AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರಕ್ಕೆ ಮುಂದಾಗಿದ್ದ ಕೆಎಸ್ಆರ್​ಟಿಸಿ ಸಾರಿಗೆ ನೌಕರರಿಗೆ ಶಾಕ್​: 6 ತಿಂಗಳು ಎಸ್ಮಾ ಜಾರಿ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಲ್ಕು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೀಗಿರುವಾಗ ಕಾರ್ಮಿಕ ಇಲಾಖೆ ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಿದೆ. ಆ ಮೂಲಕ ಕೆಎಸ್ಆರ್​ಟಿಸಿ ಸಾರಿಗೆ ನೌಕರರಿಗೆ ಶಾಕ್ ನೀಡಿದೆ.

ಮುಷ್ಕರಕ್ಕೆ ಮುಂದಾಗಿದ್ದ ಕೆಎಸ್ಆರ್​ಟಿಸಿ ಸಾರಿಗೆ ನೌಕರರಿಗೆ ಶಾಕ್​: 6 ತಿಂಗಳು ಎಸ್ಮಾ ಜಾರಿ
ಕೆಎಸ್ಆರ್ಟಿಸಿ ಬಸ್​
Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 18, 2025 | 8:09 AM

Share

ಬೆಂಗಳೂರು, ಜುಲೈ 18: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕೆಎಸ್​ಆರ್​ಟಿಸಿ (KSRTC), ಬಿಎಂಆರ್​ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆಗಸ್ಟ್ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ (strike) ಕರೆ ನೀಡಲಾಗಿದೆ. ಆದರೆ ಇದೀಗ ಸಾರಿಗೆ ನೌಕರರಿಗೆ ಕೆಎಸ್ಆರ್​​ಟಿಸಿ ಶಾಕ್ ನೀಡಿದ್ದು, ಪ್ರತಿಭಟನೆ ನಡೆಸದಂತೆ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಲ್ಕು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಆದರೆ ಕೆಎಸ್ಆರ್​​ಟಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಆಗಸ್ಟ್​ 5ರಂದು ಕೆಎಸ್​​ಆರ್​​ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರಕ್ಕೆ ಕರೆ

ಇದನ್ನೂ ಓದಿ
Image
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
Image
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
Image
ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ
Image
ಉಚಿತ ಯೋಜನೆಯಿಂದ ಕಂಗೆಟ್ಟಿತಾ ಸರ್ಕಾರ?; 2000 ಕೋಟಿ ಸಾಲ ಪಡೆಯಲು ಒಪ್ಪಿಗೆ

ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ಅಡಿ ಇಂದಿನಿಂದ ಆರು ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗುವಂತ್ತಿಲ್ಲ. ಜುಲೈ 1ರಿಂದ ಡಿಸೆಂಬರ್​ 12ರ ವರೆಗೆ ನಿಗಮದಲ್ಲಿ‌ ಮುಷ್ಕರ ನಿರ್ಬಂಧಿಸಿ ಕೆಎಸ್ಆರ್​ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಎಸ್ಮಾ ಎಂದರೇನು?

ಎಸ್ಮಾ ಅಂದರೆ ಅಗತ್ಯ ಸೇವೆ ನಿರ್ವಹಣೆ ಕಾಯ್ದೆ ಎಂದರ್ಥ (Essential Services Maintenance Act).  ಸರ್ಕಾರಿ ನೌಕರನನ್ನು ನಿಯಂತ್ರಣ ಮಾಡುವ ಕಾಯ್ದೆ 1968 ರಿಂದ ಚಾಲ್ತಿಯಲ್ಲಿದೆ. 1994ರಲ್ಲಿ ಕರ್ನಾಟಕದಲ್ಲಿ ಎಸ್ಮಾ ಕುರಿತು ಕಾನೂನಿನ ರೂಪುರೇಷೆ ಸಿದ್ಧಪಡಿಸಲಾಗಿದೆ. ಈ ಕಾಯ್ದೆಯಲ್ಲಿ ಒಟ್ಟು 9 ಸೆಕ್ಷನ್​ಗಳಿವೆ.

ಸೆಕ್ಷನ್‌ 2ರ ಪ್ರಕಾರ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ಮೇಲೆ ಸರ್ಕಾರ ಎಸ್ಮಾ ಜಾರಿ ಮಾಡಬಹುದಾಗಿದೆ. ಸೆಕ್ಷನ್‌ 3ರ ಪ್ರಕಾರ ಸಂಸ್ಥೆಗಳು ಮುಷ್ಕರ ನಡೆಸದಂತೆ ಸರ್ಕಾರ ಆದೇಶ ಹೊರಡಿಸಬಹುದು. ಒಮ್ಮೆ ಆದೇಶ ಹೊರಡಿಸಿದರೆ ಅದು 1 ವರ್ಷ ಕಾಲ ಊರ್ಜಿತದಲ್ಲಿ ಇರಲಿದ್ದು, ಈ ಸಂದರ್ಭದಲ್ಲಿ ಯಾವುದೇ ನೌಕರರು ಅಥವಾ ಸಂಘಟನೆ ಮುಷ್ಕರ ನಡೆಸಿದರೆ ಅದು ಕಾನೂನುಬಾಹಿರವಾಗುವುದು.

ಇದನ್ನೂ ಓದಿ: KSRTC Bus Ticket Price: ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ

ಒಂದು ವೇಳೆ ನೌಕರರು ಅಥವಾ ಸಂಘಟನೆ ಕಾನೂನುಬಾಹಿರ ಮುಷ್ಕರ ನಡೆಸಿದರೆ 1 ವರ್ಷ ಶಿಕ್ಷೆ ಹಾಗೂ 5 ಸಾವಿರ ರೂ ದಂಡ ವಿಧಿಸುವ ಅವಕಾಶವಿರುತ್ತದೆ. ಅಷ್ಟೇ ಅಲ್ಲದೆ ಇಂತಹ ಕಾನೂನುಬಾಹಿರ ಮುಷ್ಕರಕ್ಕೆ ಪ್ರೇರಣೆ ಅಥವಾ ಪ್ರಚೋದನೆ ನೀಡುವುದು ಕೂಡ ಅಪರಾಧವಾಗಿದ್ದು, ಸೆಕ್ಷನ್‌ 5ರ ಪ್ರಕಾರ 1 ವರ್ಷ ಶಿಕ್ಷೆ ಮತ್ತು 5 ಸಾವಿರ ರೂ ದಂಡ ವಿಧಿಸಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.