ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ: ಶಿಕ್ಷಕನ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

|

Updated on: May 26, 2023 | 10:20 PM

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕ ಸಿ. ಮಂಜುನಾಥ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ: ಶಿಕ್ಷಕನ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಶಿಕ್ಷಕ ಮಂಜುನಾಥ
Follow us on

ಬೆಂಗಳೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ (sexual harassment) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕ ಸಿ. ಮಂಜುನಾಥ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಗುರುವನ್ನ ದೇವರೆಂದು ಭಾವಿಸುವ ದೇಶವಿದು. ಈ ಶಿಕ್ಷಕನ ಕೃತ್ಯದಿಂದ ಹೆಣ್ಣುಮಕ್ಕಳ‌ ಶಿಕ್ಷಣಕ್ಕೆ ಧಕ್ಕೆಯಾಗಬಹುದು. ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂಜರಿಯಬಹುದು. ಹೀಗಾಗಿ ಜಾಮೀನಿಗೆ ಅರ್ಹನಲ್ಲವೆಂದು ನ್ಯಾ. ಉಮೇಶ್ ಎಂ.ಅಡಿಗ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಗ್ರಾಮವೊಂದರ ನಿವಾಸಿಗಳು ಮಧುಗಿರಿ ಬಿಇಒಗೆ ಮಾಹಿತಿ ನೀಡಿದ್ದರು. ಹಲವು ವಿದ್ಯಾರ್ಥಿನಿಯರು ಶಿಕ್ಷಕನ ದುರ್ವರ್ತನೆ ಬಗ್ಗೆ ಸಹ ಹೇಳಿಕೆ ನೀಡಿದ್ದರು. ಮಾ. 27ರಂದು ಸಹಾಯಕ ಶಿಕ್ಷಕನಾಗಿದ್ದ ಸಿ.ಮಂಜುನಾಥ್​ನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ತುಮಕೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಇಬ್ಬರು ಶಿಕ್ಷಕರು ಅಮಾನತು

ಮಂಜುನಾಥನ ಕಾಮಚೇಷ್ಟೆ‌ ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ಹಾಗೂ ಬುಡವನಹಳ್ಳಿ ಪೊಲೀಸ್​ ಇನ್ಸ್​ಪೆಕ್ಟರ್​ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಅವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದರು. ಬಳಿಕ ಬಿಇಒ, ಶಿಕ್ಷಕ ಮಂಜುನಾಥನನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಇದರ ಜೊತೆಗೆ ಕರ್ತವ್ಯಲೋಪ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಅವರನ್ನು ಸಹ ಸಸ್ಪೆಂಡ್ ಮಾಡಿದ್ದರು.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಕಾಮುಕ ಶಿಕ್ಷಕನಿಗೆ ಸ್ಥಳೀಯರಿಂದ ಧರ್ಮದೇಟು

ದಾವಣಗೆರೆ: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ನೀಡಿದ್ದು, ಸ್ಥಳೀಯರು ಶಿಕ್ಷಕನಿಗೆ ಗೂಸಾ ನೀಡಿರುವಂತಹ ಘಟನೆ ಇತ್ತೀಚೆಗೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಯರಗಟ್ಟೆಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಲೋಕೇಶ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಥಮಿಕ ಶಾಲೆ ಶಿಕ್ಷಕ. ಈ ವಿಚಾರವನ್ನು ವಿದ್ಯಾರ್ಥಿನಿಯರು ಮನೆಯಲ್ಲಿ ಹೇಳಿದ ಹಿನ್ನೆಲೆ ಶಾಲೆಗೆ ಬಂದು ಆರೋಪಿ ಶಿಕ್ಷಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದರು.

ಕೆಲ ದಿನಗಳಿಂದ ವಿದ್ಯಾರ್ಥಿಯರಿಗೆ ಶಿಕ್ಷಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿತ್ತು. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:19 pm, Fri, 26 May 23