AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಕಟ್ಟಿಕೊಂಡ ಹೆಂಡತಿಯನ್ನು ಕೊಂದು ದೇಹವನ್ನು ಪೀಸ್ ಪೀಸ್ ಮಾಡಿ ಸೂಟ್ ಕೇಸ್​ನಲ್ಲಿ ತುಂಬಿರುವ ಆಘಾತಕಾರಿ ಘಟನೆ ಬೆಳಕಿಗ ಬಂದಿದೆ. ಈ ರೀತಿ ಘಟನೆಗಳು ರಾಜಸ್ಥಾನ, ಬಿಹಾರ್ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ನಡೆದಿದ್ದನ್ನು ಕೇಳಿದ್ದೇವೆ. ಆದ್ರೆ, ಇದೀಗ ರಾಜಧಾನಿ ಬೆಂಗಳೂರಿನಲ್ಲೇ ಈ ರೀತಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಜನರು ಬೆಚ್ಚಿಬಿದ್ದಿದ್ದಾರೆ.

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ
Husband Kills Wife
Shivaprasad B
| Updated By: ರಮೇಶ್ ಬಿ. ಜವಳಗೇರಾ|

Updated on:Mar 27, 2025 | 9:50 PM

Share

ಬೆಂಗಳೂರು, (ಮಾರ್ಚ್​ 27): ವ್ಯಕ್ತಿಯೋರ್ವ ತನ್ನ ಪತ್ನಿಯನ್ನು(Wife) ಕೊಂದು ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ  ಘೋರಭಯಾನಕ ಘಟನೆ ಬೆಂಗಳೂರಿನ(Bengaluru) ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.  ಮಹಾರಾಷ್ಟ್ರ ಮೂಲದ ಆರೋಪಿ ಪತಿ ರಾಕೇಶ್​ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೆಕರ್(32) ಕೊಂದು ಬಳಿಕ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟಿದ್ದಾನೆ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಮಹಾರಾಷ್ಟ್ರ ಪೊಲೀಸರ ಮಾಹಿತಿ ಆಧರಿಸಿ ಬೆಂಗಳೂರಿನ ಹುಳಿಮಾವು ಪೊಲೀಸರು ಮನೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ರಾಕೇಶ್​ ಕ್ರೌರ್ಯದ  ಸುದ್ದಿ ಕೇಳಿ ಅಕ್ಕಪಕ್ಕದ ಜನ ಬೆಚ್ಚಿಬಿದ್ದಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ ದೊಡ್ಡಕಮ್ಮನಹಳ್ಳಿ ಮನೆಯಲ್ಲಿ ವಾಸವಿದ್ದ ಮಹಾರಾಷ್ಟ್ರ ಮೂಲದ ರಾಕೇಶ್​ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆದ್ರೆ,  ಏಕೆ ಕೊಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನುವುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿದಲ್ಲ. ಇದೀಗ ಹುಳಿಮಾವು ದೊಡ್ಡಕಮ್ಮನಹಳ್ಳಿಯ ಮನೆಗೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಹೆಂಡ್ತಿ ಕೊಂದು ಸೂಟ್​ಕೇಸ್​ನಲ್ಲಿ ಪ್ಯಾಕ್: ಬೆಂಗಳೂರಿನಲ್ಲಿ ಪಾಪಿ ಪತಿ ಬೆಚ್ಚಿಬೀಳಿಸೋ ಕೃತ್ಯ

ಪತಿ ರಾಕೇಶ್ ಪತ್ನಿ ಗೌರಿಯನ್ನು ಕೊಂದು ಬಳಿಕ ಆಕೆಯ ಮೃತದೇಹವನ್ನು ತುಂಡರಿಸಿ ಸೂಟ್​ಕೇಸ್​ಗೆ ತುಂಬಿಟ್ಟಿದ್ದಾನೆ. ಬಳಿಕ ರಾಕೇಶ್, ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಪೋನ್ ಕರೆ ಮಾಡಿ ತಿಳಿಸಿದ್ದಾನೆ. ಇದರಿಂದ ಬೆಚ್ಚಿಬಿದ್ದ ಗೌರಿ ಪೋಷಕರು ಕೂಡಲೇ ಮಹಾರಾಷ್ಟ್ರದ ಸ್ಥಳೀಯ ಪೊಲೀಸ್​ ಠಾಣೆಗೆ ತೆರಳಿ ರಾಕೇಶ್​ ಕೃತ್ಯವನ್ನು ತಿಳಿಸಿದ್ದಾರೆ. ಕೂಡಲೇ ಮಹಾರಾಷ್ಟ್ರ ಪೊಲೀಸರು ಹುಳಿಮಾವು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಈ ಮಾಹಿತಿ ಮೇರೆಗೆ ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಇನ್ನು ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಸಹ ಭೇಟಿ  ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ
Image
ಪತ್ನಿ ಜತೆ ಅಕ್ರಮ ಸಂಬಂಧ, ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಸಮಾಧಿ
Image
ಉದ್ಯಮಿ ಕೊಲೆಗೆ ಟ್ವಿಸ್ಟ್; ಹೆಣ್ಣು ಕೊಟ್ಟ ಅತ್ತೆಯೇ ಕತ್ತು ಸೀಳಿ ಹತ್ಯೆ!
Image
ಮುಗ್ಧ ಮಗುವಿನಿಂದ ಬಯಲಾಯ್ತಾ ಸೌರಭ್ ಕೊಲೆಯ ಭಯಾನಕ ಸತ್ಯ
Image
ಪತಿಯನ್ನು ಕೊಲೆ ಮಾಡಿ, ಕತ್ತರಿಸಿ ಡ್ರಮ್​ನಲ್ಲಿ ತುಂಬಿಟ್ಟಿದ್ದ ಮಹಿಳೆ

ತಿಂಗಳ ಹಿಂದಷ್ಟೇ ರಾಕೇಶ್, ಗೌರಿ ಈ ಮನೆಗೆ ಬಾಡಿಗೆ ಬಂದಿದ್ದು, ನಿನ್ನೆ (ಮಾರ್ಚ್​ 26) ರಾತ್ರಿ 12.30ಕ್ಕೆ ಕೃತ್ಯವೆಸಗಿ ಮನೆಯಿಂದ ಹೊರಬಂದಿದ್ದ ಪರಾರಯಾಗಿದ್ದಾನೆ. ಇನ್ನು ಮನೆಯಿಂದ ಹೋಗುವ ಮುನ್ನ ರಾಕೇಶ್, ಅದೇ ಕಟ್ಟಡದಲ್ಲಿ ನೆಲೆಸಿದ್ದ ಮತ್ತೊಬ್ಬರಿಗೆ ಕರೆ ಮಾಡಿ ನನ್ನ ಪತ್ನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾನೆ. ಇದರಿಂದ ಹೆದರಿದ ಬಾಡಿಗೆ ಮನೆ ನಿವಾಸಿ ಮಾಲೀಕರಿಗೆ ಕರೆ ಮಾಹಿತಿ ನೀಡಿದ್ದಾರೆ. ಬಳಿಕ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ FSL ತಜ್ಞರ ಪರಿಶೀಲನೆ ಮಾಡುತ್ತಿದ್ದಾರೆ.

Published On - 8:35 pm, Thu, 27 March 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!