Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ತಾಂತ್ರಿಕ ದೋಷ, ಹಸಿರು ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ತಾಂತ್ರಿಕ ದೋಷದಿಂದಾಗಿ ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ಕಾರ್ಯಾಚರಿಸಬೇಕಿದ್ದ ಮೆಟ್ರೋ ಸಂಚಾರ ಇನ್ನೂ ಆರಂಭವಾಗಿಲ್ಲ.

Namma Metro: ತಾಂತ್ರಿಕ ದೋಷ, ಹಸಿರು ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ನಮ್ಮ ಮೆಟ್ರೋ
Follow us
ನಯನಾ ರಾಜೀವ್
|

Updated on:Apr 23, 2023 | 8:10 AM

ತಾಂತ್ರಿಕ ದೋಷದಿಂದಾಗಿ ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ(Namma Metro) ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ಕಾರ್ಯಾಚರಿಸಬೇಕಿದ್ದ ಮೆಟ್ರೋ ಸಂಚಾರ ಇನ್ನೂ ಆರಂಭವಾಗಿಲ್ಲ. ಹಸಿರು ಮಾರ್ಗ ಅಂದರೆ ರೇಷ್ಮೆ ಸಂಸ್ಥೆಯಿಂದ ನಾಗಸಂದ್ರ ಮಾರ್ಗದಲ್ಲಿ ಪ್ರತಿ ನಿತ್ಯ ಬೆಳಗ್ಗೆ 5.30ಕ್ಕೆ ನಮ್ಮ ಮೆಟ್ರೋ ಸಂಚಾರ ಆರಂಭವಾಗಿ ರಾತ್ರಿ 11ಕ್ಕೆ ಕೊನೆಗೊಳ್ಳುತ್ತದೆ, ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ಸಂಚರಿಸಲಿದೆ.

ಭಾನುವಾರ ಮಾತ್ರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಶುರುವಾಗಿ ರಾತ್ರಿ 11 ಗಂಟೆಯವರೆಗೆ ಸಂಚರಿಸುತ್ತಿತ್ತು. ಆದರೆ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಬೇಕಿದ್ದ ಮೆಟ್ರೋ ತಾಂತ್ರಿಕ ದೋಷದಿಂದಾಗಿ ಕಾರ್ಯಾಚರಣೆ ಆರಂಭಿಸಿಲ್ಲ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:05 am, Sun, 23 April 23