AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿನಲ್ಲಿ ವಿತರಿಸಿದ್ದ ವಡಾದಲ್ಲಿ ಸಿಕ್ತು ಕಬ್ಬಿಣದ ಬೋಲ್ಟ್!; ಹೌಹಾರಿದ ಪ್ರಯಾಣಿಕ

ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ ವಡಾದಲ್ಲಿ ಕಬ್ಬಿಣದ ಬೋಲ್ಟ್ ಪತ್ತೆಯಾಗಿದೆ. ಆಹಾರದ ಗುಣಮಟ್ಟದ ಲೋಪಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಗುತ್ತಿಗೆ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ IRCTC ತಿಳಿಸಿದೆ. ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್‌ಗಳ ಸುರಿಮಳೆಗೂ ಕಾರಣವಾಗಿದ್ದು, ಬಗೆ ಬಗೆಯ ಕಮೆಂಟ್​​ಗಳು ಬಂದಿವೆ.

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿನಲ್ಲಿ ವಿತರಿಸಿದ್ದ ವಡಾದಲ್ಲಿ ಸಿಕ್ತು ಕಬ್ಬಿಣದ ಬೋಲ್ಟ್!; ಹೌಹಾರಿದ ಪ್ರಯಾಣಿಕ
ವಡಾದಲ್ಲಿ ಸಿಕ್ಕಿರುವ ಕಬ್ಬಿಣದ ಬೋಲ್ಟ್
ಪ್ರಸನ್ನ ಹೆಗಡೆ
|

Updated on: Nov 29, 2026 | 10:38 AM

Share

ಬೆಂಗಳೂರು, ನವೆಂಬರ್​​ 29: ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಕಾಫಿಯೊಂದಿಗೆ ನೀಡಿದ ವಡಾದೊಳಗೆ ಲೋಹದ ಬೋಲ್ಟ್ ಪತ್ತೆಯಾಗಿದ್ದು, ರೈಲಿನಲ್ಲಿ ಉಚಿತವಾಗಿ ಒದಗಿಸುವ ಆಹಾರ ಸೇವೆಯ ಭಾಗವಾಗಿ ಈ ತಿಂಡಿಯನ್ನು ನೀಡಲಾಗಿತ್ತು ಎನ್ನಲಾಗಿದೆ. ಘಟನೆಯಿಂದ ರೈಲಿನಲ್ಲಿ ಪ್ರಯಾಣಿಕರಿವೆ ವಿತರಿಸಲಾಗುವ ಆಹಾರಗಳ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ಸಮರ್ಥ್ ಕೊಡ್ಯಾಲ್ ಎಂಬ ಪ್ರಯಾಣಿಕರು ರೈಲು ಸಂಖ್ಯೆ 26752ರಲ್ಲಿ ಪ್ರಯಾಣಿಸುತ್ತಿದ್ದಾಗ ವಡಾದೊಳಗೆ ಬೋಲ್ಟ್​​ ಕಂಡುಬಂದಿದೆ ಎನ್ನಲಾಗಿದೆ.

‘ಆಹಾರದ ಗುಣಮಟ್ಟದಲ್ಲಿನ ಗಂಭೀರ ಲೋಪ’

ವಡಾದೊಳಗೆ ಸಿಲುಕಿದ್ದ ಬೋಲ್ಟ್‌ನ ಫೋಟೋಗಳನ್ನು ಸಮರ್ಥ್ ಕೊಡ್ಯಾಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಆಹಾರದ ಗುಣಮಟ್ಟದಲ್ಲಿನ ಗಂಭೀರ ಲೋಪವನ್ನು ಪ್ರಶ್ನಿಸಿರುವ ಅವರು, ಭಾರತೀಯ ರೈಲ್ವೆ ಮತ್ತು ಅದರ ಆಹಾರ ಪೂರೈಕೆ ಸಂಸ್ಥೆಯಾದ ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಷನ್ (IRCTC) ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆಕಸ್ಮಿಕವಾಗಿ ಈ ಲೋಹದ ವಸ್ತುವನ್ನು ನುಂಗಿದ್ದರೆ ಉಸಿರುಗಟ್ಟುವಿಕೆ ಅಥವಾ ಪ್ರಾಣಕ್ಕೇ ಕುತ್ತಾಗುವ ಸಾಧ್ಯತೆ ಇತ್ತು. ಇನ್ನು ಘಟನೆ ಬಗ್ಗೆ ಭಾರತೀಯ ರೈಲ್ವೆ ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಘಟನೆಗೆ ಗಂಭೀರವಾಗಿ ಸ್ಪಂದಿಸಿರುವುದಾಗಿ ತಿಳಿಸಿರುವ IRCTC, ಆಹಾರ ಪೂರೈಕೆಯ ಜವಾಬ್ದಾರಿ ಹೊಂದಿರುವ ಹೊರಗುತ್ತಿಗೆ ಸಂಸ್ಥೆಯ ವಿರುದ್ಧ ಕಠಿಣ ದಂಡನಾತ್ಮಕ ಕ್ರಮ ಕೈಗೊಳ್ಳಲು ಮುಂದಾಗಿದೆ.

ಇದನ್ನೂ ಓದಿ: ಶಬರಿಮಲೆ, ಕ್ರಿಸ್‌ಮಸ್‌ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ಮಂಗಳೂರು–ಕೊಲ್ಲಂ ನಡುವೆ ವಿಶೇಷ ರೈಲು

ಘಟನೆ ಬಗ್ಗೆ IRCTC ವಿಷಾದ

ಪ್ರಯಾಣಿಕರಿಗೆ ಉಂಟಾದ ಅನಾನುಕೂಲಕ್ಕಾಗಿ ವಿಷಾದ ವ್ಯಕ್ತಪಡಿಸಿರುವ IRCTC, ನಿಗದಿತ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು (SOPs) ಕಟ್ಟುನಿಟ್ಟಾಗಿ ಪಾಲಿಸುವಂತೆ ಅಡುಗೆ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ. ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳು ಅಡುಗೆ ಘಟಕವನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು ಮತ್ತು ಆಹಾರ ತಯಾರಿಕೆ ಪುನರಾರಂಭಿಸುವ ಮೊದಲು ಎಲ್ಲಾ ಉಪಕರಣಗಳನ್ನು ಸರಿಯಾಗಿ ತಪಾಸಣೆ ಮಾಡಬೇಕು ಎಂದು ನಿರ್ದೇಶನ ನೀಡಿದೆ.

ಘಟನೆ ಬಗ್ಗೆ ಮೀಮ್ಸ್‌ಗಳ ಸುರಿಮಳೆ

ಇನ್ನು, ಈ ವಿಚಿತ್ರ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್‌ಗಳ ಸುರಿಮಳೆಗೆ ಕಾರಣವಾಗಿದೆ. ಬೋಲ್ಟ್ ಸಿಲುಕಿರುವ ವಡಾದ ಫೋಟೋಗಳು ವೈರಲ್ ಆಗುತ್ತಿದ್ದಂತೆ, ಹಲವು ನೆಟ್ಟಿಗರು ವ್ಯಂಗ್ಯಭರಿತ ಕಾಮೆಂಟ್‌ಗಳನ್ನು ಮಾಡಿದ್ದು, IRCTC ತನ್ನ ಮೆನುವಿಗೆ ಹೊಸ ಖಾದ್ಯವನ್ನು ಸೇರಿಸಿದೆ ಎಂದು ತಮಾಷೆ ಮಾಡಿದ್ದಾರೆ. ಮ್ಮ ದೇಹದಲ್ಲಿ ಕಬ್ಬಿಣದ ಅಂಶ ಹೆಚ್ಚಿಸಲು ಅವರು ಸಹಾಯ ಮಾಡುತ್ತಿದ್ದಾರೆ! ಎಂದು ಒಬ್ಬರು ವ್ಯಂಗ್ಯವಾಡಿದ್ದಾರೆ. ಮತ್ತೊಬ್ಬರು ಈ ಹೊಸ ಖಾದ್ಯಕ್ಕೆ ‘ಬೋಲ್ಟ್ ವಡಾ’ ಎಂದು ಹೆಸರಿಟ್ಟಿದ್ದಾರೆ. ನ್ನೊಬ್ಬ ನೆಟ್ಟಿಗರು, ಯಮಧರ್ಮರಾಯನ ಸಂಬಂಧಿಕರಿಗೆ ಅಡುಗೆ ಗುತ್ತಿಗೆ ನೀಡಿದರೆ ಹೀಗೆಯೇ ಆಗುವುದು ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ
ಕ್ಷೇತ್ರ ಮರುವಿಂಗಡಣೆ ವಿರುದ್ಧ ಸಮರ; ನಾಳೆ ದಕ್ಷಿಣ ಭಾರತದ ಸಿಎಂಗಳ ಸಭೆ
ಕ್ಷೇತ್ರ ಮರುವಿಂಗಡಣೆ ವಿರುದ್ಧ ಸಮರ; ನಾಳೆ ದಕ್ಷಿಣ ಭಾರತದ ಸಿಎಂಗಳ ಸಭೆ
ಹೋರಾಟ ಮುಂದುವರಿಯುತ್ತೆ ಎಂದ ನಾಗಲಕ್ಷ್ಮೀ
ಹೋರಾಟ ಮುಂದುವರಿಯುತ್ತೆ ಎಂದ ನಾಗಲಕ್ಷ್ಮೀ
ವಿರಾಜಪೇಟೆ: ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಹಗಲು-ರಾತ್ರಿ ಕಾರ್ಯಾಚರಣೆ
ವಿರಾಜಪೇಟೆ: ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಹಗಲು-ರಾತ್ರಿ ಕಾರ್ಯಾಚರಣೆ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ