AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದು ಕಸದ ತೊಟ್ಟಿಯಾಗಿತ್ತು; ಬೆಂಗಳೂರಿನ ಕೋಗಿಲು ಲೇಔಟ್ ನೆಲಸಮಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಮರ್ಥನೆ

ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೋಗಿಲು ಲೇಔಟ್​​ನಲ್ಲಿ ಮನೆಗಳನ್ನು ಧ್ವಂಸ ಮಾಡಿದ ಕಾರ್ಯಾಚರಣೆಯನ್ನು ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದಾರೆ. ಕರ್ನಾಟಕ ಸರ್ಕಾರ ಈ ಕ್ರಮವನ್ನು ಕಟ್ಟುನಿಟ್ಟಾಗಿ ಕಾನೂನು ಚೌಕಟ್ಟಿನೊಳಗೆ ಮತ್ತು ಅಗತ್ಯವಿರುವ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿದ ನಂತರ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.

ಅದು ಕಸದ ತೊಟ್ಟಿಯಾಗಿತ್ತು; ಬೆಂಗಳೂರಿನ ಕೋಗಿಲು ಲೇಔಟ್ ನೆಲಸಮಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಮರ್ಥನೆ
Shashi Tharoor
ಸುಷ್ಮಾ ಚಕ್ರೆ
|

Updated on:Jan 03, 2026 | 2:58 PM

Share

ಬೆಂಗಳೂರು, ಜನವರಿ 3: ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರ ನಡೆಸುತ್ತಿರುವ ಕೋಗಿಲು ಲೇಔಟ್​​ನ ಕಟ್ಟಡ ಧ್ವಂಸ ಕಾರ್ಯಾಚರಣೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸುವ ಮೊದಲು ಅವರ ನಿವಾಸಕ್ಕೆ ನೋಟಿಸ್ ನೀಡಲಾಗಿದೆ ಮತ್ತು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೇರಳದ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ಕರ್ನಾಟಕ ಸರ್ಕಾರ ಕೋಗಿಲು ಲೇಔಟ್​​ನಲ್ಲಿ ಧ್ವಂಸ ಕಾರ್ಯಾಚರಣೆಯನ್ನು ಮುಂದುವರಿಸಲು ಎರಡು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. “ಮೊದಲನೆಯದಾಗಿ, ಆ ಭೂಮಿ ಸರ್ಕಾರಕ್ಕೆ ಸೇರಿದ್ದು, ಜನರು ಅಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದರು. ಎರಡನೆಯದಾಗಿ, ಅದು ಕಸದ ತೊಟ್ಟಿಯಾಗಿತ್ತು ಮತ್ತು ವಿಷಕಾರಿ ತ್ಯಾಜ್ಯವು ನೀರನ್ನು ಕಲುಷಿತಗೊಳಿಸಿತ್ತು. ಆದ್ದರಿಂದ ಅದು ಜನರು ವಾಸಿಸಲು ಯೋಗ್ಯವಾದ ಸ್ಥಳವಾಗಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ

ಕೋಗಿಲು ಬಡಾವಣೆಯ ನಿವಾಸಿಗಳಿಗೆ ಸರಿಯಾದ ಸಮಯಕ್ಕೆ ನೋಟಿಸ್‌ಗಳನ್ನು ನೀಡಲಾಗಿದೆ. ಅಲ್ಲಿನ ಜನರು ಬಡವರು ಎಂಬ ಒಂದೇ ಕಾರಣಕ್ಕೆ ಈ ಸಮಸ್ಯೆಯನ್ನು ರಾಜಕೀಯವಾಗಿ ಬಿಂಬಿಸುವುದರಲ್ಲಿ ಅರ್ಥವಿಲ್ಲ ಎಂದು ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ. ಕೋಗಿಲು ಲೇಔಟ್ ನಿವಾಸಿಗಳಿಗೆ ಸರ್ಕಾರ ತಾತ್ಕಾಲಿಕ ವಸತಿ ಒದಗಿಸುವ ನಿರ್ಧಾರ ತೆಗೆದುಕೊಂಡಿದೆ. 5ರಿಂದ 6 ತಿಂಗಳೊಳಗೆ ಶಾಶ್ವತ ವಸತಿ ಭರವಸೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Sat, 3 January 26

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ