ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ 7 ಆರೋಪಿಗಳು ಅರೆಸ್ಟ್
ಶಿವಾಜಿ ಪ್ರತಿಮೆಗೆ ಮಸಿ ಬಳಿದ ಮೂವರು ಆರೋಪಿಗಳನ್ನ ನಿನ್ನೆ ಪೊಲೀಸರು ಬಂಧಿಸಿದ್ದಾರೆ ಅಂತ ಬೊಮ್ಮಾಯಿ ತಿಳಿಸಿದ್ದರು. ಒಟ್ಟು ಏಳು ಆರೋಪಿಗಳನ್ನ ಸದಾಶಿವನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು: ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಠಾಣೆ ಪೊಲೀಸರು ಏಳು ಆರೋಪಿಗಳನ್ನ ಬಂಧಿಸಿದ್ದಾರೆ. ಕರ್ನಾಟಕ ರಣಧೀರ ಪಡೆ ಚೇತನ್ಗಾಡ ಸೇರಿ 7 ಜನರನ್ನ ಅರೆಸ್ಟ್ ಮಾಡಲಾಗಿದೆ. ಕನ್ನಡ ಬಾವುಟಕ್ಕೆ ಎಂಇಎಸ್ ಪುಂಡರು ಬೆಂಕಿ ಹಚ್ಚಿದ ಹಿನ್ನೆಲೆ ಆರೋಪಿಗಳು ಪ್ರತೀಕಾರವಾಗಿ ಮಸಿ ಬಳಿದಿದ್ದಾಗಿ ಹೇಳಿದ್ದಾರೆ. ಸದ್ಯ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಶಿವಾಜಿ ಪ್ರತಿಮೆಗೆ ಮಸಿ ಬಳಿದ ಮೂವರು ಆರೋಪಿಗಳನ್ನ ನಿನ್ನೆ ಪೊಲೀಸರು ಬಂಧಿಸಿದ್ದಾರೆ ಅಂತ ಬೊಮ್ಮಾಯಿ ತಿಳಿಸಿದ್ದರು. ಒಟ್ಟು ಏಳು ಆರೋಪಿಗಳನ್ನ ಸದಾಶಿವನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೃತ್ಯದಲ್ಲಿ 13 ಜನರು ಭಾಗಿಯಾಗಿದ್ದು, ಈ ಪೈಕಿ 7 ಜನರನ್ನ ಬಂಧಿಸಲಾಗಿದೆ. A1 ಕನ್ನಡ ರಣಧೀರ ಪಡೆ ಅಧ್ಯಕ್ಷ ಚೇತನ್ ಗೌಡ, A2 ಗುರುದೇವ್ ನಾರಾಯಣ ಕುಮಾರ್, A3 ವರುಣ್ A4 ನವೀನ್ ಗೌಡ, A5 ವಿನೋದ್, ಚೇತನ್, ಯೋಗೇಶ್‌ನನ್ನು ಬಂಧಿಸಲಾಗಿದೆ. ಕನ್ನಡ ಧ್ವಜ ಸುಟ್ಟಿದ್ದಕ್ಕೆ ಪ್ರತೀಕಾರವಾಗಿ ಮಸಿ ಬಳಿದಿದ್ದರು. ಸದ್ಯ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರಿಂದ ಹುಡುಕಾಟ ಮುಂದುವರಿದಿದೆ.
ಒಂದು ದಿನ ಕಳೆದ್ರೂ ಸಿಗದ ಆರೋಪಿಗಳು ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಹಾಳು ಮಾಡಿ ಒಂದು ದಿನ ಕಳೆದರೂ ಆರೋಪಿಗಳು ಸಿಕ್ಕಿಲ್ಲ. 18ರ ಮಧ್ಯರಾತ್ರಿ 2 ಗಂಟೆಗೆ ರಾಯಣ್ಣ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಘಟನೆ ನಡೆದು 34 ಗಂಟೆ ಕಳೆದರೂ ಆರೋಪಿಗಳು ಅರೆಸ್ಟ್ ಆಗಿಲ್ಲ. ಕೇವಲ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದ ಪುಂಡರನ್ನ ಮಾತ್ರ ಪೊಲೀಸರು ಬಂಧಿಸಿದ್ದಾರೆ ಅಂತ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಠಿಣ ಕ್ರಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಪ್ರತಿಮೆ ಭಗ್ನಗೊಳಿಸಿ, ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ಗಡಿ ಜಿಲ್ಲೆಯಲ್ಲಿ ಕನ್ನಡ ಹಾಗೂ ಮರಾಠಿ ಮಾತನಾಡುವ ಜನತೆ, ಅತ್ಯಂತ ಅನ್ಯೋನ್ಯತೆ, ಪ್ರೀತಿ ಹಾಗೂ ಸಾಮರಸ್ಯದಿಂದ ಇದ್ದಾರೆ. ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಶಾಂತಿ ಹಾಗೂ ಸುವ್ಯವಸ್ತೆ ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಿದ್ದೇನೆ ಅಂತ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ
ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಇಬ್ಬರ ಬಂಧನ; ಅಕ್ಕೂರು ಪೊಲೀಸರಿಂದ 4 ಬಂದೂಕು, 1 ಬೈಕ್ ಜಪ್ತಿ
Published On - 9:48 am, Sun, 19 December 21