ಬೆಂಗಳೂರು, ಜನವರಿ 09: ಹೊಸ ವರ್ಷಕ್ಕೆ (New Year) ಹೊರೆ ಎಂಬಂತೆ ಕರ್ನಾಟಕ ಸಾರಿಗೆ ಇಲಾಖೆ (Karnataka Transport Department) ಕೆಲ ದಿನಗಳ ಹಿಂದೆಷ್ಟೇ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರ ಶೇ 15 ರಷ್ಟು ಏರಿಕೆ (Karnataka Bus Ticket Price Hike) ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಪಾಸ್ ದರವನ್ನೂ ಏರಿಕೆ ಮಾಡಿದೆ. ದರ ಏರಿಕೆ ಬಿಸಿ ಪ್ರಯಾಣಿಕರಿಗೆ ತಟ್ಟಿದೆ. ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಪಾಸ್ ದರ ಏರಿಕೆ ಮಾಡಿ ಬಿಎಂಟಿಸಿ ಇಂದಿನಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಸರ್ಕಾರಿ ಬಸ್‌ಗಳ ಟಿಕೆಟ್ ದರ ಶೇ 15 ರಷ್ಟು ಅಂದರೆ 7 ರೂಪಾಯಿಂದ 115 ರೂ.ವರೆಗೆ ಏರಿಕೆಯಾಗಿದ್ದು, ಸಾರ್ವಜನಿಕರ ಜೇಬು ಸುಡುತ್ತಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2015ರಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ 2020ರಲ್ಲಿ ಪ್ರಯಾಣದ ದರ ಪರಿಷ್ಕರಣೆ ಮಾಡಲಾಗಿತ್ತು. ಪ್ರಯಾಣ ದರ ಪರಿಷ್ಕರಣೆಗಾಗಿ ನಿಗಮದ ಸಿಬ್ಬಂದಿ ವೇತನ ವೆಚ್ಚ, ಇಂಧನ ವೆಚ್ಚ ಹಾಗೂ ನಿರ್ವಹಣಾ ವೆಚ್ಚವನ್ನು ಪರಿಗಣಿಸಲಾಗುತ್ತಿದೆ. ಪ್ರಸ್ತುತ 9.56 ಕೋಟಿ ರೂ. ಮೊತ್ತವನ್ನು ಹೆಚ್ಚುವರಿಯಾಗಿ ವೆಚ್ಚ ಮಾಡುತ್ತಿದ್ದು, ಸಿಬ್ಬಂದಿ ವೆಚ್ಚ ಸೇರಿ ವಾರ್ಷಿಕವಾಗಿ 3650.00 ಕೋಟಿ ರೂ. ನಿಗಮಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ, ಶೇ 15ರಷ್ಟು ಪ್ರಯಾಣದ ದರ ಹೆಚ್ಚಳ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿತ್ತು.
ರಾಜ್ಯ ಸರ್ಕಾರಕ್ಕೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಮಾಡುವುದಕ್ಕೆ ಇಷ್ಟ ಇರಲಿಲ್ಲ. ಪ್ರತಿನಿತ್ಯ ವೆಚ್ಚ ಜಾಸ್ತಿ ಆಗುತ್ತಿದೆ. ಇಷ್ಟ ಕಷ್ಟದಲ್ಲಿ ಹೊಸ ಬಸ್ ಕೊಟ್ಟಿದ್ದೀವಿ. 1000 ನೇಮಕಾತಿ ಮಾಡಿದ್ದೀವಿ. ಹೊಸ ನಿಯಮಗಳನ್ನು ಆರೋಗ್ಯ ವಿಮೆ ಮಾಡುತ್ತಿದ್ದೇವೆ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:51 am, Thu, 9 January 25