Karnataka Hijab Verdict: ಹಿಜಾಬ್ ವಿವಾದ ಹಿಂದೂ-ಮುಸ್ಲಿಮರ ಬಿಕ್ಕಟ್ಟಲ್ಲ, ಸಾಂವಿಧಾನಿಕ ಬಿಕ್ಕಟ್ಟು: ಶಫಿ ಸಅದಿ
ಮಹಿಳೆಯರಿಗೆ ಹಿಜಾಬ್ ಕಡ್ಡಾಯ ಅಂತ ಸ್ಪಷ್ಟವಾಗಿ ತಿಳಿಸಿದೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಫಿ ಸಅದಿ ಹೇಳಿಕೆ ನೀಡಿದ್ದಾರೆ. ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾಗೊಂಡಿದೆ. ಈ ಹಿನ್ನೆಲೆ ಕೋರ್ಟ್ ತೀರ್ಪಿನ ಬಗ್ಗೆ ಮೌಲಾನ ಶಫಿ ಸಅದಿ ಮಾತನಾಡಿದ್ದಾರೆ.
ಬೆಂಗಳೂರು: ಕೋರ್ಟ್ ತೀರ್ಪಿನ ಬಗ್ಗೆ ಧಾರ್ಮಿಕ ಮುಖಂಡರ ಜತೆ ಚರ್ಚೆ ನಡೆಸುತ್ತೇವೆ. ಎಲ್ಲರೂ ಶಾಂತಿಯುತವಾಗಿ ಇರಬೇಕೆಂದು ಮನವಿ ಮಾಡುತ್ತೇವೆ. ಸುಪ್ರೀಂಕೋರ್ಟ್ ಮೊರೆ ಹೋಗುವ ಚಿಂತನೆ ಇದೆ. ಕಾನೂನಾತ್ಮಕವಾಗಿ ನಾವು ನಮ್ಮ ಹಕ್ಕನ್ನು ಪಡೆದುಕೊಳ್ಳುತ್ತೇವೆ. ಯಾವ ಆಧಾರದ ಮೇಲೆ ತೀರ್ಪು ಕೊಟ್ಟಿದ್ದಾರೆಂದು ಗೊತ್ತಿಲ್ಲ. ಹಿಜಾಬ್ ಕಡ್ಡಾಯವೆಂದು ಕುರಾನ್‌ನಲ್ಲಿ ಹೇಳಲಾಗಿದೆ. ಮಹಿಳೆಯರಿಗೆ ಹಿಜಾಬ್ ಕಡ್ಡಾಯ ಅಂತ ಸ್ಪಷ್ಟವಾಗಿ ತಿಳಿಸಿದೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಫಿ ಸಅದಿ ಹೇಳಿಕೆ ನೀಡಿದ್ದಾರೆ. ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾಗೊಂಡಿದೆ. ಈ ಹಿನ್ನೆಲೆ ಕೋರ್ಟ್ ತೀರ್ಪಿನ ಬಗ್ಗೆ ಮೌಲಾನ ಶಫಿ ಸಅದಿ ಮಾತನಾಡಿದ್ದಾರೆ.
ಇದು ಹಿಂದೂ-ಮುಸ್ಲಿಮರ ಬಿಕ್ಕಟ್ಟಲ್ಲ
ಹಿಜಾಬ್ ಧರಿಸುವುದು ನಮ್ಮ ಕಟ್ಟಲೆ. ಕುರಾನ್‌ನಲ್ಲಿ ಉಲ್ಲೇಖವಿದೆ. ಷರಿಯತ್ ಸಹ ಇದನ್ನು ಸ್ಪಷ್ಟಪಡಿಸಿದೆ. ಹಿಂದೂ-ಮುಸ್ಲಿಮ್ ಸಮುದಾಯದ ಬಿಕ್ಕಟ್ಟು ಅಲ್ಲ. ಇದು ಸಂವಿಧಾನದ ಬಿಕ್ಕಟ್ಟು. ಇದನ್ನು ನಾವು ಹೇಗೆ ನಿರ್ವಹಿಸಬೇಕೋ ಹಾಗೆ ನಿರ್ವಹಿಸುತ್ತೇವೆ. ರಾಜಕೀಯ ಷಡ್ಯಂತ್ರಗಳಿಗೆ ಯಾರೊಬ್ಬರೂ ಬಲಿಯಾಗಬಾರದು. ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲು ನಮಗೆ ಅವಕಾಶವಿದೆ ಎಂದು ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಹೇಳಿದ್ದಾರೆ.
ನಾಳೆ ವಿಭೂತಿಯನ್ನೂ ಬೇಡ ಅಂದ್ರೆ ಏನು ಮಾಡಬೇಕು: ಸಿಎಂ ಇಬ್ರಾಹಿಂ
ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಹೋಗುತ್ತೇವೆ. ಅದನ್ನು ಸುಪ್ರಿಂಕೋರ್ಟ್‌ನಲ್ಲಿ ನಿರ್ಧರಿಸಬೇಕಾಗುತ್ತದೆ. ಯಾರು ಕೂಡ ಬೀದಿಗೆ ಇಳಿಯುವ ಅವಶ್ಯಕತೆ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿ ಸುಪ್ರೀಂಕೋರ್ಟ್‌ಗೆ ಹೋಗಲು ಯತ್ನ ಮಾಡುತ್ತೇವೆ. ಮುಂಬೈನ ವಕೀಲರ ಜತೆಗೂ ನಾನು ಮಾತನಾಡಿದ್ದೇನೆ. ನಾಳೆ ಇದು ಇಲ್ಲಿಗೆ ನಿಲ್ಲೋದಿಲ್ಲ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ವಿಭೂತಿ ಕೇವಲ ಅಲಂಕಾರಿಕ ಅಲ್ಲ, ಅದು ಭಕ್ತಿಯ ಸಂಕೇತ. ನಾಳೆ ಅದನ್ನೂ ಬೇಡ ಅಂದ್ರೆ ಏನು ಮಾಡಬೇಕು. ಸರ್ಕಾರ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವುದಾದರೆ ಸುಪ್ರಿಂಕೋರ್ಟ್‌ಗೆ ಹೋಗಬೇಡಿ ಎಂದು ಹೇಳುತ್ತೇನೆ ಎಂದು ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.
ಕೋರ್ಟ್ ತೀರ್ಪಿನ ಬಗ್ಗೆ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶವಿದೆ. ಕರಾವಳಿ ಭಾಗದಲ್ಲಿ ಯಾವುದೇ ಆತಂಕ ಇಲ್ಲ. ಕೋಮುಸೌಹಾರ್ದತೆಗೆ ಸಮಸ್ಯೆ ಉಂಟಾಗುವ ಆತಂಕವಿಲ್ಲ. ವಿದ್ಯಾರ್ಥಿಗಳು ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣ ಮುಖ್ಯ. ಶಾಲಾ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಸಬಹುದಾಗಿತ್ತು. ಕೋರ್ಟ್‌ವರೆಗೆ ಬರಬೇಕಾದ ಅಗತ್ಯತೆ ಇರಲಿಲ್ಲ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಖಾದರ್ ಹೇಳಿದ್ದಾರೆ.
ಇದನ್ನೂ ಓದಿ: ಉಡುಪಿ: ಇಷ್ಟು ದಿನ ಕಾಲೇಜಿಗೆ ಬರದೆ ಶಿಕ್ಷಣಕ್ಕೆ ಸಮಸ್ಯೆ ಆಗಿದೆ; ಅಂಥವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುವುದು: ರಘುಪತಿ ಭಟ್
ಇದನ್ನೂ ಓದಿ: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು
Published On - 12:12 pm, Tue, 15 March 22