ಡ್ರಗ್ ಪೆಡ್ಲರ್ ಜೊತೆ ಶಾಮೀಲು: ಸಿದ್ದಾಪುರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಸಸ್ಪೆಂಡ್ -ನ್ಯೂ ಇಯರ್ ಗಿಫ್ಟ್

ಡ್ರಗ್ ಪೆಡ್ಲರ್ ಜೊತೆ ಶಾಮೀಲು: ಸಿದ್ದಾಪುರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಸಸ್ಪೆಂಡ್ -ನ್ಯೂ ಇಯರ್ ಗಿಫ್ಟ್
ಮಾದಕ ವಸ್ತುಗಳು

ಡ್ರಗ್ಸ್ ಸರಬರಾಜು ಸಂಬಂಧ ಸಿದ್ಧಾಪುರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ವಿಚಾರಣೆ ವೇಳೆ ಆರೋಪಿ ಜೊತೆ ಕಾನ್ಸ್ಟೇಬಲ್ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾನ್ಸ್ಟೇಬಲ್ ಅಮಾನತುಗೊಳಿಸಿರುವ ಡಿಸಿಪಿ‌ ಹರೀಶ್ ಪಾಂಡೆ ಆದೇಶ ಹೊರಡಿಸಿದ್ದಾರೆ.

TV9kannada Web Team

| Edited By: Ayesha Banu

Dec 31, 2021 | 1:39 PM

ಬೆಂಗಳೂರು: NDPS ಪ್ರಕರಣವೊಂದರ ಆರೋಪಿ ಜತೆ ಸಂಪರ್ಕ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬರ್ ಪಿಸಿ ರಹಮಾನ್ ಅಮಾನತುಗೊಂಡಿದ್ದಾರೆ. ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಡ್ರಗ್ಸ್ ಸರಬರಾಜು ಸಂಬಂಧ ಸಿದ್ಧಾಪುರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ವಿಚಾರಣೆ ವೇಳೆ ಆರೋಪಿ ಜೊತೆ ಕಾನ್ಸ್ಟೇಬಲ್ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾನ್ಸ್ಟೇಬಲ್ ಅಮಾನತುಗೊಳಿಸಿರುವ ಡಿಸಿಪಿ‌ ಹರೀಶ್ ಪಾಂಡೆ ಆದೇಶ ಹೊರಡಿಸಿದ್ದಾರೆ.

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್ ಸದಾಶಿವನಗರ ಪೊಲೀಸರು ಕಾರ್ಯಾಚರಣೆ ನಡೆಸಿ ರಾಮಯ್ಯ ಕಾಲೇಜು ಬಳಿ ಡ್ರಗ್ಸ್ ಮಾರುತ್ತಿದ್ದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಅರ್ಜುನ್, ಪ್ರವೀಣ್, ರಂಜಿತ್‌ ಬಂಧಿತ ಆರೋಪಿಗಳು. ಬಂಧಿತರಿಂದ 30 ಸಾವಿರ ಮೌಲ್ಯದ 10 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ.

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಅರೆಸ್ಟ್ ಇನ್ನು ಮತ್ತೊಂದೆಡೆ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಒಡಿಶಾ ಮೂಲದ ಸತ್ಯ ಪ್ರಧಾನ್ ಎಂಬಾತನನ್ನು ಬೆಂಗಳೂರಿನ ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹7 ಲಕ್ಷ ಮೌಲ್ಯದ 32 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಶೋ ರೂಮ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್ ಸುಟ್ಟು ಕರಕಲು ಬೆಂಗಳೂರಿನ ಹೆಸರಘಟ್ಟ ರಸ್ತೆಯ ಶೋ ರೂಮ್‌ನಲ್ಲಿ ಘಟನೆಯೊಂದು ಸಂಭವಿಸಿದೆ. ಶೋ ರೂಮ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್ ಸುಟ್ಟು ಕರಕಲಾಗಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: GST Council Meet: ಜವಳಿ ಮೇಲಿನ ಜಿಎಸ್​ಟಿ ದರ ಏರಿಕೆ ನಿರ್ಧಾರ ಸರ್ವಾನುಮತದಿಂದ ಮುಂದೂಡಿಕೆ

Follow us on

Related Stories

Most Read Stories

Click on your DTH Provider to Add TV9 Kannada