ಜೂನ್​ 11ಕ್ಕೆ ಶಕ್ತಿ ಯೋಜನೆಗೆ ಚಾಲನೆ; ಮಹಿಳೆಯರು ಒದಗಿಸಬೇಕಾದ ದಾಖಲೆಗಳ ವಿವರ ಇಲ್ಲಿವೆ ನೋಡಿ

ಮಹಿಳೆಯರಿಗಾಗಿ ಕರ್ನಾಟಕ ಸರ್ಕಾರ ನೀಡಿರುವ "ಉಚಿತ ಬಸ್ ಪ್ರಯಾಣ" ದ ಯೋಜನೆಗೆ ಜೂನ್ 11ರಂದು ಚಾಲನೆ ನೀಡಲಾಗುತ್ತದೆ. ಆದೇಶದಲ್ಲಿ ಪ್ರಯಾಣಿಸುವ ಮಹಿಳೆಯರು ಒದಗಿಸಬೇಕಾದ ದಾಖಲೆಗಳ ವಿವರ ಇಲ್ಲಿದೆ ನೋಡಿ.

ಜೂನ್​ 11ಕ್ಕೆ ಶಕ್ತಿ ಯೋಜನೆಗೆ ಚಾಲನೆ; ಮಹಿಳೆಯರು ಒದಗಿಸಬೇಕಾದ ದಾಖಲೆಗಳ ವಿವರ ಇಲ್ಲಿವೆ ನೋಡಿ
ಸಾಂದರ್ಭಿಕ ಚಿತ್ರ
Follow us
Rakesh Nayak Manchi
|

Updated on: Jun 08, 2023 | 4:00 PM

ಬೆಂಗಳೂರು: ಮಹಿಳೆಯರಿಗಾಗಿ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ನೀಡುವ ಶಕ್ತಿ ಯೋಜನೆ (Shakti Scheme) ಜೂನ್ 11ರಂದು ಚಾಲನೆ ನೀಡಲಾಗುತ್ತದೆ. ಆದರೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ದಾಖಲಯೊಂದನ್ನು ತೋರಿಸಬೇಕು. ಹಾಗಿದ್ದರೆ, ಯೋಜನೆಯ ಮುಖ್ಯ ಅಂಶಗಳೇನು? ಮಹಿಳೆಯರು ತೋರಿಸಬೇಕಾದ ದಾಖಲೆಗಳು ಏನೇನು? ಮಾಹಿತಿ ಇಲ್ಲಿದೆ.

ಉಚಿತ ಬಸ್ ಯೋಜನೆಯ ಮುಖ್ಯ ಅಂಶಗಳು

  1. ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು ಸೇರಿದಂತೆ) ಮಾತ್ ಉಚಿತ ಪಯಾಣ ಸೌಲಭ್ಯ ಅನ್ವಯ. ಮಹಿಳಾ ಪ್ರಯಾಣಿಕರ ಪೈಕಿ 5 ವರ್ಷದಿಂದ 12 ವರ್ಷದವರೆಗಿನ ಬಾಲಕಿಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರು ಸಹ ಒಳಗೊಂಡಿರುತ್ತಾರೆ.
  2. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರ ಸಾರಿಗೆ ಅಥವಾ ಸಾಮಾನ್ಯ ಮತ್ತು ವೇಗದೂತ (ತಡೆರಹಿತ ಸಾರಿಗೆಗಳು ಒಳಗೊಂಡಂತೆ) ಸಾರಿಗೆಗಳಲ್ಲಿ ಮಾತ್ರ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
  3. ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎಸಿ ಸ್ಲೀಫರ್, ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್ ಫ್ಲೈ ಬಸ್, ಇವಿ ಪ್ಲಸ್ ಸಾರಿಗೆಗಳಲ್ಲಿ ಉಚಿತ ಪಯಾಣ ಸೌಲಭ್ಯವು ಅನ್ವಯಿಸುವುದಿಲ್ಲ.
  4. ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ದೂರದ ಯಾವುದೇ ಮಿತಿ ಇರುವುದಿಲ್ಲ. ಆದರೆ ಪ್ರಯಾಣ ಸೌಲಭ್ಯವು ರಾಜ್ಯದ ಒಳಗೆ ಮಾತ್ರ ಅನ್ವಯವಾಗುತ್ತದೆ.
  5. ಅನುಬಂಧ-1 ಮತ್ತು ಅನುಬಂಧ-2ರಲ್ಲಿ ನಮೂದಿಸಿರುವ ಕೆಲವು ಆಯ್ಕೆ ಅಂತರ ರಾಜ್ಯ ಸಾರಿಗೆಗಳನ್ನು ಹೊರತುಪಡಿಸಿ ಉಳಿದ ಅಂತರರಾಜ್ಯ ಸಾರಿಗೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದು
  6. ಶಕ್ತಿ ಯೋಜನೆಯು ದೈನಿಕ ಪಾಸು ಮಾಸಿಕ ಪಾಸು, ಸಾಂದರ್ಭಿಕ ಒಪ್ಪಂದ ಹಾಗೂ ಖಾಯಂಗುತ್ತಿಗೆ ಪುಯಾಣಿಸಲು ಅವಕಾಶವಿರುವುದಿಲ್ಲ, ಪ್ಯಾಕೇಜ್ ಮುಂತಾದ ಸೇವೆಗಳಿಗೆ ಅನ್ವಯಿಸುವುದಿಲ್ಲ.

ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ಕೆಲವೊಂದು ದಾಖಲಾತಿಗಳನ್ನು ತೋರಿಸಬೇಕು. ಈ ಕೆಳಕಂಡ ಯಾವುದಾದರೂ ಒಂದು ಮೂಲ ಗುರುತಿನ ಚೀಟಿ ಅಥವಾ ಡಿಜಿಲಾಕಲ್‌’ ಮುಖಾಂತರ ಹಾಜರುಪಡಿಸಬೇಕಾಗಿರುತ್ತದೆ. ಈ ಗುರುತಿನ ಚೀಟಿಗಳಲ್ಲಿ ಫೋಟೋ ಮತ್ತು ಕರ್ನಾಟಕ ರಾಜ್ಯದ ವಾಸ ಸ್ಥಳ ನಮೂದಿಸಿರುವುದು ಕಡ್ಡಾಯವಾಗಿರುತ್ತದೆ.

  • ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ ಪತ್ರ (Driving licence).
  • ವಾಸಸ್ಥಳ ನಮೂದಿಸಿರುವ ಭಾರತ ಸರ್ಕಾರದ ಇಲಾಖೆಗಳು ಅಥವಾ ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮ ಸಂಖ್ಯೆಗಳು (PSU’s) ವಿತರಿಸಿರುವ ಗುರುತಿನ ಚೀಟಿ.
  • ವಾಸಸ್ಥಳ ನಮೂದಿಸಿರುವಂತಹ ಕರ್ನಾಟಕ ಸರ್ಕಾರದ ಇಲಾಖೆಗಳು

ಸರ್ಕಾರದ ಸಾರ್ವಜನಿಕ ವಲಯದ ಉದ್ಯಮ/ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿ, ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವವರೆಗೆ ಮೇಲೆ ತಿಳಿಸಿರುವ ಗುರುತಿನ ಚೀಟಿಗಳನ್ನು ಪರಿಗಣಿಸಿ ‘ಶೂನ್ಯ’ ಮೊತ್ತದ ಮಹಿಳೆಯರ ಉಚಿತ ಟಿಕೇಟ್‌ಗಳನ್ನು ವಿತರಿಸಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ