ಬೆಂಗಳೂರು; ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು, ಮಾಲೀಕ ಸೇರಿ ಇಬ್ಬರಿಗೆ ಗಾಯ

ಬೆಂಗಳೂರಿನ ದೇವಿನಗರದಲ್ಲಿರುವ ಲಕ್ಷ್ಮಿ ಜ್ಯುವೆಲ್ಲರಿ ಶಾಪ್​ಗೆ ಇಬ್ಬರು ದುಷ್ಕರ್ಮಿಗಳು ನುಗ್ಗಿ ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಚಿನ್ನಾಭರಣ ಮಳಿಗೆಯ ಮಾಲೀಕ ಹಾಗೂ ದುಷ್ಕರ್ಮಿಗಳ ನಡುವೆ ಜಗಳವಾಗಿದ್ದು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇದರಿಂದ ಮಾಲೀಕ ಮತ್ತು ಇನ್ನೊಬ್ಬ ಸಿಬ್ಬಂದಿಗೆ ಗಾಯಗಳಾಗಿವೆ.

ಬೆಂಗಳೂರು; ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು, ಮಾಲೀಕ ಸೇರಿ ಇಬ್ಬರಿಗೆ ಗಾಯ
ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು
Follow us
Prajwal Kumar NY
| Updated By: ಆಯೇಷಾ ಬಾನು

Updated on:Mar 14, 2024 | 1:33 PM

ಬೆಂಗಳೂರು, ಮಾರ್ಚ್​.14: ಬೆಂಗಳೂರಿನ ಕೊಡಿಗೇಹಳ್ಳಿಯ ಲಕ್ಷ್ಮೀ ಬ್ಯಾಂಕರ್ಸ್ & ಜ್ಯುವೆಲ್ಲರಿ ಶಾಪ್​​ನಲ್ಲಿ ಗುರುವಾರ ಗುಂಡಿನ ದಾಳಿ (Open Fire) ನಡೆದಿದ್ದು ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಎರಡು ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ದೇವಿನಗರದಲ್ಲಿರುವ ಲಕ್ಷ್ಮಿ ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಚಿನ್ನಾಭರಣ ಮಳಿಗೆಯ ಮಾಲೀಕ ಹಣ ನೀಡುವುದಕ್ಕೆ ವಿರೋಧಿಸಿದ್ದು ದುಷ್ಕರ್ಮಿಗಳು ಹಾಗೂ ಮಾಲೀನ ನಡುವೆ ಮಾತಿನ ಚಕಮಕಿಯಾಗಿದೆ. ಆಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಅಪ್ಪುರಾಮ್, ಅಭಿರಾಮ್​ ಎಂಬುವವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಅಪ್ಪುರಂ ಮತ್ತು ಆನಂದರಾಮ್ ಅವರನ್ನು M.S.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು ಮೂರು ಸುತ್ತು ಗುಂಡು ಹಾರಿಸಲಾಗಿದೆ ಎನ್ನಲಾಗುತ್ತಿದೆ. ಇನ್ನು ಮತ್ತೊಂದೆಡೆ ದುಷ್ಕರ್ಮಿಗಳು ದರೋಡೆ ಅಲ್ಲದೆ ಸುಪಾರಿ ಪಡೆದು ಜ್ಯುವೆಲ್ಲರಿ ಅಂಗಡಿ ಮಾಲೀಕನನ್ನು ಕೊಲೆ ಮಾಡಲು ಬಂದಿದ್ದರು ಎಂಬ ಶಂಕೆ ಕೂಡ ವ್ಯಕ್ತವಾಗಿದೆ.

ಇದನ್ನೂ ಓದಿ: ಕನ್ನಡಿಗರು ‘ರೇಸಿಸ್ಟ್’ ಎಂದ ಯೂಟ್ಯೂಬರ್, ಹಾಕಿದ್ದಾನೆ ಸವಾಲು

ಆರೋಪಿಗಳು ಏನು ದೋಚಲು ಆಗಿಲ್ಲ. ಕೇವಲ ಗುಂಡು ಹಾರಿಸಿದ್ದಾರೆ. ಓರ್ವನಿಗೆ ಕಾಲಿಗೆ, ಮತ್ತೋರ್ವನಿಗೆ ಹೊಟ್ಟೆಗೆ ಗುಂಡು ತಾಕಿದೆ. ಆರೋಪಿಗಳು ಚಿನ್ನದಂಗಡಿಯೊಳಗೆ ಕೇವಲ ಒಂದು ನಿಮಿಷಗಳ ಕಾಲ ಇದ್ದರು. ಸದ್ಯಕ್ಕೆ ಆಭರಣ ಮಳಿಗೆಯಲ್ಲಿ ಕಳ್ಳತನ ನಡೆದಿರುವುದು ಪತ್ತೆಯಾಗಿಲ್ಲ. ಆರೋಪಿಗಳು ಬಂದು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಆರೋಪಿಗಳು ಪಿಸ್ತೂಲ್ ಅನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಡಿಜಿ, ಐಜಿಪಿ ಅಲೋಕ್ ಮೋಹನ್ ಮತ್ತು ನಗರ ಪೊಲೀಸ್ ಆಯುಕ್ತ ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದಾರೆ. ಸ್ಥಳದಲ್ಲಿ ಒಂದು ಮಚ್ಚು ಸಹ ಪತ್ತೆಯಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Thu, 14 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ