ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನಿಗೆ ಶಾಕ್; ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಇದರ ಬೆನ್ನಲ್ಲೇ ಇದೀಗ ಯುವ ಕಾಂಗ್ರೆಸ್ ನಾಯಕನಿಗೆ ಎಸ್ಐಟಿ(SIT) ಅಧಿಕಾರಿಗಳು ಶಾಕ್ ಕೊಟ್ಟಿದೆ. ಇಂದು(ಜೂ.12) ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Nalapad) ಅವರನ್ನು ವಿಚಾರಣೆಗೆ ಮಾಡಲಾಗಿದೆ.
ಬೆಂಗಳೂರು, ಜೂ.12: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನಿಗೆ ಎಸ್ಐಟಿ(SIT) ಅಧಿಕಾರಿಗಳು ಶಾಕ್ ಕೊಟ್ಟಿದ್ದು, ಇಂದು(ಜೂ.12) ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Nalapad) ಅವರನ್ನು ವಿಚಾರಣೆಗೆ ಮಾಡಲಾಗಿದೆ. ಬಿಟ್ಕಾಯಿನ್ ಕೇಸ್ನ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತನಾಗಿದ್ದ. ಈ ಹಿನ್ನಲೆ ಬೆಂಗಳೂರಿನ ಕಾಟನ್ಪೇಟೆ ಹ್ಯಾಕಿಂಗ್ ಕೇಸ್ನಲ್ಲಿ ಶ್ರೀಕಿ ಜೊತೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ವಿಚಾರಣೆ ನಡೆಸಲಾಗಿದೆ.
ಎಸ್ಐಟಿ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ
ಇದೇ ಜೂ.06 ರಂದು ಎಸ್ಐಟಿ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಕೆಜಿ ನಗರ ಡ್ರಗ್ಸ್ ಕೇಸ್ನಲ್ಲಿ ಶ್ರೀಖಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಮೂರು ಎಫ್ಐಆರ್ಗಳನ್ನು ಎಸ್ಐಟಿ ತನಿಖೆ ಮಾಡುತ್ತಿತ್ತು. ಬಿಟ್ ಕಾಯಿನ್ ಹಗರಣದ ಮುನ್ನ ಡ್ರಗ್ಸ್ ಕೇಸ್ ಬಂದಿದ್ದ ಹಿನ್ನಲೆ ಆ ಕುರಿತು ತನಿಖೆ ನಡೆಸಿದಾಗ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಜೂ.06 ರಂದು ಎಸ್ಐಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು.
ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಅಸ್ತ್ರ ಬಳಕೆ; ಏನಿದು ಕಾಯ್ದೆ?
ಇನ್ನು ಇದರ ಜೊತೆಗೆ 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದ ಹಿನ್ನಲೆ ಇತ್ತೀಚೆಗಷ್ಟೇ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗಿತ್ತು. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:43 pm, Wed, 12 June 24