ಸಂಜಯನಗರ ಬಸ್‌ ಸ್ಟಾಪ್‌ ಬಳಿ ಗುಂಡು ಹಾರಿಸಿಕೊಂಡು ಮೃತಪಟ್ಟ ಪ್ರತಿಭಾನ್ವಿತ ವಿದ್ಯಾರ್ಥಿ; ಪೋಷಕರು ಕಂಗಾಲು

Bengaluru Crime: ಮೃತ ರಾಹುಲ್ ಭಂಡಾರಿ ಮಿಲಿಟರಿ ಶಾಲೆಯ ದ್ವಿತೀಯ ಪಿಯು ವಿದ್ಯಾರ್ಥಿ. ಈತನ ತಂದೆ ಮಿಲಿಟರಿಯಲ್ಲಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ರಾಹುಲ್ ಭಂಡಾರಿ ಪಿಸ್ತೂಲ್ 3.2 ನಿಂದ ತಲೆಗೆ ಶೂಟ್ ಮಾಡಿಕೊಂಡು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.

ಸಂಜಯನಗರ ಬಸ್‌ ಸ್ಟಾಪ್‌ ಬಳಿ ಗುಂಡು ಹಾರಿಸಿಕೊಂಡು ಮೃತಪಟ್ಟ ಪ್ರತಿಭಾನ್ವಿತ ವಿದ್ಯಾರ್ಥಿ; ಪೋಷಕರು ಕಂಗಾಲು
ರಾಹುಲ್ ಭಂಡಾರಿ


ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 17 ವರ್ಷದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಸಂಜಯನಗರ ಮುಖ್ಯರಸ್ತೆಯ ಬಸ್‌ ಸ್ಟಾಪ್‌ ಬಳಿ ಶವ ಸಿಕ್ಕಿದೆ. ರಾಹುಲ್ ಭಂಡಾರಿ ಮೃತ ಯುವಕ.

ಮೃತ ರಾಹುಲ್ ಭಂಡಾರಿ ಉತ್ತರಾಖಂಡ್ ಮೂಲದವರು. ಈ ಕುಟುಂಬ ಕಳೆದ 20 ವರ್ಷಗಳಿಂದ ಬೆಂಗಳೂರಿನ ಆರ್.ಟಿ.ನಗರದಲ್ಲಿ ವಾಸವಾಗಿದ್ದರು. ಮೃತ ರಾಹುಲ್ ಭಂಡಾರಿ ಮಿಲಿಟರಿ ಶಾಲೆಯ ದ್ವಿತೀಯ ಪಿಯು ವಿದ್ಯಾರ್ಥಿ. ಈತನ ತಂದೆ ಭಗತ್ ಸಿಂಗ್ ನಿವೃತ್ತ ಹವಾಲ್ದಾರ್. ರಾಹುಲ್ ಭಂಡಾರಿ ಪಿಸ್ತೂಲ್ 3.2 ನಿಂದ ತಲೆಗೆ ಶೂಟ್ ಮಾಡಿಕೊಂಡು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಹಾಗೂ ಘಟನಾ ಸ್ಥಳದಲ್ಲೇ 5 ಜೀವಂತ ಗುಂಡುಗಳು ಸಿಕ್ಕಿವೆ. ಗನ್‌ಪೌಚ್‌ನಲ್ಲಿ ಇನ್ನೂ 5 ಜೀವಂತ ಗುಂಡಗಳಿವೆ. ಮೃತನ ಜೇಬಿನಲ್ಲಿ ಮೊಬೈಲ್ ಪತ್ತೆಯಾಗಿದ್ದು ಪೊಲೀಸರು ಮೊಬೈಲ್ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಮೃತ ವಿದ್ಯಾರ್ಥಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಮತ್ತೊಂದೆಡೆ ರಾಹುಲ್ ತಲೆಗೆ ಯಾರಾದರೂ ಶೂಟ್ ಮಾಡಿರಬಹುದಾ ಎಂಬುದರ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಸದಾಶಿವನಗರ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಘಟನೆ ವಿವರ
ರಾಹುಲ್ ಭಂಡಾರಿ ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ. ತಂದೆ ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ರಾಹುಲ್ ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ತಿದ್ದ. ಮಾನಸಿಕ ಒತ್ತಡ ಹೆಚ್ಚಾದಾಗ ಎದ್ದು ವಾಕ್ ಮಾಡ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದಿದ್ದಾನೆ. ನಾಲ್ಕು ಗಂಟೆಗೆ ಮನೆಯಿಂದ ತೆರಳಿದ್ದಾನೆ. ಬಳಿಕ ಬೆಳಗ್ಗೆ ನಿದ್ದೆಯಿಂದ ಎದ್ದ ಪೋಷಕರು ಮಗ ರೂಮ್ನಲ್ಲಿ ಕಾಣಿಸದ ಹಿನ್ನೆಲೆ ನಿರಂತರವಾಗಿ ಕರೆ ಮಾಡಿದ್ದಾರೆ. ಆದರೆ ರಾಹುಲ್ ಕರೆ ಸ್ವೀಕರಿಸಿಲ್ಲ.

ರಾಹುಲ್ ಮುಂಜಾನೆ ಐದು ಗಂಟೆ ಸುಮಾರಿಗೆ ಶೂಟ್ ಮಾಡಿಕೊಂಡು‌ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಲೆಯ ಎಡಭಾಗದಲ್ಲಿ ಶೂಟ್ ಮಾಡಿಕೊಂಡಿದ್ದಾನೆ. ಮೃತ ಪಟ್ಟ ಬಳಿಕವೂ ಪೋಷಕರಿಂದ ನಿರಂತರವಾಗಿ ಕರೆ ಬರ್ತಾನೆ ಇತ್ತು. ಬಳಿಕ ಸ್ಥಳದಲ್ಲಿದ್ದ ಪೊಲೀಸರು ಫೋನ್ ತೆಗೆದು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ತಮ್ಮನ ಮೃತ ದೇಹ ನೋಡಿ ಅಕ್ಕನ ಆಕ್ರಂದನ
ಸಹೋದರನ ಮೃತದೇಹ ನೋಡಿ ಸಹೋದರಿ ಶಾಕ್ ಆಗಿದ್ದಾರೆ. ನಿನ್ನೆ ಪೂರ್ತಿ ನಾನು ನನ್ನ ತಮ್ಮನ ಜೊತೆ ಮಾತಾಡಿದ್ದೆ. ನನಗೆ ನನ್ನ ಸಹೋದರ ಬೇಕು ಎಂದು ಕಣ್ಣೀರು ಹಾಕುತ್ತಿದ್ದಾರೆ. ಮತ್ತೊಂದು ಕಡೆ ಮಗನ ಈ ಸ್ಥಿತಿ ನೋಡಲಾಗದೇ ತಾಯಿ ಕಣ್ಣೀರು ಸುರಿಸುತ್ತಿದ್ದಾರೆ. ಸದ್ಯ ಆ್ಯಂಬುಲೆನ್ಸ್ ಮೂಲಕ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತ ಯುವಕನ ಮೃತದೇಹ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಡಿವೋರ್ಸ್​ ವದಂತಿ ಸುಳ್ಳು ಮಾಡಲು ಮುಂದಾದ ಸಮಂತಾ; ಅಭಿಮಾನಿಗಳಿಗೆ ಬೇಸರ ತರಿಸಲಿದ ಈ ನಿರ್ಧಾರ

Read Full Article

Click on your DTH Provider to Add TV9 Kannada