AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ!

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್‌ಡಿಎಫ್‌ಸಿ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಹಸನ್ ಸಾಬ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಮತ್ತು ತಾಂತ್ರಿಕ ದಾಖಲೆಗಳ ಆಧಾರದ ಮೇಲೆ ಬಂಧಿಸಲಾದ ಆರೋಪಿ, ಸಾಲ ತೀರಿಸಲು ಕಳ್ಳತನಕ್ಕೆ ಯತ್ನಿಸಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಮುಂದಿನ ವಿಚಾರಣೆ ಮುಂದುವರಿದಿದೆ.

ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ!
ಕಳ್ಳತನ
ಅಕ್ಷಯ್​ ಪಲ್ಲಮಜಲು​​
|

Updated on: Feb 24, 2026 | 10:10 PM

Share

ಬೆಂಗಳೂರು, ಫೆ.24: ಶನಿವಾರ ಬೆಳಗಿನ ಜಾವ ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್.ಡಿ.ಎಫ್.ಸಿ (HDFC) ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಸಿದ್ದ ಆರೋಪಿಯನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶೇಷಾದ್ರಿಪುರಂ ನಿವಾಸಿ ಹಸನ್ ಸಾಬ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಹಸನ್ ಸಾಬ್, ಶೇಷಾದ್ರಿಪುರಂನ ಕೆನರಾ ಬ್ಯಾಂಕ್‌ನ ಗ್ರಿಲ್ ಕಟ್ ಮಾಡಿ ಒಳಗೆ ನುಗ್ಗಿದ್ದನು. ಆದರೆ, ಬ್ಯಾಂಕ್‌ನಲ್ಲಿದ್ದ ಸೆಕ್ಯೂರಿಟಿ ಸೈರನ್ ಮೊಳಗಿದೆ ಗಾಬರಿಗೊಂಡು ಏನನ್ನೂ ಕಡಿಯಲಾಗದೆ ಅಲ್ಲಿಂದ ಓಡಿಹೋಗಿದ್ದನು.

ಇದರ ನಂತರ ಆರೋಪಿಯು ಕಬ್ಬನ್‌ಪೇಟೆಯಲ್ಲಿರುವ ಹೆಚ್.ಡಿ.ಎಫ್.ಸಿ ಬ್ಯಾಂಕ್ ಎಟಿಎಂನಲ್ಲೂ ಕಳ್ಳತನ ಮಾಡಿದ್ದಾನೆ ತನಿಖೆಯಿಂದ ತನಿಖೆಗೆ ಯತ್ನಿಸಿದ್ದ. ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ದಾಖಲೆಗಳ ಆಧಾರದ ಮೇಲೆ ಶೇಷಾದ್ರಿಪುರಂ ಪೊಲೀಸರು ಹಸನ್ ಸಾಬ್ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ, “ತನ್ನ ಮೇಲಿರುವ ಸಾಲವನ್ನು ತೀರಿಸಲು ಬೇರೆ ದಾರಿ ಕಾಣದೆ ಈ ಕಳ್ಳತನಕ್ಕೆ ಕೈ ಹಾಕಿದ್ದೆ” ಎಂದು ಆರೋಪಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಬೆಡ್​​​​​ ರೂಮ್​​ನಲ್ಲಿ ಹೆಂಡತಿ ಜತೆ ಮತ್ತೊಬ್ಬ ಗಂಡಸನ್ನು ನೋಡಿ ಪ್ರಜ್ಞೆ ತಪ್ಪಿದ ಪತಿ: ಕ್ಷಮಿಸು ಎಂದು ಗೋಳಾಡಿದ ಪತ್ನಿ

ಸದ್ಯ ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ, ಈ ಹಿಂದೆ ಬೇರೆ ಯಾವುದಾದರೂ ಕೃತ್ಯಗಳಲ್ಲಿ ಭಾಗವಹಿಸಿದ್ದಾನೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ವರದಿ: ಪ್ರದೀಪ್​​​​​ ಟಿವಿ9 ಬೆಂಗಳೂರು

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More