AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ

ಶಾಸಕ ಶಿವಲಿಂಗೇಗೌಡರು ಶರಣು ಸಲಗರ ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮನ್ನು 'ಕೊಬ್ಬರಿ ಕಳ್ಳ' ಎಂದು ಪ್ರಚೋದಿಸಿದ್ದರಿಂದ ಪ್ರತಿಕ್ರಿಯಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಜೆಡಿಎಸ್ ಶಿವಲಿಂಗೇಗೌಡರ ವರ್ತನೆಯನ್ನು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದ್ದು, ಸಂಸದೀಯ ಮೌಲ್ಯಗಳಿಗೆ ಧಕ್ಕೆ ತಂದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿದೆ.

ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ
ಶಿವಲಿಂಗೇಗೌಡImage Credit source: Google
ಹರೀಶ್ ಜಿ.ಆರ್​.
| Edited By: |

Updated on:Feb 05, 2026 | 2:40 PM

Share

ಬೆಂಗಳೂರು, ಫೆಬ್ರವರಿ 05: ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ ನಿರ್ಣಯ ಪರ ವಿಧಾನ ಸಭೆಯಲ್ಲಿ ಮಾತನಾಡಲು ಮುಂದಾದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದ್ದಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಿಗ್ಗಾಮುಗ್ಗಾ ಬೈದಿದ್ದರು. ಈ ವಿಚಾರವಾಗಿ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ. ನಾನು ಸಲಗರ, ವೇದವ್ಯಾಸ​ ಕಾಮತ್ ಬಗ್ಗೆ ಮಾತ್ರ ಮಾತಾಡಿದ್ದು. ತಹಶೀಲ್ದಾರ್ ಆಗಿರುವ ಪತ್ನಿಯಿಂದಲೇ​ ಶಾಸಕ ಶರಣು ಸಲಗರ ಎಂಎಲ್ಎ ಆಗಿದ್ದಾರೆಂದು ನಮ್ಮ ಕಡೆಯವ್ರು ಹೇಳಿದ್ರು. ಹೆಣ್ಮಗು ವಿಚಾರವಾಗಿ ಮಾತನಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಹೆಣ್ಣುಮಕ್ಕಳ ಬಗ್ಗೆ ಯಾವತ್ತೂ ನಾನು ಮಾತನಾಡಿಲ್ಲ ಎಂದಿದ್ದಾರೆ.

ನನ್ನನ್ನು ಟಾರ್ಗೆಟ್‌ ಮಾಡಿ‌ ಮಾತಾಡಿದ್ದು ಯಾಕೆ? ಅಧಿವೇಶನದಲ್ಲಿ ಬಿಜೆಪಿ ಶಾಸಕರು ಥೈ ತಕ ಅಂತಾ ಕುಣಿದಿದ್ದರು. ಅವರ ಆಡಿಯೋ ಹೋಗಲ್ಲ ಅಂತಾ ಬಾಯಿಗೆ ಬಂದಂತೆ ಕೂಗಿದ್ರು. ಕೊಬ್ಬರಿ ಕಳ್ಳ ಅಂದ್ರು, ಅದಕ್ಕೆ ಏನು ಪ್ರತಿಕ್ರಿಯೆ ಕೊಡಬೇಕೋ ಕೊಟ್ಟೆ. ನಿಮ್ಮಪ್ಪನಿಗೆ ಕೊಟ್ಟಿದ್ದೀನಿ ತೆಗೆದುಕೊ ಅಂತಾ ಹೇಳಿದ್ದೆ. ಬಿಜೆಪಿಯವರಿಗೆ ನನ್ನ ವೈಯಕ್ತಿಕ ಬದುಕಿನ ಬಗ್ಗೆ ಯಾಕೇ ಬೇಕು? ಶಿವಲಿಂಗೇಗೌಡನನ್ನ ಕಳ್ಳ ಎಂದು ಪ್ರಚೋದಿಸಿದ್ದಕ್ಕೆ ಮಾತನಾಡಿದ್ದು. ನನ್ನನ್ನ ಕಳ್ಳ ಅಂದ್ರೆ ದೇವರೇ, ಬುದ್ಧಿ, ಗುರುಗಳೇ ಅಂತಾ ಹೇಳ್ಬೇಕಿತ್ತಾ? ಎಂದವರು ಪ್ರಶ್ನಿಸಿದ್ದಾರೆ. ನಾನು ಆರ್​ಎಸ್​ಎಸ್​ ಬಗ್ಗೆ ಮಾತಾಡಿಲ್ಲ, ಅದರ ಬಗ್ಗೆ ಗೌರವ ಇದೆ. RSSನವನಾಗಿ ಯಾಕೆ ಕುಣಿತಿದೆಯಾ ಅಂತಾ ಕಾಮತ್​ಗೆ ಕೇಳಿದ್ದೆ ಎಂದಿದ್ದಾರೆ.

ಇದನ್ನೂ ಓದಿ: ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಶಾಸಕ ಶಿವಲಿಂಗೇಗೌಡ

ಜೆಡಿಎಸ್​​ ಆಕ್ರೋಶ

ಮತ್ತೊಂದೆಡೆ ಶಾಸಕ ಶಿವಲಿಂಗೇಗೌಡ ವಿರುದ್ಧ ಜೆಡಿಎಸ್​​ ಕಿಡಿ ಕಾರಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಇದಕ್ಕಿಂತ ಬೇರೆ ಸಾಕ್ಷ್ಯ ಬೇಕೇ ? ಪ್ರತಿಪಕ್ಷಗಳ ಶಾಸಕರನ್ನು ಅವಾಚ್ಯವಾಗಿ, ಕೆಟ್ಟ ಭಾಷೆಯಲ್ಲಿ ಬೈದು ಅಂಸವಿಧಾನಿಕವಾಗಿ ನಿಂದಿಸಿ, ಸಭಾಧ್ಯಕ್ಷರ ಎದುರೇ ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದು ಅಕ್ಷಮ್ಯ ಅಪರಾಧ. ಓರ್ವ ಜನಪ್ರತಿನಿಧಿಯಾಗಿ ಸಂಸದೀಯ ಮೌಲ್ಯಗಳಿಗೆ ಅಪಚಾರ ಎಸಗಿರುವ ಹಾಗೂ ಸದನದ ಘನತೆಗೆ ಧಕ್ಕೆ ತಂದಿರುವ ಶಿವಲಿಂಗೇಗೌಡರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕು. ಮುಂದಿನ ಎಲ್ಲಾ ಸದನದಿಂದ ಅಮಾನತುಗೊಳಿಸಿ, ಸದನದ ಕಾರ್ಯ ಕಲಾಪಗಳಿಂದ ದೂರವಿಡಬೇಕು ಎಂದು ಸ್ಪೀಕರ್​​ ಖಾದರ್​​ ಅವರನ್ನು ಜೆಡಿಎಸ್​​ ಆಗ್ರಹಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:39 pm, Thu, 5 February 26

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!