ಶಿವಮೊಗ್ಗ ಗಲಭೆ: ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ

ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಹರ್ಷ ಸಮರ್ಪಿಸಿದ್ದಾನೆ. ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಸಚಿವರು ಹೇಳಿದರು.

ಶಿವಮೊಗ್ಗ ಗಲಭೆ: ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ
ಸಚಿವ ಅಶ್ವತ್ಥ್ ನಾರಾಯಣ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 23, 2022 | 7:01 PM

ಬೆಂಗಳೂರು: ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು 10 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ. ಈ ಬಗ್ಗೆ ಹೇಳಿಕೆ‌ ನೀಡಿರುವ ಅವರು ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್​ನಿಂದ ಪರಿಹಾರದ ಮೊತ್ತ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಚಿವರು ಬುಧವಾರ ಸಂಜೆ ಹರ್ಷ ಅವರ ತಾಯಿ ಜತೆ ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಹೇಳಿದರು.

ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಹರ್ಷ ಸಮರ್ಪಿಸಿದ್ದಾನೆ. ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಘೋಷಿಸಿರುವ ಹಣವನ್ನು ಹರ್ಷನ ತಾಯಿಯವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಎಂದು ಸಚಿವರು ತಿಳಿಸಿದರು. ಹರ್ಷನಂತಹ ಒಬ್ಬ ಸೇವಾ ಮನೋಭಾವದ ವ್ಯಕ್ತಿಯನ್ನು ಮೂಲಭೂತವಾದಿಗಳು ಬಲಿ ತೆಗೆದುಕೊಂಡಿದ್ದಾರೆ. ದುಷ್ಕರ್ಮಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗದಲ್ಲಿ ನಡೆದಿರುವ ಹೇಯ ಕೃತ್ಯವನ್ನು ಸಂವೇದನಾಶೀಲರೆಲ್ಲ ಖಂಡಿಸಬೇಕು ಎಂದು ಅವರು ಮನವಿ ಮಾಡಿದರು.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಸಮಾಜದಲ್ಲಿ ಸೌಹಾರ್ದ ಸ್ಥಾಪನೆಗೆ ಬದ್ಧವಾಗಿದೆ. ನಾಗರಿಕ ಸಮಾಜದಲ್ಲಿ ವಾದ-ವಿವಾದಗಳು ಸಹಜ. ಆದರೆ ಶಿವಮೊಗ್ಗದಲ್ಲಿ ನಡೆದಿರುವುದು ಬರ್ಬರ ಮತ್ತು ಅಮಾನವೀಯ ಘಟನೆ. ಸಮಾಜ ವಿರೋಧಿ ಶಕ್ತಿಗಳನ್ನು ಸರಕಾರವು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಲಿದೆ. ಈ ಘಟನೆಯ ಹಿಂದೆ ಯಾರೆಲ್ಲಾ ಇದ್ದಾರೆ ಮತ್ತು ಯಾವ್ಯಾವ ಸಂಘಟನೆಗಳ ಕುಮ್ಮಕ್ಕಿದೆ ಎನ್ನುವುದನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಇದನ್ನೂ ಓದಿ: ಹರ್ಷನ ಕೊಲೆ ವಿರುದ್ಧ ಹಿಂದೂ-ಪರ ಸಂಘಟನೆ ಕಾರ್ಯಕರ್ತರೊಂದಿಗೆ ಪ್ರತಿಭಟನೆಗಿಳಿದ ಬಿಜೆಪಿ ಶಾಸಕನಿಗೆ ಮುಖಭಂಗ

ಇದನ್ನೂ ಓದಿ: ಮೃತ ಹರ್ಷ ಕುಟುಂಬಸ್ಥರಿಗೆ 6 ಲಕ್ಷ ರೂ. ಕೊಡಲು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ನಿರ್ಧಾರ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್