AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿಯೋಜನೆಯಿಂದ ಖಾಸಗಿ ವಾಹನ ಚಾಲಕರು, ಮಾಲಿಕರಿಗೆ ಸಂಕಷ್ಟ; ಸೆ.11 ರಂದು ಬೆಂಗಳೂರು ಬಂದ್​ಗೆ ಕರೆ

ಖಾಸಗಿ ವಾಹನ ಚಾಲಕರು ಮತ್ತು ಮಾಲಿಕರ ಬೇಡಿಕೆಗಳನ್ನು ಸರ್ಕಾರ ಈಡೇರಸದ ಹಿನ್ನೆಲೆಯಲ್ಲಿ ರಾಜ್ಯ ಖಾಸಗಿ ವಾಹನ ಒಕ್ಕೂಟ ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್​ಗೆ ಕರೆ ನೀಡಿದೆ. ಸೆ.11 ಭಾನುವಾರ ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12 ಗಂಟೆವರೆಗೆ ಖಾಸಗಿ ವಾಹನಗಳು ನಗರದಲ್ಲಿ ಸಂಚರಿಸುವುದಿಲ್ಲ.

ಶಕ್ತಿಯೋಜನೆಯಿಂದ ಖಾಸಗಿ ವಾಹನ ಚಾಲಕರು, ಮಾಲಿಕರಿಗೆ ಸಂಕಷ್ಟ; ಸೆ.11 ರಂದು ಬೆಂಗಳೂರು ಬಂದ್​ಗೆ ಕರೆ
ಸಾಂದರ್ಭಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Sep 01, 2023 | 1:59 PM

Share

ಬೆಂಗಳೂರು: ಶಕ್ತಿಯೋಜನೆ (Shakti Yojana) ಜಾರಿ ಬಳಿಕ ಖಾಸಗಿ ವಾಹನ ಚಾಲಕರು ಮತ್ತು ಮಾಲಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಖಾಸಗಿ ವಾಹನ ಒಕ್ಕೂಟ ಸಚಿವ ರಾಮಲಿಂಗಾ ರೆಡ್ಡಿ (Ramlinga Reddy) ಅವರ ಜೊತೆ ಮಾತುಕತೆ ನಡೆಸಿ, ತನ್ನ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿತ್ತು. ಸರ್ಕಾರ ಆಗಸ್ಟ್ 31ರೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿತ್ತು. ಈ ಬೇಡಿಕೆಗಳನ್ನು ಸರ್ಕಾರ ಇನ್ನು ಕೂಡ ಈಡೇರಸದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬಂದ್ ಅಸ್ತ್ರ ಪ್ರಯೋಗಿಸಲು ಖಾಸಗಿ ವಾಹನ ಒಕ್ಕೂಟ ಮುಂದಾಗಿದೆ. 32 ಖಾಸಗಿ ಸಾರಿಗೆ ಒಕ್ಕೂಟಗಳು ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್​ಗೆ (Bengaluru Bandh) ಕರೆ ನೀಡಿವೆ. ಸೆಪ್ಟೆಂಬರ್ 11 ಭಾನುವಾರ ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12 ಗಂಟೆವರೆಗೆ ಆಟೋ ಟ್ಯಾಕ್ಸಿ, ಖಾಸಗಿ ಬಸ್, ಶಾಲಾ ಬಸ್ ಬಂದ್ ಇರಲಿವೆ.

ಖಾಸಗಿ ವಾಹನ ಒಕ್ಕೂಟದ ಬೇಡಿಕೆಗಳೇನು?

  1. ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ
  2. ರ್ಯಾಪಿಡ್ ಬೈಕ್ ಟ್ಯಾಕ್ಸಿಗಳ ಸಂಪೂರ್ಣ ನಿಷೇಧ
  3. ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ
  4. ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಬೇಕು
  5. ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡೋದಕ್ಕೆ ಬ್ರೇಕ್
  6. ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ
  7. ಓಲಾ, ಊಬರ್ ಆಪ್ ಆಧಾರಿತ ಸೇವೆಗಳ ನಿರ್ಬಂಧ
  8. ಖಾಸಗಿ ಬಸ್​ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ
  9. ಖಾಸಗಿ ವಾಹನಗಳನ್ನ ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು
  10. ನಿಯಮ ಬಾಹಿರವಾಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಬೇಕು

ಇನ್ನು ಸೆ.11 ರಂದು ಪ್ರಮುಖ ಜಂಕ್ಷನ್ ಮತ್ತು ಹೆದ್ದಾರಿಗಳಲ್ಲಿ ವಾಹನಗಳ ತಡೆಗೆ ಒಕ್ಕೂಟ ಪ್ಲಾನ್​ ಮಾಡಿದೆ. ಮೆಜೆಸ್ಟಿಕ್​ನಿಂದ ಫ್ರೀಡಂ ಪಾರ್ಕ್ ವರೆಗೆ ರ್ಯಾಲಿ ನಡೆಸಲಿದ್ದು, ಸರ್ಕಾರ ಲಿಖಿತ ಆದೇಶ ನೀಡೋವರೆಗೂ ಬಂದ್ ಕೈ ಬಿಡಲ್ಲ ಎಂದು ನಿನ್ನೆ (ಆ.31) ರಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:12 pm, Fri, 1 September 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ