AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಸ್​​ ಸಂಸ್ಥೆಗೆ ಹಿನ್ನಡೆ: ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ

ನೈಸ್ ಸಂಸ್ಥೆಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದ್ದು, ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ. ಭೂಸ್ವಾಧೀನ ರದ್ದುಗೊಳಿಸಿ ಏಕಸದಸ್ಯ ಪೀಠ 2025ರ ಜು.4ರಂದು ನೀಡಿದ್ದ ತೀರ್ಪು ಪ್ರಶ್ನಿಸಿ ನೈಸ್‌ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಆದೇಶ ನೀಡಿದ್ದ ಹೈಕೋರ್ಟ್​​, ನೈಸ್ ಯೋಜನೆಯ ಭೂಸ್ವಾಧೀನ ಮತ್ತು ಅಕ್ರಮಗಳ ಕುರಿತು ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನೂ ನೀಡಿತ್ತು. ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ NICE ಕಂಪನಿ ಸುಪ್ರೀಂಕೋರ್ಟ್​​ ಮೊರೆ ಹೋಗಿತ್ತು.

ನೈಸ್​​ ಸಂಸ್ಥೆಗೆ ಹಿನ್ನಡೆ: ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ
ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ Image Credit source: Tv9 Kannada
ಪ್ರಸನ್ನ ಹೆಗಡೆ
|

Updated on:Oct 05, 2026 | 2:09 PM

Share

ದೆಹಲಿ/ಬೆಂಗಳೂರು, ಅಕ್ಟೋಬರ್​​ 05: ನೈಸ್​​ ಸಂಸ್ಥೆಗೆ ಹಿನ್ನೆಡೆಯಾಗಿದ್ದು, ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.ವಿಚಾರಣೆ ನಡೆಸದೆ ಮಧ್ಯಂತರ ತಡೆ ಸಾಧ್ಯವಿಲ್ಲ ಎಂದ ನ್ಯಾಯಾಲಯ, ನವೆಂಬರ್ 2ಕ್ಕೆ ವಿಚಾರಣೆ ಮುಂದೂಡಿದೆ. ಭೂಮಿ ಕಳೆದುಕೊಂಡವರ ಪೈಕಿ ಹಲವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ಯೋಜನೆಗೆ ಈಗಾಗಲೇ 11,000 ಎಕರೆ ಭೂಮಿ ಬಳಕೆ ಆಗಿದೆ ಎಂದು ನೈಸ್ ಪರ ವಕೀಲರು ಕೋರ್ಟ್​​ ಗಮನಕ್ಕೆ ತಂದಿದ್ದರು. ರಾಜ್ಯ ಸರ್ಕಾರವೂ ಅರ್ಜಿ ಸಲ್ಲಿಸಿದ್ದು, ಇದನ್ನು ಪರಿಗಣಿಸುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸುತ್ತೇವೆ ಎಂದು ಸುಪ್ರೀಂಕೋರ್ಟ್​​ ತಿಳಿಸಿದೆ.​​

‘ನೈಸ್​​ ಸಂಸ್ಥೆ ರೈತರಿಗೆ ಪರಿಹಾರ ನೀಡಿಲ್ಲ’

ಇನ್ನು ಸುಪ್ರೀಂ ಕೋರ್ಟ್​​ ತೀರ್ಮಾನದ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ವಕೀಲ ಎಚ್. ಎನ್. ಶಶಿಧರ್ ಅವರು, ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ NICE ಕಂಪನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ, ಮಧ್ಯಂತರ ತಡೆಯನ್ನ ನೀಡಲು ನಿರಾಕರಿಸಿದೆ. 25% ಕೆಲಸ ಮಾಡಿದ್ದವೇವೆ, 1100 ಎಕರೆ ಭೂಮಿ ಬಳಕೆಯಾಗಿದೆ. ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿರುವುದಾಗಿ ನೈಸ್​​ ಸಂಸ್ಥೆ ಹೇಳಿದೆ. ಆದರೆ ವಾಸ್ತವದಲ್ಲಿ ಪರಿಹಾರ ನೀಡಿಲ್ಲ. ಹೀಗಾಗಿ ಈ ಹಂತದಲ್ಲಿ ನೈಸ್ ವಾದವನ್ನ ಸುಪ್ರೀಂಕೋರ್ಟ್ ಪರಿಗಣಿಸಿಲ್ಲ. ರಾಜ್ಯ ಸರ್ಕಾರವೂ ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಎಲ್ಲ ಅರ್ಜಿಗಳನ್ನ ಒಟ್ಟುಗುಡಿಸಿ ಸುಪ್ರೀಂಕೋರ್ಟ್​​ ವಿಚಾರಣೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನೈಸ್ ರಸ್ತೆ ಭೂಸ್ವಾಧೀನ ಪ್ರಕರಣ: ನೂರಾರು ರೈತರಿಗೆ ಹೈಕೋರ್ಟ್ ಬಿಗ್ ರಿಲೀಫ್, ನೈಸ್ ಮೇಲ್ಮನವಿ ವಜಾ

ಭೂಸ್ವಾಧೀನ ರದ್ದುಗೊಳಿಸಿ ಏಕಸದಸ್ಯ ಪೀಠ 2025ರ ಜು.4ರಂದು ನೀಡಿದ್ದ ತೀರ್ಪು ಪ್ರಶ್ನಿಸಿ ನೈಸ್‌ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಆದೇಶ ನೀಡಿದ್ದ ಹೈಕೋರ್ಟ್​​, ನೈಸ್​​ ಯೋಜನೆಯಲ್ಲಿ ರೈತರ ಜಮೀನುಗಳನ್ನು ಸರಿಯಾದ ಪರಿಹಾರವಿಲ್ಲದೆ ಕಿತ್ತುಕೊಳ್ಳಲಾಗಿದೆ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ, ಇದು ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿರಬಹುದು ಎಂದು ಕಳವಳ ವ್ಯಕ್ತಪಡಿಸಿತ್ತು. ನೈಸ್ ಯೋಜನೆಯ ಭೂಸ್ವಾಧೀನ ಮತ್ತು ಅಕ್ರಮಗಳ ಕುರಿತು ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನೂ ನೀಡಿತ್ತು.

ವರದಿ: ನಟರಾಜ್​​, ಟಿವಿ9 ದೆಹಲಿ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:05 pm, Mon, 5 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
10 ಕೆಜಿ ತೂಕದ ಪೇಟ, ಮೋಸಂಬಿ ಹಾರ: ಅರಮನೆಗೆ ಅಭಿಮನ್ಯು ಗ್ರ್ಯಾಂಡ್​​ ಎಂಟ್ರಿ
10 ಕೆಜಿ ತೂಕದ ಪೇಟ, ಮೋಸಂಬಿ ಹಾರ: ಅರಮನೆಗೆ ಅಭಿಮನ್ಯು ಗ್ರ್ಯಾಂಡ್​​ ಎಂಟ್ರಿ
ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ, ಸುಪ್ರೀಂನಲ್ಲಿ ವಿಚಾರಣೆ
ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ, ಸುಪ್ರೀಂನಲ್ಲಿ ವಿಚಾರಣೆ
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ