ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆ

ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ತೆರಿಗೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್​ಗೆ ಬಿಬಿಎಂಪಿ ಬೀಗ ಜಡಿದಿತ್ತು. ಆದ್ರೆ, ಇದೀಗ ಮಂತ್ರಿ ಮಾಲ್ ಕೋರ್ಟ್ ಮೊರೆ ಹೋಗಿ ಮತ್ತೆ ಬಾಗಿಲು ಓಪನ್ ಮಾಡಿದೆ.

ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆ
ಮಂತ್ರಿ ಮಾಲ್ (ಸಂಗ್ರಹ ಚಿತ್ರ)
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 29, 2023 | 7:03 PM

ಬೆಂಗಳೂರು, (ಡಿಸೆಂಬರ್, 29): ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ (Mantri Square Mall) ಮತ್ತೆ ತೆರೆಯಲು ಕೋರ್ಟ್ ಅವಕಾಶ ನೀಡಿದೆ. ತೆರಿಗೆ ಕಟ್ಟದ ಕಾರಣ ಬಿಬಿಎಂಪಿ(BBMP), ಮಂತ್ರಿ ಮಾಲ್​ಗೆ ಬೀಗ ಹಾಕಿತ್ತು. ಬಿಬಿಎಂಪಿಯ ಈ ನಿರ್ಧಾರವನ್ನು ಪ್ರಶ್ನಿಸಿ ಮಾಂತ್ರಿ ಮಾಲ್ ಆಡಳಿತ ಮಂಡಳಿ ಕೋರ್ಟ್​ನಿಂದ ತಾತ್ಕಾಲಿಕ ತಡೆಯಾಜ್ಞೆ ತಂದಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಅನ್ವಯ ಮತ್ತೆ ಮಂತ್ರಿ ಮಾಲ್ ತೆರೆಯಲು ಬಿಬಿಎಂಪಿ ಅವಕಾಶ ನೀಡಿದೆ. ಇದರೊಂದಿಗೆ ಬಿಬಿಎಂಪಿಗೆ ಹಿನ್ನಡೆಯಾಗಿದೆ.

2019-20ರವರೆಗಿನ ಒಟ್ಟು 51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಮಂತ್ರಿ ಸ್ಕ್ವೇರ್ ಮಾಲ್​ಗೆ ಬಿಬಿಎಂಪಿ ಬೀಗ ಜಡಿದಿತ್ತು. ಖುದ್ದು ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್​ ಅವರು ಡಿಸೆಂಬರ್ 27ರಂದು ಮಂತ್ರಿ ಮಾಲ್​ಗೆ ತೆರಳಿ ಪ್ರಮುಖ ದ್ವಾರವನ್ನು ಲಾಕ್ ಮಾಡಿದ್ದರು.

ಇದನ್ನೂ ಓದಿ: 51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ

2020ರ ಆಗಸ್ಟ್​​​ನಲ್ಲೇ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರು ಕೂಡ ಮಾಲ್​ನ ಆಡಳಿತ ಮಂಡಳಿ ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ.

ತೆರಿಗೆ ಪಾವತಿಸದ ವಿಚಾರವಾಗಿ ಮಂತ್ರಿ ಸ್ಕ್ವೇರ್ ಮಾಲ್​​ಗೆ ಬಿಬಿಎಂಪಿ ಬೀಗ ಜಡಿಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಬೀಗ ಹಾಕಲಾಗಿತ್ತು. ಈ ಹಿಂದೆ 2021ರಲ್ಲಿಯೂ ಬಿಬಿಎಂಪಿ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಅಲ್ಲದೇ ಮಾಲ್​​ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರೆ ವಸ್ತುಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಂತ್ರಿ ಮಾಲ್ ಬೀಗ ಮುದ್ರೆ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?