AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಸಾಕುಮಗನಿಗೆ ವಿಷ ನೀಡಿ ತಾವೂ ವಿಷಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ

ನಗರದ ಮಿಳಘಟ್ಪದ ಬಾಡಿಗೆ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿ ತಮ್ಮ ಸಾಕು ಮಗನಿಗೂ ವಿಷ ನೀಡಿ ತಾವೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ.

ಶಿವಮೊಗ್ಗ: ಸಾಕುಮಗನಿಗೆ ವಿಷ ನೀಡಿ ತಾವೂ ವಿಷಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 13, 2023 | 2:24 PM

Share

ಶಿವಮೊಗ್ಗ: ಶಿವಮೊಗ್ಗದ ಮಿಳಘಟ್ಪದ ಬಾಡಿಗೆ ಮನೆಯಲ್ಲಿ ವಾಸವಿದ್ದ ಪ್ರತಾಪ (70) ಮತ್ತು ದಾನಮ್ಮ (63) ಎಂಬ ವೃದ್ಧ ದಂಪತಿಗಳು ಕುಟುಂಬ ನಿರ್ವಹಣೆಗಾಗಿ ಪರದಾಡುತ್ತಿದ್ದರು. ಪತ್ನಿಯೇ ಕೊಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು, ಸಾಲ ಮಾಡಿಕೊಂಡಿದ್ದ ವೃದ್ಧೆ ಕೈ ಸಾಲ ಮಾಡಿಕೊಂಡಿದ್ದರು. ಇತ್ತ ಸಾಕಿದ ಮಗನಿಗೂ ಸ್ಟ್ರೋಕ್ ಹೊಡೆದ ಹಿನ್ನಲೆ ಆತ ಕೂಡಾ ಮನೆಯಲ್ಲಿಯೇ ಹಾಸಿಗೆ ಹಿಡಿದಿದ್ದ. ಮನೆ ಬಾಡಿಗೆ ಕಟ್ಟಲು ಆಗದೇ ಇತ್ತ ಸಾಲಗಾರರ ಕಾಟವು ತಾಳಲಾರದೇ ನೊಂದ ದಂಪತಿಗಳು. ತಾವೂ ವಿಷ ಸೇವಿಸಿ ಮಗನಿಗೂ ವಿಷ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ವಸ್ಥ ಮಗ ಮಂಜುನಾಥ್​ಗೆ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಜುನಾಥ (25) ಸಾವನ್ನಪ್ಪಿದ್ದಾನೆ. ಈ ಕುರಿತು ದೊಡ್ಡಪೇಟೆ ಪೂಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆಂಗೇರಿಯಲ್ಲಿ ಬಾಕಿ ಹಣ ಕೇಳಿದ್ದಕ್ಕೆ ಟೀ ಅಂಗಡಿ ಮಾಲೀಕನ ಮೇಲೆ ಹಲ್ಲೆ

ಬೆಂಗಳೂರು: ಜನವರಿ 10ರಂದು ಬೆಂಗಳೂರಿನ ಕೆಂಗೇರಿಯಲ್ಲಿ ಟೀ ಅಂಗಡಿ ಮಾಲೀಕ ಶಿವಕುಮಾರ್​ ಹಾಗೂ ಆತನ ಪತ್ನಿ ಮೇಲೆ ಟಿಪ್ಪು ಹಾಗೂ ಅವನ ಸ್ನೇಹಿತರು ಸೇರಿ ಹಲ್ಲೆ ಮಾಡಿದ್ದರು. ಇದೀಗ ಟಿಪ್ಪುನನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಪ್ರತಿದಿನ ಶಿವಕುಮಾರ್ ಅಂಗಡಿಗೆ ಬರುತ್ತಿದ್ದ ಆರೋಪಿ ಟಿಪ್ಪು ಟೀ ಹಾಗೂ ಸಿಗರೇಟ್​ನ್ನ ಸಾಲ ಪಡೆದಿದ್ದಾನೆ. ಬಾಕಿ ಸಾಲವನ್ನ ವಾಪಸ್​ ಕೇಳಿದ್ದಕ್ಕೆ ಶಿವಕುಮಾರ್ ದಂಪತಿ ಮೇಲೆ ತನ್ನ ಏರಿಯಾದ ಗ್ಯಾಂಗ್​​ ಕರೆತಂದು ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು