ಹಳಿ ತಪ್ಪಿದ ರೀ ರೈಲ್: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ

Bengaluru Namma Metro: ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 03) ಬೆಳಗ್ಗೆಯಿಂದ ಹಸಿರು ಮಾರ್ಗದ ಬೆಂಗಳೂರು ನಮ್ಮ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಹಸಿರು ಮಾರ್ಗದ ಯಾವೆಲ್ಲ ಸ್ಟೇಷನ್​ಗೆ ಮೆಟ್ರೋ ಇಲ್ಲ? ಎಲ್ಲಿಯವರೆಗೆ ಮೆಟ್ರೋ ಇದೆ ಎನ್ನುವ ವಿವರ ಇಲ್ಲಿದೆ.

ಹಳಿ ತಪ್ಪಿದ ರೀ ರೈಲ್: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ
ನಮ್ಮ ಮೆಟ್ರೋ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 03, 2023 | 8:11 AM

ಬೆಂಗಳೂರು, (ಅಕ್ಟೋಬರ್ 03): ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 03) ಬೆಳಗ್ಗೆಯಿಂದ ಹಸಿರು ಮಾರ್ಗದ ಬೆಂಗಳೂರು (Bengaluru) ನಮ್ಮ ಮೆಟ್ರೋ (Namma Metro) ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ವಾಹನವೇ ಹಳಿತಪ್ಪಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣ ಸಮೀಪದ ಕರ್ವ್ ನಲ್ಲಿ ಈ ಘಟನೆ ನಡೆದಿದೆ. ಹೀಗಾಗಿ ಗ್ರೀನ್ ಲೈನ್​ನಲ್ಲಿ ನಮ್ಮ ಮೆಟ್ರೋ ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ. ಇದೆರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ.

ರೀ ರೈಲ್ ಟ್ರ್ಯಾಕ್ ತಪ್ಪಿದ್ದರಿಂದ ಶ್ರೀರಾಮಂಪುರ, ಕುವೆಂಪು, ರಾಜಾಜಿನಗರ, ಮಹಾಲಕ್ಷ್ಮೀ, ಸ್ಯಾಂಡಲ್​ ಸೋಪ್ ಫ್ಯಾಕ್ಟರಿ ನಡುವೆ ಮೆಟ್ರೋ ಸೇವೆ ಸಂಚಾರ ಇರುವುದಿಲ್ಲ, ಇನ್ನುಳಿಂದತೆ ಸದ್ಯ ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದ ನಡುವೆ ಮಾತ್ರ ರೈಲು ಸೇವೆಗಳು ಲಭ್ಯವಿರುತ್ತವೆ. ಹೀಗಾಗಿ ಮೆಟ್ರೋ ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್​ಸಿಎಲ್​ ಮನವಿ ಮಾಡಿದೆ.

ಇದನ್ನೂ ಓದಿ: ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ

ರೀ ರೈಲ್ ವಾಹನವನ್ನು‌ ಹಳಿಗೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಹೀಗಾಗಿ ಪ್ರಯಾಣಿಕರಿಗೆ ಭಾರೀ ಅನಾನುಕೂಲ ಉಂಟಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:54 am, Tue, 3 October 23

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​