ಮದ್ಯ ಪ್ರಿಯರಿಗೆ ಶಾಕ್; ಬಡವರ ಫೇವರಿಟ್ ಬ್ರ್ಯಾಂಡ್​ಗಳ ದರ ಹೆಚ್ಚಳ

| Updated By: ಆಯೇಷಾ ಬಾನು

Updated on: Jan 02, 2024 | 1:27 PM

ಈಗಾಗಲೇ 17% ರಷ್ಟು ಓವರ್ ಆಲ್ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ವಾದನ‌‌‌ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ.

ಮದ್ಯ ಪ್ರಿಯರಿಗೆ ಶಾಕ್; ಬಡವರ ಫೇವರಿಟ್ ಬ್ರ್ಯಾಂಡ್​ಗಳ ದರ ಹೆಚ್ಚಳ
ಮದ್ಯಪಾನ ಆರೋಗ್ಯಕ್ಕೆ ಹಾನಿಕರ
Follow us on

ಬೆಂಗಳೂರು, ಜ.02: ಹೊಸ ವರ್ಷದಂದು (New Year) ಬರೋಬ್ಬರಿ 193 ಕೋಟಿ ಆದಾಯ ಗಳಿಸಿ ಮಂದಹಾಸ ಬೀರಿದ್ದ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಇಂದಿನಿಂದ ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆ‌ಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ‌ ಕೆಲ ಬ್ರ್ಯಾಂಡ್​ಗಳ ದರ ಹೆಚ್ಚಿಸಿದೆ (Liquor Price Increased). ಈ ಮೂಲಕ ಮಧ್ಯಮ ವರ್ಗದ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಕೊಟ್ಟಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ.

ಈಗಾಗಲೇ 17% ರಷ್ಟು ಓವರ್ ಆಲ್ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ವಾದನ‌‌‌ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ. ಇಂದಿನಿಂದ ರಾಜ್ಯಾದ್ಯಂತ ಬಡವರ ಈ ಮೂರು ಫೇವರೆಟ್ ಬ್ರ್ಯಾಂಡ್​ಗಳ ಮೇಲಿನ ದರ ಹೆಚ್ಚಳವಾಗಿದೆ. ಈಗಾಗಲೇ ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಸಂದೇಶ ಕಳುಹಿಸಿವೆ. ರಾಜ್ಯದ ಕೆಳ ವರ್ಗದ ಜನ ಅತಿ ಹೆಚ್ಚು ಸೇವಿಸುವ ಬ್ರ್ಯಾಂಡ್​ಗಳ ದರ ಏರಿಕೆಯಾಗಿದೆ.

ಇದನ್ನೂ ಓದಿ: 2023ನೇ ವರ್ಷದ ಕೊನೆಯ ದಿನದಂದು ದಾಖಲೆಯ ಮದ್ಯ ಮಾರಾಟ: 18.85 ಕೋಟಿ ರೂ.‌ ಮದ್ಯ ಬಿಕರಿ

ಸದ್ಯ ಮದ್ಯ ಏರಿಕೆ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಕಂಪನಿಗಳ ವಿರುದ್ಧ ಮದ್ಯ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಉತ್ಪಾದನ ವೆಚ್ಚ ಅಧಿಕವಾಗಿದೆ ಎಂದು ಮದ್ಯ ಉತ್ವನ್ನ ಕಂಪನಿಗಳು ಸಮಜಾಯಿಸಿ ನೀಡಿವೆ. ಇನ್ನು ಮತ್ತೊಂದೆಡೆ ಹೀಗೆ ರೇಟ್ ಹೆಚ್ಚಳವಾದ್ರೆ ಮದ್ಯ ಮಾರಾಟದಲ್ಲಿ ಕುಸಿತ ಆಗುತ್ತೆ ಎಂದು ಬಾರ್ ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ‌ ಬ್ರ್ಯಾಂಡ್​ಗಳಿಗಿಂತ ಕಡಿಮೆ ರೇಟಿನ ಎಣ್ಣೆಗೆ ಜನ ಶಿಫ್ಟ್ ಆಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ದುಬಾರಿಯಾಯ್ತು ಬಡವರ ಫೇವರೆಟ್ ಬ್ರ್ಯಾಂಡ್

  • ಓಟಿ(180 ಎಂಎಲ್): ಈ ಹಿಂದೆ  90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
  • ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
  • 8PM(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ.ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 12:31 pm, Tue, 2 January 24