ಶಕ್ತಿ ಯೋಜನೆ ಎಫೆಕ್ಟ್​​: ಚಿಕ್ಕಪುಟ್ಟ ಚಿಕಿತ್ಸೆಗೂ ಬೆಂಗಳೂರಿನ ಆಸ್ಪತ್ರೆಗೆ ಲಗ್ಗೆ, ಸರ್ಕಾರಿ ಆಸ್ಪತ್ರೆಗಳು ಫುಲ್ ರಶ್

| Updated By: ಆಯೇಷಾ ಬಾನು

Updated on: Jul 26, 2023 | 3:23 PM

ಶಕ್ತಿ ಯೋಜನೆ ಅಡಿ ಮಹಿಳೆಯರು ಸರ್ಕಾರಿ ಬಸ್​​ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದು, ಸಣ್ಣಪುಟ್ಟ ಚಿಕಿತ್ಸೆಗು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸುತ್ತಿದ್ದಾರೆ. ಇದರಿಂದ ರೋಗಿಗಳ ಸಂಖ್ಯೆ ಏರಿಕೆಯಾಗಿದೆ.

ಶಕ್ತಿ ಯೋಜನೆ ಎಫೆಕ್ಟ್​​: ಚಿಕ್ಕಪುಟ್ಟ ಚಿಕಿತ್ಸೆಗೂ ಬೆಂಗಳೂರಿನ ಆಸ್ಪತ್ರೆಗೆ ಲಗ್ಗೆ, ಸರ್ಕಾರಿ ಆಸ್ಪತ್ರೆಗಳು ಫುಲ್ ರಶ್
ಕೆ ಸಿ ಜನರಲ್ ಆಸ್ಪತ್ರೆ
Follow us on

ಬೆಂಗಳೂರು ಜು.26 : ಶಕ್ತಿ ಯೋಜನೆ (Shakti Scheme) ಅಡಿ ಮಹಿಳೆಯರು ಸರ್ಕಾರಿ ಬಸ್​​ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಸರ್ಕಾರಿ ಬಸ್​​ಗಳಲ್ಲಿ (Government Bus) ಉಚಿತ ಪ್ರಯಾಣ ದೊರೆಯುತ್ತಿದ್ದಂತೆ ಮಹಿಳೆಯರು ರಾಜ್ಯದ ಪ್ರಸಿದ್ಧ ದೇವಸ್ಥಾನ ಮತ್ತು ಸಮಾರಂಭಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಿದ್ದಾರೆ. ಇದೀಗ ಈ ಯೋಜನೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ಮಹಿಳೆಯರ ಕಾರುಬಾರು ಜೋರಾಗಿದೆ. ಬಸ್ ಫ್ರೀ ಅಂತ ಚಿಕ್ಕಪುಟ್ಟ ಚಿಕಿತ್ಸೆಗೂ ಮಹಿಳೆಯರು ನಗರದ ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಿದ್ದಾರೆ. ಇದರಿಂದ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದೆ.

ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಾದ ವಾಣಿ ವಿಲಾಸ್, ಕಿದ್ವಾಯಿ, ಕೆ.ಸಿ ಜನರಲ್ ಆಸ್ಪತ್ರೆ, ಜಯದೇವ ಆಸ್ಪತ್ರೆಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹೊರ ರೋಗಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಪ್ರತಿ ಆಸ್ಪತ್ರೆಗಳಲ್ಲಿಯೂ ಕಳೆದ ಒಂದು ತಿಂಗಳಿನಿಂದ ಶೇ 35 ರಿಂದ 40 ರಷ್ಟು ಹೊರ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.

ಇದನ್ನೂ ಓದಿ: Shakti Scheme: ಶಕ್ತಿ ಯೋಜನೆಯಿಂದ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ

ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ರಾಮನಗರ, ಕೋಲಾರ, ತುಮಕೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಚಿಕ್ಕಮಗಳೂರು ಸೇರಿದಂತೆ ಹಲವು ಭಾಗದಿಂದ ರೋಗಿಗಳು ಬಸ್ ಫ್ರೀ ಅಂತ ಸಣ್ಣ ಪುಟ್ಟ ಚಿಕಿತ್ಸೆಗೆ ನಗರದ ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸುತ್ತಿದ್ದಾರೆ. ಇದರಿಂದ ಪ್ರತಿ ನಿತ್ಯವೂ ಒಪಿಡಿ ರಶ್​ ಆಗಿದೆ. ಹೀಗಾಗಿ ವೈದ್ಯರು, ಸಿಬ್ಬಂದಿಗಳು ಪರದಾಡುವಂತಾಗಿದೆ.

ದಯವಿಟ್ಟು ಸಣ್ಣಪುಟ್ಟ ಸಮಸ್ಯೆಗಳಿಗೆ ಬೆಂಗಳೂರಿನ ಆಸ್ಪತ್ರೆಗೆ ಬರಬೇಡಿ. ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಿರಿ. ಗಂಭೀರ ಸಮಸ್ಯೆ ಇದ್ದರೇ ಮಾತ್ರ ಬೆಂಗಳೂರಿನ ಆಸ್ಪತ್ರೆಗೆ ಬನ್ನಿ ಅಂತ ವೈದ್ಯರು ಮನವಿ ಮಾಡಿದ್ದಾರೆ.

ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ

ಆಸ್ಪತ್ರೆ ಕಳೆದ ತಿಂಗಳ ರೋಗಿಗಳ ಸಂಖ್ಯೆ ಈಗಿನ ಸಂಖ್ಯೆ
ವಾಣಿ ವಿಲಾಸ 300 – 350 450 – 500
ಜಯದೇವ 1600 – 1700 2100 – 2200
ಕೆ ಸಿ ಜನರಲ್ 800 – 830 950 -1000
ಕಿದ್ವಾಯಿ 1650 -1700 1850 – 1900

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Wed, 26 July 23