AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುತೇಕ ಸರ್ಕಾರಿ ವಿಶ್ವ ವಿದ್ಯಾಲಯಗಳಲ್ಲಿಲ್ಲ ಖಾಯಂ ಪ್ರಾಧ್ಯಾಪಕರು: ರಾಜ್ಯದಲ್ಲಿ 4,000ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ!

ರಾಜ್ಯದ ಬಹುತೇಕ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಖಾಯಂ ಪ್ರಾಧ್ಯಾಪಕರ ಕೊರತೆಯಿದ್ದು, 4,000ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುವ ಆರೋಪ ಕೇಳಿಬಂದಿದೆ. ಈ ನಡುವೆ ಶೀಘ್ರದಲ್ಲೇ ನೇಮಕಾತಿ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಭರವಸೆ ನೀಡಿದ್ದಾರೆ.

ಬಹುತೇಕ ಸರ್ಕಾರಿ ವಿಶ್ವ ವಿದ್ಯಾಲಯಗಳಲ್ಲಿಲ್ಲ ಖಾಯಂ ಪ್ರಾಧ್ಯಾಪಕರು: ರಾಜ್ಯದಲ್ಲಿ 4,000ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ!
ಸಾಂದರ್ಭಿಕ ಚಿತ್ರImage Credit source: Getty Images
ವಿನಯ್​ ಕಾಶಪ್ಪನವರ್​
| Edited By: |

Updated on:Sep 17, 2026 | 5:01 PM

Share

ಬೆಂಗಳೂರು, ಸೆಪ್ಟೆಂಬರ್​​ 17: ಉನ್ನತ ಶಿಕ್ಷಣ ಪಡೆಯಲು ಗ್ರಾಮೀಣ ಭಾಗದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅವಲಂಬಿಸುವುದು ಸರ್ಕಾರಿ ವಿಶ್ವ ವಿದ್ಯಾಲಯಗಳನ್ನ. ಆದರೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬಹುತೇಕ ಯೂನಿವರ್ಸಿಟಿಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ ಇಲ್ಲದಂತಾಗಿರೋದು ವಿದ್ಯಾರ್ಥಿಗಳ ಕಲಿಕೆ ಕುಂಠಿತವಾಗಿರುವ ಜೊತೆಗೆ, ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ, ನೃಪತುಂಗ ವಿವಿ, ಕೇಂದ್ರ ವಿವಿ ಹಾಗೂ ಮಹಾರಾಣಿ ಕ್ಲಸ್ಟರ್ ವಿವಿ ಸೇರಿದಂತೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಪಾಠ ಹೇಳಿಕೊಡುವ ಗುರುಗಳೇ ಇಲ್ಲದಂತಾಗಿದೆ. ವಿದ್ಯಾರ್ಥಿಗಳಿಗೆ ಕೇವಲ ಅತಿಥಿ ಶಿಕ್ಷಕರಿಂದ ಪಾಠ ಕೇಳುವ ಭಾಗ್ಯ ದೊರೆತಿದೆ. ರಾಜ್ಯದಲ್ಲಿ ಸರಿಸುಮಾರು 4,000ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ ಇರುವ ಪರಿಣಾಮ, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಶೀಘ್ರ ಪ್ರಾಧ್ಯಾಪಕರ ನೇಮಕಾತಿಗೆ ಒತ್ತಾಯ

ಪದವಿ ಕೋರ್ಸ್ ಮುಗಿಸಿ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಸ್ನಾತಕೋತ್ತರ ಪದವಿಗೆ ದಾಖಲಾತಿ ಪಡೆಯುವ ವಿಧ್ಯಾರ್ಥಿಗಳು ಸಾಕಷ್ಟು ಕನಸುಗಳನ್ನು ಹೊತ್ತು ಬಂದಿರ್ತಾರೆ. ಜ್ಞಾನ ದೇಗುಲ ಎಂದೇ ಕರೆಸಿಕೊಳ್ಳುವ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಮಟ್ಟದ ಜ್ಞಾನ ಸಿಗುತ್ತೆ ಅನ್ನೋ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆದರೆ ವಿದ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಬೋಧನಾ ಸಿಬ್ಬಂದಿ ಪೂರೈಸದ ಸರ್ಕಾರದ ನಡೆ ವಿದ್ಯಾರ್ಥಿಗಳ ಬೇಸರಕ್ಕೆ ಕಾರಣವಾಗಿದೆ. ಹೀಗಾಗಿ ಆದಷ್ಟು ಬೇಗ ಪ್ರಾಧ್ಯಾಪಕರ ನೇಮಕಾತಿ‌ ಮಾಡುವಂತೆ ಒತ್ತಾಯ ಕೇಳಿಬಂದಿದೆ.

LIVE TV

ಇದನ್ನೂ ಓದಿ: ಗುಡ್ ನ್ಯೂಸ್: ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆ

ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಭರವಸೆ

ಈ ನಡುವೆ ರಾಜ್ಯದ ವಿವಿಗಳಿಗೆ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಭೇಟಿ ನೀಡಿ, ಸ್ಥಿತಿಗತಿಗಳ ಕುರಿತು ಚರ್ಚೆ ನಡೆಸಲು ಮುಂದಾಗಿದ್ದಾರೆ. ಜೊತೆಗೆ ರಾಜ್ಯದ 410 ಪ್ರಥಮ ದರ್ಜೆ ಕಾಲೇಜುಗಳಿಗೆ ಖಾಯಂ ಪ್ರಾಂಶುಪಾಲರು ಇರಲಿಲ್ಲ. ಹೀಗಾಗಿ ಇನ್ನೊಂದು ವಾರದಲ್ಲಿ 320 ಕಾಲೇಜಿಗೆ ಪ್ರಾಂಶುಪಾಲರ ನೇಮಕ ಮಾಡಲು ಇಲಾಖೆ ಮುಂದಾಗಿದೆ. 1 ಸಾವಿರ ಪ್ರೊಫೆಸರ್​​ಗಳನ್ನು ವಿಶ್ವವಿದ್ಯಾಲಯಕ್ಕೆ, 2 ಸಾವಿರ ಪ್ರಾಧ್ಯಾಪಕರನ್ನು ಕಾಲೇಜುಗಳಿಗೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಇದಕ್ಕೆ ಹಣಕಾಸು ಇಲಾಖೆಯೂ ಒಪ್ಪಿಗೆ ನೀಡಿದ್ದು, ಆದಷ್ಟು ಬೇಗ ಕರ್ನಾಟಕ ಪ್ರರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಲಾಗುವುದು ಎಂದು ಟಿವಿ9ಗೆ ಸಚಿವರು ಭರವಸೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:00 pm, Thu, 17 September 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’