AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಮತ್ತೊಂದು ಶಾಕ್​: ಬಿಎಂಟಿಸಿ ಬಸ್ ಪಾಸ್​​ ದರ ಏರಿಕೆ!

ಕರ್ನಾಟಕ ಸರ್ಕಾರವು ಹೊಸ ವರ್ಷದ ಆರಂಭದಲ್ಲಿಯೇ ರಾಜ್ಯದ ಬಸ್ ಟಿಕೆಟ್ ದರಗಳನ್ನು ಶೇಕಡಾ 15ರಷ್ಟು ಏರಿಕೆ ಮಾಡಿತ್ತು. KSRTC, BMTC, NWKRTC ಮತ್ತು KKRTC ಬಸ್‌ಗಳ ಟಿಕೆಟ್ ದರ ಹೆಚ್ಚಿಗೆ ಮಾಡಿತ್ತು. ಇದರ ಬೆನ್ನಲ್ಲೇ ಸಾರಿಗೆ ಇಲಾಖೆ ಪ್ರಯಾಣಿಕರಿಗೆ ಮತ್ತೊಂದು ಶಾಕ್​ ನೀಡಿದೆ. ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಬಿಸಿ ತಟ್ಟಿದೆ.

ಪ್ರಯಾಣಿಕರಿಗೆ ಮತ್ತೊಂದು ಶಾಕ್​: ಬಿಎಂಟಿಸಿ ಬಸ್ ಪಾಸ್​​ ದರ ಏರಿಕೆ!
ಬಿಎಂಟಿಸಿ ಬಸ್​ ಪಾಸ್​​
Kiran Surya
| Updated By: ವಿವೇಕ ಬಿರಾದಾರ|

Updated on:Jan 09, 2025 | 7:53 AM

Share

ಬೆಂಗಳೂರು, ಜನವರಿ 09: ಹೊಸ ವರ್ಷಕ್ಕೆ (New Year) ಹೊರೆ ​ಎಂಬಂತೆ ಕರ್ನಾಟಕ ಸಾರಿಗೆ ಇಲಾಖೆ (Karnataka Transport Department) ಕೆಲ ದಿನಗಳ ಹಿಂದೆಷ್ಟೇ ನಾಲ್ಕೂ ನಿಗಮಗಳ ಬಸ್​ ಟಿಕೆಟ್​ ದರ ಶೇ 15 ರಷ್ಟು ಏರಿಕೆ (Karnataka Bus Ticket Price Hike) ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಪಾಸ್​​ ದರವನ್ನೂ ಏರಿಕೆ ಮಾಡಿದೆ. ದರ ಏರಿಕೆ ಬಿಸಿ ಪ್ರಯಾಣಿಕರಿಗೆ ತಟ್ಟಿದೆ. ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಪಾಸ್​ ದರ ಏರಿಕೆ ಮಾಡಿ ಬಿಎಂಟಿಸಿ ಇಂದಿನಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಬಸ್​​ ಪಾಸ್​ ದರ ಏರಿಕೆ ಪಟ್ಟಿ

  • ಸಾಮಾನ್ಯ ದಿನದ ಪಾಸು 70 ರೂಪಾಯಿಯಿಂದ 80 ರೂ. ಏರಿಕೆ
  • ವಾರದ ಪಾಸು 300 ರೂಪಾಯುಯಿಂದ 350 ರೂ. ಏರಿಕೆ
  • ಮಾಸಿಕ ಪಾಸು 1050 ರೂಪಾಯಿಯಿಂದ 1200 ರೂ. ಏರಿಕೆ
  • ನೈಸ್ ರಸ್ತೆಯ ಟೋಲ್ ಶುಲ್ಕ ಸೇರಿ 2200 ರೂ. 2350 ರೂ. ಏರಿಕೆಯಾಗಿದೆ.
  • ವಜ್ರ ಬಸ್ಸಿನ ದಿನದ ಪಾಸು 120 ರೂಪಾಯಿಯಿಂದ 140 ರೂ. ಏರಿಕೆ
  • ವಜ್ರ ಬಸ್ಸಿನ ಮಾಸಿಕ ಪಾಸು 1800 ರೂಪಾಯಿಯಿಂದ 2000 ರೂ. ಏರಿಕೆ
  • ವಾಯುವಜ್ರ ಬಸ್ಸಿನ – 3755 ರಿಂದ 4000 ರೂ ಏರಿಕೆ
  • ವಿದ್ಯಾರ್ಥಿ ವಜ್ರ ಮಾಸಿಕ ಪಾಸು- 1200 ರಿಂದ 1400 ರೂ ಗೆ ಏರಿಕೆಯಾಗಿದೆ.

ಸರ್ಕಾರಿ ಬಸ್​ಗಳ ಟಿಕೆಟ್​ ದರ ಶೇ 15 ರಷ್ಟು ಅಂದರೆ 7 ರೂಪಾಯಿಂದ 115 ರೂ.ವರೆಗೆ ಏರಿಕೆಯಾಗಿದ್ದು, ಸಾರ್ವಜನಿಕರ ಜೇಬು ಸುಡುತ್ತಿದೆ.

ಬಿಎಂಟಿಸಿ ಬಸ್​ಗಳ ಹಳೆಯ ಮತ್ತು ಹೊಸ ಟಿಕೆಟ್​​ ದರ ಪಟ್ಟಿ

  • ಮೆಜೆಸ್ಟಿಕ್-ಜೆ.ಪಿ.ನಗರ 20 ರೂ. ಇತ್ತು, ಹೊಸ ದರ 24 ರೂ.
  • ಮೆಜೆಸ್ಟಿಕ್-ನಂದಿನಿ ಲೇಔಟ್ 25 ರೂ. ಇತ್ತು, ಹೊಸ ದರ 28 ರೂ.
  • ಮೆಜೆಸ್ಟಿಕ್-ಯಶವಂತಪುರ ರೈಲ್ವೆ ಸ್ಟೇಷನ್ 20 ರೂ. ಇತ್ತು, ಹೊಸ ದರ 23 ರೂ.
  • ಮೆಜೆಸ್ಟಿಕ್-ಪೀಣ್ಯ ಎರಡನೇ ಹಂತ 25 ರೂ. ಇತ್ತು, ಹೊಸ ದರ 28 ರೂ.
  • ಮೆಜೆಸ್ಟಿಕ್-ಅತ್ತಿಬೆಲೆ 25 ರೂ. ಇತ್ತು, ಹೊಸ ದರ 30 ರೂ.
  • ಮೆಜೆಸ್ಟಿಕ್-ವಿದ್ಯಾರಣ್ಯಪುರ 25 ರೂ. ಇತ್ತು, ಹೊಸ ದರ 28 ರೂ.
  • ಮೆಜೆಸ್ಟಿಕ್-ದೊಡ್ಡಬಳ್ಳಾಪುರ 25 ರೂ. ಇತ್ತು, ಹೊಸ ದರ 30 ರೂ.
  • ಮೆಜೆಸ್ಟಿಕ್-ಬಿಇಎಂಎಲ್ 5ನೇ ಹಂತ 20 ರೂ. ಇತ್ತು, ಹೊಸ ದರ 24 ರೂ.
  • ಮೆಜೆಸ್ಟಿಕ್-ಕುಮಾರಸ್ವಾಮಿ ಲೇಔಟ್ 25 ರೂ. ಇತ್ತು, ಹೊಸ ದರ 28 ರೂ.
  • ಮೆಜೆಸ್ಟಿಕ್-ಬಿಟಿಎಂ ಲೇಔಟ್ 25 ರೂ. ಇತ್ತು, ಹೊಸ ದರ 28 ರೂ.

ಟಿಕೆಟ್​ ದರ ಏರಿಕೆಗೆ ಸರ್ಕಾರದ ಸ್ಪಷ್ಟೀಕರಣ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2015ರಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ 2020ರಲ್ಲಿ ಪ್ರಯಾಣದ ದರ ಪರಿಷ್ಕರಣೆ ಮಾಡಲಾಗಿತ್ತು. ಪ್ರಯಾಣ ದರ ಪರಿಷ್ಕರಣೆಗಾಗಿ ನಿಗಮದ ಸಿಬ್ಬಂದಿ ವೇತನ ವೆಚ್ಚ, ಇಂಧನ ವೆಚ್ಚ ಹಾಗೂ ನಿರ್ವಹಣಾ ವೆಚ್ಚವನ್ನು ಪರಿಗಣಿಸಲಾಗುತ್ತಿದೆ. ಪ್ರಸ್ತುತ 9.56 ಕೋಟಿ ರೂ. ಮೊತ್ತವನ್ನು ಹೆಚ್ಚುವರಿಯಾಗಿ ವೆಚ್ಚ ಮಾಡುತ್ತಿದ್ದು, ಸಿಬ್ಬಂದಿ ವೆಚ್ಚ ಸೇರಿ ವಾರ್ಷಿಕವಾಗಿ 3650.00 ಕೋಟಿ ರೂ. ನಿಗಮಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ, ಶೇ 15ರಷ್ಟು ಪ್ರಯಾಣದ ದರ ಹೆಚ್ಚಳ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿತ್ತು.

ಸಚಿವರ ಸ್ಪಷ್ಟನೆ

ರಾಜ್ಯ ಸರ್ಕಾರಕ್ಕೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಮಾಡುವುದಕ್ಕೆ ಇಷ್ಟ ಇರಲಿಲ್ಲ. ಪ್ರತಿನಿತ್ಯ ವೆಚ್ಚ ಜಾಸ್ತಿ ಆಗುತ್ತಿದೆ. ಇಷ್ಟ ಕಷ್ಟದಲ್ಲಿ ಹೊಸ ಬಸ್ ಕೊಟ್ಟಿದ್ದೀವಿ. 1000 ನೇಮಕಾತಿ ಮಾಡಿದ್ದೀವಿ. ಹೊಸ ನಿಯಮಗಳನ್ನು ಆರೋಗ್ಯ ವಿಮೆ ಮಾಡುತ್ತಿದ್ದೇವೆ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:51 am, Thu, 9 January 25

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?