ಸಾರಿಗೆ ಬಸ್​ನಲ್ಲಿ ಇಂದು ಒಂದೇ ದಿನ 1.05 ಕೋಟಿ ಜನ ಪ್ರಯಾಣ: ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ನಿಗಮಗಳ ಎಂಡಿಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಿದರು.

ಸಾರಿಗೆ ಬಸ್​ನಲ್ಲಿ ಇಂದು ಒಂದೇ ದಿನ 1.05 ಕೋಟಿ ಜನ ಪ್ರಯಾಣ: ರಾಮಲಿಂಗಾರೆಡ್ಡಿ
ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದು ಹೇಳಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Follow us
Rakesh Nayak Manchi
|

Updated on: Jun 24, 2023 | 9:40 PM

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಮಾಡಿದ ನಂತರ ಸರ್ಕಾರಿ ಬಸ್​ಗಳನ್ನು ಪ್ರಯಾಣಿಸುವವರ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ನಗರದ ಶಾಂತಿನಗರದಲ್ಲಿರುವ ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿಯಲ್ಲಿ ವಿವಿಧ ಸಾರಿಗೆ ಇಲಾಖೆಗಳ ಎಂಡಿಗಳ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಶಕ್ತಿ ಯೋಜನೆ ಯಶಸ್ವಿಯಾಗಿದೆ. ಶಕ್ತಿ ಯೋಜನೆ ಜಾರಿಗೂ ಮೊದಲು 84.15 ಲಕ್ಷ ಜನರ ಪ್ರಯಾಣ ಮಾಡುತ್ತಿದ್ದರು. ಇಂದು ಒಂದೇ ದಿನ 1.05 ಕೋಟಿ ಜನ ಪ್ರಯಾಣ ಮಾಡಿದ್ದಾರೆ ಎಂದರು.

ಏಕ ಸದಸ್ಯ ಸಮಿತಿಯ ಅಧ್ಯಕ್ಷ ಎಂ.ಆರ್ ಶ್ರೀನಿವಾಸಮೂರ್ತಿ (ನಿವೃತ್ತ) ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ‌‌ ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ವರದಿ ಸಲ್ಲಿಕೆ ಮಾಡಲಾಯಿತು. ಅಲ್ಲದೆ, ಸಮಿತಿ ಸದಸ್ಯರು ವರದಿಯ ಪ್ರಮುಖ ಅಂಶಗಳನ್ನು ಸಂಕ್ಷಿಪ್ತ ಪ್ರಾತ್ಯಕ್ಷಿತೆಯ‌ ಮೂಲಕ‌ ವಿವರಿಸಿದರು.

ಇತ್ತೀಚೆಗೆ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಸಚಿವರು, ಈ ಯೋಜನೆಯಿಂದ ಸಾರ್ವಜನಿಕ ಸಾರಿಗೆಗೆ ಬಲ ನೀಡಿದಂತಾಗಿದೆ. ಈ‌ ಯೋಜನೆ ಜಾರಿಗೆ ಮೊದಲು ಸಾರಿಗೆ ಸಂಸ್ಥೆಗಳ‌‌ ಒಟ್ಟು ಪ್ರಯಾಣಿಕರ‌ ಸಂಖ್ಯೆ ಪ್ರತಿದಿನ ಸರಾಸರಿ 84.15 ಲಕ್ಷಗಳಿದ್ದು, ಇಂದು ಸರಾಸರಿ 1 ಕೋಟಿ 5 ಲಕ್ಷಗಳಾಗಿರುವುದು ಶಕ್ತಿ ಯೋಜನೆ ಯಶಸ್ವಿಯಾಗಿದೆಯೆಂದು ತಿಳಿಸಿದರು‌.

ಇದನ್ನೂ ಓದಿ: ಸಾರಿಗೆ ಇಲಾಖೆಗೆ ಲಾಸ್​​ ಹೇಗಾಗುತ್ತೆ, ನಷ್ಟದ ಪ್ರಶ್ನೆಯೇ ಬರಲ್ಲ ಎಂದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಮುಂದುವರಿದ ದೇಶಗಳಲ್ಲಿ ಸಹ ಸಾರ್ವಜನಿಕ‌ ಸಾರಿಗೆಗೆ ಒತ್ತು ನೀಡಲು ಹಲವು ಮಹತ್ತರ‌‌‌ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಬಗೆಗಿನ ಮಾಹಿತಿಯನ್ನು ಹಂಚಿಕೊಂಡರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕೆ ಅನುಕೂಲವಾಗುವ ತುರ್ತು‌ ಕ್ರಮಗಳಾದ ಹೊಸ ಬಸ್ಸುಗಳ ಸೇರ್ಪಡೆ, ಬಸ್ಸುಗಳ ಪುನಶ್ಚೇತನ ಕಾರ್ಯ, ಪರಿಣಾಮಕಾರಿ ಮಾಹಿತಿ ತಂತ್ರಜ್ಞಾನ ಬಳಕೆ, ಕಾರ್ಮಿಕ ಸ್ನೇಹಿ‌ ಉಪಕ್ರಮಗಳು, ಸಿಬ್ಬಂದಿಗಳ ನೇಮಕ ಇತರೆ ವಿಷಯಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಕ್ಕೆ ತರಬೇಕು ಎಂದು ಸಚಿವರು ಸೂಚಿಸಿದರು.

ಸಂಪನ್ಮೂಲ‌ ನಗದೀಕರಣದ ಬಗ್ಗೆ ಕೂಡಲೇ ಕ್ರಿಯಾ ಯೋಜನೆಯನ್ನು ತಯಾರಿಸಬೇಕು. ನಾಲ್ಕು ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಖಾಲಿ ಜಾಗಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಂಡು ವಾಣಿಜ್ಯ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯೋಜನೆ ತಯಾರಿಸಿ ಕೂಡಲೇ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಲು ಸಚಿವರು ಸೂಚಿಸಿದರು.

ಸಾರಿಗೆ ಸಂಸ್ಥೆಗಳ‌ ಬಸ್‌ ನಿಲ್ದಾಣಗಳಲ್ಲಿ ಸ್ವಚ್ವತೆಯನ್ನು ಕಾಪಾಡಬೇಕು, ಪ್ರಮುಖವಾಗಿ ಆಸನಗಳ‌ ವ್ಯವಸ್ಥೆ, ಶೌಚಾಲಯಗಳು, ಕುಡಿಯುವ ನೀರಿನ ವ್ಯವಸ್ಥೆಗಳ‌ ಬಗ್ಗೆ ಗಮನಹರಿಸಲು ಸೂಚಿಸಿ, ತಾವೇ ಖುದ್ದು ಬಸ್ ನಿಲ್ದಾಣಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವುದಾಗಿ ಎಚ್ಚರಿಕೆ‌ ನೀಡಿದರು. ಅಧಿಕಾರಿಗಳು ಸಹ ಬಸ್ ನಿಲ್ದಾಣಗಳಿಗೆ ಆಗಾಗ್ಗೆ ಭೇಟಿ ನೀಡಬೇಕೆಂದು ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ