವೇ ಜಿಂಕೆಗಳ ಸರಣಿ ಸಾವು ಬನ್ನೇರುಘಟ್ಟ ಜೈವಿಕ ಉದ್ಯಾನದ ಆಡಳಿತ ವರ್ಗದ ಚಿಂತೆಗೆ ಕಾರಣವಾಗಿದೆ. ಚಿರತೆ, ಜಿಂಕೆಗಳ ಸರಣಿ ಸಾವು ಇದೊಂದು ಆಘಾತಕಾರಿ ಹಾಗೂ ದುಃಖದ ವಿಷಯ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಚಿರತೆ, ಜಿಂಕೆಗಳ ಸರಣಿ ಸಾವು: ಇದೊಂದು ಆಘಾತಕಾರಿ ಹಾಗೂ ದುಃಖದ ವಿಷಯ: ಸಚಿವ ಈಶ್ವರ ಖಂಡ್ರೆ
ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 21, 2023 | 4:57 PM

Share

ಆನೇಕಲ್, ಸೆಪ್ಟೆಂಬರ್​ 21: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನ (Bannerghatta Biological Park) ದಲ್ಲಿ ಚಿರತೆ, ಜಿಂಕೆಗಳ ಸರಣಿ ಸಾವು ಇದೊಂದು ಆಘಾತಕಾರಿ ಹಾಗೂ ದುಃಖದ ವಿಷಯ. ಚಿರತೆ, ಜಿಂಕೆಗಳ ಸಾವಿಗೆ ಕಾರಣ ಏನೆಂದು ಪರಿಶೀಲನೆ ನಡೆಸಲಾಗಿದೆ. ಇಂತಹ ಸಾವು ಮತ್ತೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬನ್ನೇರುಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಲಾಗಿದೆ ಎಂದರು.

ಚಿರತೆಗಳು ವೈರಸ್ ಸೋಂಕಿನಿಂದ ಮೃತಪಟ್ಟಿವೆ. ಅಧಿಕಾರಿಗಳಿಗೆ ತಿಳಿದ ಕೂಡಲೇ ಚಿರತೆಗಳಿಗೆ ವ್ಯಾಕ್ಸಿನ್ ನೀಡಿದ್ದಾರೆ. ಈಗ ಬಹಳಷ್ಟು ಚಿರತೆಗಳು ಗುಣಮುಖಗೊಂಡು ಆರೋಗ್ಯವಾಗಿವೆ. ಮುಂದೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸೂತಕದ ಛಾಯೆ: 7 ಚಿರತೆ ಮರಿ ಸಾವು ಬೆನ್ನಲ್ಲೇ 13 ಚಿಂಕೆಗಳು ಬಲಿ

16 ಜಿಂಕೆಗಳು ಬ್ಯಾಕ್ಟೀರಿಯಾದಿಂದ ಮೃತಪಟ್ಟಿವೆ. ಪ್ರಕರಣದ ಸಂಪೂರ್ಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಾಕು ಬೆಕ್ಕಿನಿಂದ ಸೋಂಕು ಬನ್ನೇರುಘಟ್ಟದ ಚಿರತೆಗೆ ಹರಡಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿತ್ತು. ಅಧಿಕಾರಿಗಳಿಗೂ ಸೂಚನೆ ನೀಡಿ ಪ್ರಕರಣದ ವರದಿ ಕೇಳಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕಳೆದೊಂದು ವಾರದಿಂದ ಪ್ರಾಣಿಗಳ ಸರಣಿ ಸಾವು ಸಂಭವಿಸುತ್ತಿವೆ. ಮಾರಕ ವೈರಸ್​ಗೆ ತುತ್ತಾಗಿ ಏಳು ಚಿರತೆ ಮರಿಗಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಸಸ್ಯಹಾರಿ ಸಫಾರಿಯಲ್ಲಿದ್ದ ಜಿಂಕೆಗಳ ಸರಣಿ ಸಾವಾಗುತ್ತಿದೆ. ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಯ ಉದ್ಯಾನವನದಲ್ಲಿದ್ದ 37 ಜಿಂಕೆಗಳು ಕಿರಿದಾದ ಜಾಗದಲ್ಲಿ ಸರಿಯಾದ ಆರೈಕೆ ಹಾಗೂ ಆಹಾರದ ಸಮಸ್ಯೆಯಿಂದಾಗಿ ಬಳಲಿದ್ದವು. ಈ ಹಿನ್ನೆಲೆ ಅವುಗಳನ್ನ ಕಳೆದ ಆಗಸ್ಟ್ 17 ರಂದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರ ಮಾಡಲಾಗಿತ್ತು.

ಇದನ್ನೂ ಓದಿ: ಆನೇಕಲ್​: 15 ಜಿಂಕೆಗಳ ಸಾವು, ಬನ್ನೇರುಘಟ್ಟದಲ್ಲಿ ಸೂತಕದ ಛಾಯೆ

ಕಳೆದ ಏಳೆಂಟು ದಿನಗಳಿಂದ ಬನ್ನೇರುಘಟ್ಟದ ಸಸ್ಯಹಾರಿ ಸಫಾರಿಯ ಕ್ವಾರೆಂಟೈನ್ ಜಾಗದಲ್ಲಿ ಜಿಂಕೆಗಳನ್ನ ನೋಡಿಕೊಳ್ಳಲಾಗಿತ್ತು. ಬಳಿಕ ಅವುಗಳನ್ನ ಸಸ್ಯಹಾರಿ ಸಫಾರಿಗೆ ಬಿಟ್ಟಿದ್ದು, ಹಿಂಡುಗಳ ಕಾದಾಟ ಹಾಗೂ ಜಂತುಹುಳು ಸಮಸ್ಯೆಯಿಂದ 37 ಜಿಂಕೆಗಳ ಪೈಕಿ 15 ಜಿಂಕೆಗಳು ಸರಣಿ ಸಾವನ್ನಪ್ಪಿವೆ. ಮೃತಪಟ್ಟ ಜಿಂಕೆಗಳ ಹೊಟ್ಟೆಯ ಕೆಲಭಾಗದಲ್ಲಿ ಭಾರಿ ಗಾತ್ರದ ಊತ ಕಾಣಿಸಿಕೊಂಡಿದ್ದು, ಅವುಗಳ ಮರಣೋತ್ತರ ಪರೀಕ್ಷೆ ನಡೆಸಿ ವರದಿಯ ನಿರೀಕ್ಷೆಯಲ್ಲಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಕಾನೂನು ತಜ್ಞರ ಜೊತೆ ಮಾತುಕತೆ ನಡೆಸಿದ್ದಾರೆ. ರೈತರ ಜೊತೆಯಲ್ಲೂ ಚರ್ಚೆ ಮಾಡಿ ಆದಷ್ಟು ಬೇಗ ಒಂದು ತೀರ್ಮಾನ ತೆಗೆದುಕೊಳ್ಳಲಾಗುತ್ತೆ. 195 ತಾಲ್ಲೂಕು ಬರ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. ಈ ಬಾರಿ ಮಳೆ ಸರಿಯಾಗಿ ಆಗಿಲ್ಲ, ಎಲ್ಲಾ ಜಲಾಶಯದಲ್ಲಿ ನೀರಿನ ಕೊರತೆ ಇದೆ. ಇಂತಹ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯ ಇದನ್ನ ಗಂಭೀರವಾಗಿ ಪರಿಗಣಿಸಿಬೇಕು ಎಂದರು.

ಕರ್ನಾಟಕದ ಜನರಿಗೆ ಕಾವೇರಿ ನೀರಿನ ಬಗ್ಗೆ ಕಳಕಳಿ ಇದೆ. ನಮ್ಮ ನೀರು ನಮ್ಮ ಹಕ್ಕು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದು. ರೈತರ ದೃಷ್ಟಿಯಲ್ಲಿ ಕಾಂಗ್ರೆಸ್ ಸರ್ಕಾರ ಕಟ್ಟಬದ್ಧವಾಗಿದೆ. ರೈತರ ಹಿತ ದೃಷ್ಟಿ ಕಾಪಾಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:50 pm, Thu, 21 September 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ