AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 20ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್, ನಿರಾಸೆಯಿಂದ ಮನೆಯತ್ತ ಹೆಜ್ಜೆ ಹಾಕಿದ ರೇವಣ್ಣ

ಸಂತ್ರಸ್ತೆ ಅಪಹರಣ ಆರೋಪ ಪ್ರಕರಣದಲ್ಲಿ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣಗೆ ಜಾಮೀನು ಸಿಕ್ಕ ಬೆನ್ನಲ್ಲೇ ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಆದ್ರೆ, ಕಳೆದ ಎರಡು ದಿನಗಳಿಂದ ಕೋರ್ಟ್​ನಲ್ಲಿ ಎಸ್​ಐಟಿ ಮತ್ತು ರೇವಣ್ಣ ಪರ ವಕೀಲರಿಂದ ವಾದ ಪ್ರತಿವಾದ ನಡೆದಿದ್ದು, ಇದೀಗ ಅಂತಿಮವಾಗಿ ನ್ಯಾಯಾಲಯವು ತೀರ್ಪು ಕಾಯ್ದಿಸಿದೆ.

ಮೇ 20ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್, ನಿರಾಸೆಯಿಂದ ಮನೆಯತ್ತ ಹೆಜ್ಜೆ ಹಾಕಿದ ರೇವಣ್ಣ
ಹೆಚ್​ಡಿ ರೇವಣ್ಣ
Ramesha M
| Edited By: |

Updated on:May 17, 2024 | 5:46 PM

Share

ಬೆಂಗಳೂರು, (ಮೇ 17): ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ (HD Revanna) ಅವರು ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದುಕೊಮಡು ಜೈನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರೇವಣ್ಣಗೆ ನಿರಾಸೆಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ​42ನೇ ಎಸಿಎಂಎಂ ನ್ಯಾಯಾಲಯವು ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಕಳೆದ ಎರಡು ದಿನಗಳಿಂದ ಎಸ್​ಐಟಿ ಹಾಗೂ ರೇವಣ್ಣ ಪರ ವಕೀಲರಿಂದ ವಾದ-ಪ್ರತಿವಾದ ಆಲಿಸಿದ್ದು, ಇದೀಗ ಅಂತಿಮವಾಗಿ ಕೋರ್ಟ್​ ರೇವಣ್ಣ ಅವರ ಜಾಮೀನು ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಇದರೊಂದಿಗೆ ಇದರೊಂದಿಗೆ ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆಯಾಗಿದೆ.

ಮೇ 20ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ್ದರಿಂದ ಎಚ್​ಡಿ ರೇವಣ್ಣ ಅವರು ನ್ಯಾಯಾಲಯದ ಅನುಮತಿ ಪಡೆದುಕೊಂಡು ಬೇಲ್​ ಸಿಗುತ್ತೋ ಇಲ್ವೋ ಎನ್ನುವ ಟೆನ್ಷನ್​ನಲ್ಲಿ ಮನೆಯತ್ತ ಹೆಜ್ಜೆ ಹಾಕಿದರು. ನಿನ್ನೆ(ಮೇ 16) ಜಾಮೀನು ಅರ್ಜಿಯ ವಾದ-ಪ್ರತಿವಾದ ಆಲಿಸಿದ್ದ  ಕೋರ್ಟ್​, ಒಂದು ದಿನ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ಅದನ್ನು ಸೋಮವಾರದ ವರೆಗೆ ವಿಸ್ತರಿಸಿದೆ.

ಇದನ್ನೂ ಓದಿ: ಮತ್ತೊಂದು ಪ್ರಕರಣದಲ್ಲಿ ರೇವಣ್ಣಗೆ ತಾತ್ಕಾಲಿಕ ರಿಲೀಫ್, ಒಂದು ದಿನದ ಮಟ್ಟಿಗೆ ಜಾಮೀನು ನೀಡಿದ ಕೋರ್ಟ್

ಪ್ರಜ್ವಲ್ ​ಪೆನ್​ಡ್ರೈವ್​ ಪ್ರಕರಣದಲ್ಲಿ ರೇವಣ್ಣ ಎ1 ಆರೋಪಿ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ (ಏ.26)ಕ್ಕೂ ಮುನ್ನ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್​ ವಿಡಿಯೋಗಳ ಪೆನ್​ಡ್ರೈವ್​ ಹಾಸನ ಜಿಲ್ಲೆಯಲ್ಲಿ ಹರಿದಾಡಲು ಆರಂಭಿಸಿತು. ಈ ಸಂಬಂಧ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ನಡುವೆ ತಮ್ಮ ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆ ನರಸೀಪುರ ಪೊಲೀಸ್​ ಠಾಣೆಯಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಶಾಸಕ ರೇವಣ್ಣ ಎ1 ಆರೋಪಿಯಾಗಿದ್ದರೆ, ಪುತ್ರ ಪ್ರಜ್ವಲ್ ಎ2 ಆರೋಪಿಯಾಗಿದ್ದಾರೆ. ಇನ್ನು ಈ ಪ್ರಕರಣ ಸಾಕಷ್ಟು ಸುದ್ದಿಯಾಗುತ್ತಿದ್ದಂತೆ, ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ದಳ (SIT) ರಚಿಸಿದೆ. ಇದೀಗ ಎಸ್​ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆದ್ರೆ, ಎ2 ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Fri, 17 May 24

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?