ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್

ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್
ಬಿಎಸ್ ಯಡಿಯೂರಪ್ಪ
Edited By:

Updated on: Mar 15, 2024 | 9:31 AM

ಬೆಂಗಳೂರು, ಮಾ.15: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತಡರಾತ್ರಿ ಪ್ರಯಾಣಿಸುತ್ತಿದ್ದ ಮಹಿಳೆಗೆ KSRTC ಬಸ್​ನಲ್ಲಿ ಕಂಡಕ್ಟರ್​ನಿಂದ ಲೈಂಗಿಕ ಕಿರುಕುಳ

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಡ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.

53 ಮಂದಿ ವಿರುದ್ಧ ದೂರು ನೀಡಿದ ಮಹಿಳೆ

ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Fri, 15 March 24