ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದೆ: ದಿಲ್ಲಿಯಿಂದಲೇ ಬಾಂಬ್ ಸಿಡಿಸಿದ ಶೋಭಾ ಕರಂದ್ಲಾಜೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2024 | 5:06 PM

ಕರ್ನಾಟಕ ಐಟಿ-ಬಿಟಿ ಎಂದು ವಿಶ್ವದಲ್ಲಿ ಪ್ರಸಿದ್ಧಿ ಪಡೆದುಕೊಂಡಿದೆ. ಆದರೆ, ವಿಧಾನಸಭೆ, ಸಿಎಂ ಕಾರ್ಯಕ್ರಮಗಳಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ( Shobha Karandlaje) ವಾಗ್ದಾಳಿ ನಡೆಸಿದ್ದಾರೆ. ಇಂದು (ಮಂಗಳವಾರ) ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದೆ: ದಿಲ್ಲಿಯಿಂದಲೇ ಬಾಂಬ್ ಸಿಡಿಸಿದ ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Follow us on

ನವದೆಹಲಿ, ಜು.16: ವಾರಕ್ಕೊಂದು ಹಗರಣ ಕರ್ನಾಟಕದಲ್ಲಿ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಎತ್ತಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ( Shobha Karandlaje) ವಾಗ್ದಾಳಿ ನಡೆಸಿದ್ದಾರೆ. ಇಂದು(ಮಂಗಳವಾರ) ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ‘ಕರ್ನಾಟಕ, ಕಾಂಗ್ರೆಸ್ ಹೈಕಮಾಂಡ್​ನ ಎಟಿಎಂ ಆಗಿದೆ. ರಾಹುಲ್, ಸೋನಿಯಾ ಗಾಂಧಿ ಸೊಚನೆ ಮೇರೆಗೆ ಹಣ ವರ್ಗಾವಣೆ ಮಾಡಿ, ದಲಿತರ ಹಣವನ್ನು ತೆಲಂಗಾಣ ಚುನಾವಣೆಯಲ್ಲಿ ಬಳಸಲಾಗಿದೆ. ಕಾಂಗ್ರೆಸ್​ನವರು ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಓಡಾಡುತ್ತಾರೆ. ಹಾಗಾದರೆ ದಲಿತರ ಹಣ ಎಲ್ಲಿ ಹೋಯ್ತು? ಎಂದು ಕಿಡಿಕಾರಿದರು.

ಮುಡಾ ಹಗರಣದ ನಿಷ್ಪಕ್ಷಪಾತ ತನಿಖೆಗೆ ಸಿಎಂ ರಾಜೀನಾಮೆ ಅಗತ್ಯ

‘ಕರ್ನಾಟಕ ಐಟಿ-ಬಿಟಿ ಎಂದು ವಿಶ್ವದಲ್ಲಿ ಪ್ರಸಿದ್ಧಿ ಪಡೆದುಕೊಂಡಿದೆ. ಆದರೆ, ವಿಧಾನಸಭೆ, ಸಿಎಂ ಕಾರ್ಯಕ್ರಮಗಳಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಲಾಗುತ್ತಿದೆ. ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ, ಜನರ ರಕ್ಷಣೆ ಬಗ್ಗೆ ಯೋಚಿಸುತ್ತಿಲ್ಲ, ಕೇವಲ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕಿಡಿಕಾರಿದರು. ಕಾನೂನಿನ ವಿರುದ್ಧವಾಗಿ ಸಿಎಂ ಪತ್ನಿ ಪಾರ್ವತಿ ಹೆಸರಿನಲ್ಲಿ ಅಕ್ರಮವಾಗಿ 14 ಸೈಟ್ ಪಡೆದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕು. ಜೊತೆಗೆ ಮುಡಾ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಕೂಡ ನಡೆಯುತ್ತಿದೆ. ಹೀಗಾಗಿ ನಿಷ್ಪಕ್ಷಪಾತ ತನಿಖೆ ನಡೆಯಲು ಸಿಎಂ ರಾಜೀನಾಮೆ ಅಗತ್ಯವಿದೆ. ಸಿದ್ದರಾಮಯ್ಯ ವಿರುದ್ಧವೇ ಲೋಕಾಯುಕ್ತ ಎಫ್​ಐಆರ್ ದಾಖಲಿಸಬೇಕಿತ್ತು ಎಂದು ಸಿಎಂ ವಿರುದ್ದ ಹರಿಹಾಯ್ದಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಡಾಪ್ಲರ್ ವೆದರ್​ ರಾಡಾರ್​ ಸ್ಥಾಪಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಶೋಭಾ ಕರಂದ್ಲಾಜೆ ಮನವಿ

ವಾಲ್ಮೀಕಿ ಹಗರಣದಲ್ಲಿ ಸಿಎಂ ಕೂಡ ಭಾಗಿ

ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿ.ನಾಗೇಂದ್ರ ಅಷ್ಟೇ ಅಲ್ಲ, ಸಿಎಂ ಕೂಡ ಭಾಗಿಯಾಗಿದ್ದಾರೆ, ಸಿಎಂ ಸೂಚನೆ ಇಲ್ಲದೆ ಹಣ ವರ್ಗಾವಣೆ ಸಾಧ್ಯವಿಲ್ಲ. ಹೈದರಾಬಾದ್​​ಗೆ ಹಣ ರವಾನೆ ಬಗ್ಗೆ ಸಿಎಂ ಹೊಣೆ ಹೊರಬೇಕು. ಸಿಬಿಐ ಅಧಿಕಾರಿಗಳ ತನಿಖೆಗೂ ಎಸ್​​ಐಟಿ ಸಹಕಾರ ನೀಡುತ್ತಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ