AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಬೋರ್ಡ್​ ಬದಲಾವಣೆಗೆ ಫೆ.28 ಡೆಡ್​​ಲೈನ್​ ನೀಡಿದ ಸಿಎಂ

ಕನ್ನಡ ನಾಮಫಲಕ ವಿಚಾರವಾಗಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ ಅಂತ್ಯವಾಗಿದ್ದು, ಶೇ.60ರಷ್ಟು ಕನ್ನಡ ಬೋರ್ಡ್ ಕಡ್ಡಾಯವಾಗಿದ್ದು,​ ಫೆ.28ರ ವರೆಗೆ ಎಲ್ಲಾ ಅಂಗಡಿಗಳಿಗೆ ಡೆಡ್​​ಲೈನ್ ನೀಡಲಾಗಿದೆ. ಇನ್ನು ಸಭೆ ಬಳಿಕ ಸಿದ್ದರಾಮಯ್ಯ ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಕನ್ನಡ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಬೋರ್ಡ್​ ಬದಲಾವಣೆಗೆ ಫೆ.28 ಡೆಡ್​​ಲೈನ್​ ನೀಡಿದ ಸಿಎಂ
ಸಿದ್ದರಾಮಯ್ಯ ಸಭೆ ನಡೆಸುತ್ತಿರುವುದು
TV9 Web
| Edited By: |

Updated on: Dec 28, 2023 | 3:29 PM

Share

ಬೆಂಗಳೂರು, (ಡಿಸೆಂಬರ್ 28): ಕನ್ನಡ ನಾಮಫಲಕ (Kannada Board) ಅಳವಡಿಸುವ ಸಂಬಂಧ ಪ್ರತಿಭಟನೆ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike)ಕಾರ್ಯಕರ್ತರ ಬಂಧನದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಸಿಡಿದೆದ್ದಿವೆ. ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ (Siddaramaiah) ದಿಢೀರ್ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್​ ಇರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ. ಇನ್ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುತ್ತೆ ಎಂದು ಸ್ಪಷ್ಟಪಡಿಸಿದರು.

ನಾಮಫಲಕಗಳು ಶೇಕಡಾ 50ರಷ್ಟು ಕನ್ನಡದಲ್ಲೇ ಇರಬೇಕು. ಬಾಕಿ ಅರ್ಧದಷ್ಟು ಬೇರೆ ಭಾಷೆಯಲ್ಲಿಯರಬೇಕು. ಈ ಬಗ್ಗೆ 2018ರಲ್ಲಿಯೇ ಕಾನೂನು ಮಾಡಿ ಸುತ್ತೋಲೆ ಹೊರಡಿಸಲಾಗಿದೆ. ಆದ್ರೆ, ಇದೀಗ ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್​ ಇರಬೇಕು. ಹಿಂದಿನ ಸುತ್ತೋಲೆಯಲ್ಲಿ ಶೇ.50ರಷ್ಟು ಎಂದು ಆಗಿತ್ತು. ಹಾಗಾಗಿ ಅದಕ್ಕೆ ತಿದ್ದುಪಡಿ ತರುವುದಕ್ಕೆ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಹಾಗಾಗಿ 2024ರ ಫೆ.28ರೊಳಗೆ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ . ಆದ್ರೆ, ಇನ್ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುತ್ತೆ ಎಂದು ಹೇಳಿದರು.

ಇದನ್ನೂ ಓದಿ: ಧರಣಿ ಮಾಡಿದ್ದಕ್ಕಲ್ಲ, ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಕರವೇ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಪ್ರತಿಭಟನೆ ಇದ್ರೆ ಫ್ರೀಡಂಪಾರ್ಕ್​​ನಲ್ಲಿ ಮಾಡಬೇಕು. ಹೈಕೋರ್ಟ್​ ಈ ಕುರಿತು ಆದೇಶವನ್ನೇ ಹೊರಡಿಸಿದೆ. ಶಾಂತಿಯುತ ಪ್ರತಿಭಟನೆ ಮಾಡಿದ್ರೆ ವಿರೋಧಿಸುವುದಿಲ್ಲ. ಯಾರೇ ಆದ್ರೂ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ನಾನು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ಯಾರೂ ಕೂಡ ಕಾನೂನು ಕೈಗೆತೆಗೆದುಕೊಳ್ಳಬಾರದು. ಎಲ್ಲ ಸಂಘಟನೆ, ಹೋರಾಟಗಾರರಿಗೆ ನನ್ನ ಮನವಿ. ಶಾಂತಿಯುತವಾಗಿ ನಿಮ್ಮ ಪ್ರತಿಭಟನೆಗಳನ್ನ ಮಾಡಿ. ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ. ಇದರಲ್ಲಿ ಯಾವುದೇ ರೀತಿ ರಾಜಿ ಇಲ್ಲ. ಶಾಂತಿಯುತ ಪ್ರತಿಭಟನೆಗೆ ನಾವು ಅಡ್ಡಿಪಡಿಸುವುದಿಲ್ಲ. ಆದ್ರೆ, ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡ್ರೆ ಸಹಿಸಲ್ಲ. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಕ್ರಮ ಫಿಕ್ಸ್ ಎಂದು ಎಚ್ಚರಿಕೆ ನೀಡಿದರು.

ಇನ್ನು ಇದೇ ವೇಳೆ ನಾಪಫಲಕ ಬಗ್ಗೆ ಕರವೇ ಪ್ರತಿಭಟನೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕರವೇಯವರು ಮನವಿ ಕೊಟ್ಟಿದ್ರೆ ಪೊಲೀಸರು ಉತ್ತರಿಸುತ್ತಿದ್ದರು. ನನಗೂ ಬಂದಿಲ್ಲ, ಗೃಹ ಸಚಿವರಿಗೂ ಮನವಿ ಬಂದಿಲ್ಲ. ಯಾವುದೇ ಮನವಿ ಕೊಡದೇ ಪ್ರತಿಭಟನೆ ಮಾಡಿದ್ದಾರೆ. ನಾವು ಯಾವಾಗಲೂ ಕನ್ನಡ ಪರ ಎಂದು ಸ್ಪಷ್ಟಪಡಿಸಿದರು.

ಕನ್ನಡ ಸಾರ್ವಭೌಮ ಭಾಷೆ, ಎರಡು ಮಾತಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರದ ನಿಯಮ ಪಾಲಿಸದಿದ್ರೆ ಕಾನೂನು ಕ್ರಮ. ಇದು ಇಡೀ ಕರ್ನಾಟಕ ರಾಜ್ಯಕ್ಕೇ ಅನ್ವಯಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಾರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ