AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ವೇಳೆ ಹಲ್ಲೆ: 7 ಆರೋಪಿಗಳ ಬಂಧನ, ಕ್ಷಮೆಯಾಚನೆ ವೀಡಿಯೋ ಹಂಚಿಕೊಂಡ ಪೊಲೀಸ್‌!

ಬೆಂಗಳೂರಿನ ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ವೇಳೆ ಜಿಬಿಎ ಹಾಗೂ ಪಾಲಿಕೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವ ಕೃಷ್ಣ ಭೈರೇಗೌಡ ಖಡಕ್ ಎಚ್ಚರಿಕೆಯನ್ನೂ ಸಹ ನೀಡಿದ್ದರು. ಈ ಬೆನ್ನಲ್ಲೇ ಏಳು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಆರೋಪಿಗಳು 'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಕ್ಷಮೆ ಕೇಳುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ವೇಳೆ ಹಲ್ಲೆ: 7 ಆರೋಪಿಗಳ ಬಂಧನ, ಕ್ಷಮೆಯಾಚನೆ ವೀಡಿಯೋ ಹಂಚಿಕೊಂಡ ಪೊಲೀಸ್‌!
ಆರೋಪಿಗಳ ಕ್ಷಮೆಯಾಚನೆ ವೀಡಿಯೋ ವೈರಲ್
ಭಾವನಾ ಹೆಗಡೆ
| Edited By: |

Updated on:Jul 22, 2026 | 11:17 AM

Share

ಮುಖ್ಯಾಂಶಗಳು

  • ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ವೇಳೆ ಪಾಲಿಕೆ ಸಿಬ್ಬಂದಿ ಮೇಲೆಯೇ ಹಲ್ಲೆಯಾಗಿದೆ.
  • ಸಚಿವ ಕೃಷ್ಣ ಭೈರೇಗೌಡ ಸೂಚನೆ ಬೆನ್ನಲ್ಲೇ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
  • ಬಂಧಿತ ಆರೋಪಿಗಳು ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಕೈಮುಗಿದು ಕ್ಷಮೆಯಾಚಿಸುವ ವಿಡಿಯೋ ವೈರಲ್ ಆಗಿದೆ.

ಬೆಂಗಳೂರು, ಜುಲೈ 22: ಶಿವಾಜಿನಗರದಲ್ಲಿ ಗೇಟರ್ ಬೆಂಗಳೂರು ಪ್ರಾಧಿಕಾರ (GBA) ವತಿಯಿಂದ ಮಂಗಳವಾರ ನಡೆದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಜೆಸಿಬಿ ಬಳಸಿ ಅತಿಕ್ರಮಣ ತೆರವುಗೊಳಿಸಲು ಮುಂದಾದ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕ್ಷಮೆಯಾಚನೆಯ ವೀಡಿಯೋ ಹಂಚಿಕೊಂಡಿದ್ದಾರೆ.

ಪೆಪ್ಪರ್ ಸ್ಪ್ರೇ ಬಳಸಿ ಹಲ್ಲೆ ಯತ್ನ!

ಕಾರ್ಯಾಚರಣೆಗೆ ಅಡ್ಡಿಪಡಿಸಿದ ಪ್ರತಿಭಟನಾಕಾರರು ಪಾಲಿಕೆಯ ಇಂಜಿನಿಯರ್‌ಗಳು, ಜೆಸಿಬಿ ಚಾಲಕ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಒಬ್ಬ ಸಿಬ್ಬಂದಿಗೆ ಹೆಲ್ಮೆಟ್‌ನಿಂದ ಹೊಡೆಯಲು ಯತ್ನಿಸಿದ್ದು ಮಾತ್ರವಲ್ಲದೆ, ಚಾಲಕನ ಕಣ್ಣಿಗೆ ಪೆಪ್ಪರ್ ಸ್ಪ್ರೇ (Pepper Spray) ಸಿಂಪಡಿಸಿ ಉದ್ಧಟತನ ಮೆರೆದಿದ್ದಾರೆ. ಇದರಿಂದಾಗಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಸಚಿವ ಕೃಷ್ಣ ಭೈರೇಗೌಡ ಖಡಕ್ ಎಚ್ಚರಿಕೆ

ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಇವರು ಜೀವನೋಪಾಯಕ್ಕೆ ಕಷ್ಟಪಡುವ ಬಡವರಲ್ಲ, ಸಮಾಜಘಾತುಕ ಶಕ್ತಿಗಳು. ಕರ್ತವ್ಯನಿರತ ಅಧಿಕಾರಿಗಳ ಮೇಲೆ ಕೈಮಾಡಿದ ಯಾರನ್ನೂ ಬಿಡುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಆರೋಪಿಗಳ ಕ್ಷಮೆಯಾಚನೆ ವೀಡಿಯೋ ವೈರಲ್

ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (AEE) ಮಾಧವ ರಾವ್ ನೀಡಿದ ದೂರಿನನ್ವಯ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, 7 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.

ಇದನ್ನೂ ಓದಿ ಶಿವಾಜಿನಗರ ಹಲ್ಲೆ ಪ್ರಕರಣ: ‘ನಾವು ಮಾಡಿದ್ದು ತಪ್ಪು’ ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!

ಇನ್ನೊಂದೆಡೆ, ಬೆಂಗಳೂರು ನಗರ ಪೊಲೀಸರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಬಂಧಿತ ಆರೋಪಿಗಳು “ನಾವು ಮಾಡಿದ್ದು ತಪ್ಪು, ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ” ಎಂದು ಕೈಮುಗಿದು ಸಾರ್ವಜನಿಕರಲ್ಲಿ ಕ್ಷಮೆಯಾಚಿಸುತ್ತಿರುವುದು ಕಂಡುಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 am, Wed, 22 July 26

Follow Us
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ