ನಿವೃತ್ತ ನ್ಯಾಯಾಂಗ ಅಧಿಕಾರಿಯ ಕೊಲೆ ಮಾಡಿ ಸರ ಕದ್ದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿದ ಸೆಷನ್ಸ್ ನ್ಯಾಯಾಲಯ

014ರ ಡಿಸೆಂಬರ್ 17ರಂದು ಹ್ಯಾಮರ್ ನಿಂದ ಹೊಡೆದು ರಾಘವೇಂದ್ರನ ಹತ್ಯೆ ಮಾಡಿದ್ದ. ರಾಘವೇಂದ್ರ ಪತ್ನಿ ಸುಧಾಕುಮಾರಿಗೂ ಹ್ಯಾಮರ್ ನಿಂದ ಹಲ್ಲೆ ಮಾಡಿ ಕೊಲೆ ಯತ್ನ ಮಾಡಿದ್ದ. ರಾಘವೇಂದ್ರ ಅವರ ಕತ್ತಿನಲ್ಲಿದ್ದ ಸರ, ಸುಧಾ ಅವರ 30 ಗ್ರಾಂ ಮಾಂಗಲ್ಯಸರ ಕದ್ದು ರಾಮಾಂಜನೇಯ ಪರಾರಿಯಾಗಿದ್ದ.

ನಿವೃತ್ತ ನ್ಯಾಯಾಂಗ ಅಧಿಕಾರಿಯ ಕೊಲೆ ಮಾಡಿ ಸರ ಕದ್ದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿದ ಸೆಷನ್ಸ್ ನ್ಯಾಯಾಲಯ
ಅಪರಾಧಿ ರಾಮಾಂಜನೇಯ
Follow us
TV9 Web
| Updated By: ಆಯೇಷಾ ಬಾನು

Updated on:Aug 16, 2022 | 8:00 PM

ಬೆಂಗಳೂರು: 2014ರಲ್ಲಿ ನಡೆದಿದ್ದ ಬನಶಂಕರಿಯ ರಾಘವೇಂದ್ರ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ರಾಮಾಂಜನೇಯನಿಗೆ ಜೀವಾವಧಿ ಶಿಕ್ಷೆ(Life Imprisonment) ನೀಡಿ ಬೆಂಗಳೂರಿನ 62ನೇ ಸೆಷನ್ಸ್ ನ್ಯಾಯಾಲಯ(Sessions Court) ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ

ಆಂಧ್ರಪ್ರದೇಶ ಮೂಲದ ಅಪರಾಧಿ ರಾಮಾಂಜನೇಯ ಬೆಂಗಳೂರಿನಲ್ಲಿ ಶೌಚಾಲಯ ಸ್ವಚ್ಚಗೊಳಿಸುವ ಕೆಲಸ ಮಾಡುತ್ತಿದ್ದ. ವಾರಕ್ಕೊಮ್ಮೆ ಇಟ್ಟಮಡು 10ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ನಿವೃತ್ತ ನ್ಯಾಯಾಂಗ ಅಧಿಕಾರಿ ರಾಘವೇಂದ್ರ ರಾವ್ ಮನೆಗೆ ಬಂದು ಶೌಚಾಲಯ ಸ್ವಚ್ಚಗೊಳಿಸುತ್ತಿದ್ದ. ಆದ್ರೆ 2014ರ ಡಿಸೆಂಬರ್ 17ರಂದು ಹ್ಯಾಮರ್ ನಿಂದ ಹೊಡೆದು ರಾಘವೇಂದ್ರನ ಹತ್ಯೆ ಮಾಡಿದ್ದ. ರಾಘವೇಂದ್ರ ಪತ್ನಿ ಸುಧಾಕುಮಾರಿಗೂ ಹ್ಯಾಮರ್ ನಿಂದ ಹಲ್ಲೆ ಮಾಡಿ ಕೊಲೆ ಯತ್ನ ಮಾಡಿದ್ದ. ರಾಘವೇಂದ್ರ ಅವರ ಕತ್ತಿನಲ್ಲಿದ್ದ ಸರ, ಸುಧಾ ಅವರ 30 ಗ್ರಾಂ ಮಾಂಗಲ್ಯಸರ ಕದ್ದು ರಾಮಾಂಜನೇಯ ಪರಾರಿಯಾಗಿದ್ದ.

ಬಳಿಕ ಸಮೀಪದಲ್ಲೇ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದ ರಾಘವೇಂದ್ರರ ಮಗ ಮಧುಸೂದನ್ ಅಪ್ಪ-ಅಮ್ಮನನ್ನು ನೋಡಲು ಅದೇ ದಿನದ ರಾತ್ರಿ 7.30ಕ್ಕೆ ಮನೆಗೆ ಬಂದಿದ್ದಾರೆ. ಆಗ ಕೃತ್ಯ ಬಯಲಾಗಿದೆ. ನಂತರ ಈ ಬಗ್ಗೆ ಸಿ.ಕೆ ಅಚ್ಚು ಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರು ಆಧರಿಸಿ ರಾಮಾಂಜನೇಯನನ್ನ ತನಿಖಾಧಿಕಾರಿ ಬಿ.ಕೆ ಶೇಖರ್ ಬಂಧಿಸಿದ್ದರು. ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆಹಾಕಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಸದ್ಯ ಆರೋಪಿಗೆ ಜೀವಾವಾಧಿ ಶಿಕ್ಷೆ ನೀಡಿ 62ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಧೀಶರಾದ ಎ.ಈರಣ್ಣ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇದನ್ನು ಕ್ಲಿಕ್ ಮಾಡಿ

Published On - 7:57 pm, Tue, 16 August 22

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ