AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ

ಕೊನೆಗೂ ರಾಜ್ಯ ಕಾಂಗ್ರೆಸ್​​ನ ಅಧಿಕಾರ ಹಂಚಿಕೆ ಸಮರಕ್ಕೆ ತೆರೆ ಬೀಳುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಕಾಂಗ್ರೆಸ್ ಹೈಕಮಾಂಡ್ ಸಂಧಾನ ಯಶಸ್ವಿಯಾಗಿದ್ದು ರಾಹುಲ್ ಗಾಂಧಿ ಭರವಸೆಗೆ ಒಪ್ಪಿದ ಸಿದ್ದರಾಮಯ್ಯ ಕೊನೆಗೂ ಸಿಎಂ ಸ್ಥಾನ ತ್ಯಜಿಸಲು ಸಿದ್ಧರಾಗಿದ್ದು, ನಾಳೆಯೇ ರಾಜೀನಾಮೆ ನೀಡುವ ಸಾಧ್ಯತೆ ಇದೆ. ರಾಜ್ಯಪಾಲರ ಭೇಟಿಗೆ ಅವರು ಸಮಯವನ್ನೂ ಕೇಳಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಸಿದ್ದರಾಮಯ್ಯ ಸ್ಥಾನ ತ್ಯಜಿಲು ಒಪ್ಪಿದ್ದು ಯಾಕೆ ಎಂಬ ಮಾಹಿತಿ ಇಲ್ಲಿದೆ.

ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ
ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ?Image Credit source: new indian express
ಪ್ರಸನ್ನ ಗಾಂವ್ಕರ್​
| Edited By: |

Updated on: May 27, 2026 | 11:47 AM

Share

ಬೆಂಗಳೂರು, ಮೇ 27: ರಾಜ್ಯ ರಾಜಕಾರಣದಲ್ಲಿ ಬಹುದಿನಗಳಿಂದ ಸದ್ದು ಮಾಡುತ್ತಿದ್ದ ಕಾಂಗ್ರೆಸ್​​ ನಾಯಕತ್ವ ಬದಲಾವಣೆ ಸಮರ ಕೊನೆಗೂ ಕ್ಲೈಮಾಕ್ಸ್​​ ಹಂತಕ್ಕೆ ತಲುಪಿದೆ. ಸಿಎಂ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಅವರನ್ನು ಮನವೊಲಿಸುವಲ್ಲಿ ಹೈಕಮಾಂಡ್​​ ನಾಯಕರು ಯಶಸ್ವಿಯಾಗಿದ್ದು, ನಾಳೆ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರ ಭೇಟಿಗೂ ಅವರು ಸಮಯ ಕೇಳಿರುವ ಮಾಹಿತಿ ಇದೆ. ಅಷ್ಟಕ್ಕೂ ಮುಖ್ಯಮಂತ್ರಿ ಸ್ಥಾನ ಬಿಡಲು ಸಿದ್ದರಾಮಯ್ಯ ಅವರನ್ನು ವರಿಷ್ಠರು ಮನವೊಲಿಸಿದ್ದು ಹೇಗೆ ಎಂಬುದೇ ಇಂಟರೆಸ್ಟಿಂಗ್​ ಆಗಿದೆ.

ಮುಖ್ಯಾಂಶಗಳು

  • ರಾಜ್ಯ ರಾಜಕಾರಣದಲ್ಲಿ ಕೊನೆಗೂ ಸ್ಫೋಟಕ ಬೆಳವಣಿಗೆ
  • ಸಿಎಂ ಸ್ಥಾನ ತ್ಯಜಿಸಲು ಮುಂದಾಗಿರುವ ಸಿದ್ದರಾಮಯ್ಯ
  • ಹೈಕಮಾಂಡ್​​ ಸಿದ್ಧರಾಮಯ್ಯರ ಮನವೊಲಿಸಿದ್ದೇಗೆ ಗೊತ್ತಾ?

ಅಷ್ಟಕ್ಕೂ ಹಾಲಿ ಸಿಎಂ ಸಿದ್ದರಾಮಯ್ಯ ಅವರರಿಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವಂತೆ ಹೇಳುವುದು ಕಾಂಗ್ರೆಸ್​​ ಹೈಕಮಾಂಡ್​​ಗೂ ಸುಲಭದ ಕೆಲಸವೇನೂ ಆಗಿರಲಿಲ್ಲ. ವರಿಷ್ಠರ ತಂತ್ರಗಳಿಗೆ ಪ್ರತಿತಂತ್ರವನ್ನು ಹೆಣೆದುಕೊಂಡೇ ಸಿದ್ದರಾಮಯ್ಯ ದೆಹಲಿ ವಿಮಾನ ಹತ್ತಿದ್ದರು. ಒಂದೊಮ್ಮೆ ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾದರೆ ತಾನು ಯಾವ ದಾಳ ಉರುಳಿಸಬೇಕು ಎಂಬ ಪಕ್ಕಾ ಪ್ಲ್ಯಾನ್​​ ಸಿದ್ಧಮಾಡಿಕೊಂಡೇ ತೆರಳಿದ್ದರು. ಆದರೆ ಸಿಎಂ ಭೇಟಿಗೂ ಮುನ್ನ ರಾಹುಲ್ ಗಾಂಧಿ ಎಲ್ಲಾ ವಿವರ ಪಡೆದುಕೊಂಡಿದ್ದು, 2023ರ ಮಾತುಕತೆ ಬಗ್ಗೆ ಎಐಸಿಸಿ ನಾಯಕರು ರಾಹುಲ್​ಗೆ ವಿವರಿಸಿದ್ದರು. ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್​​ ಈ ಬಗ್ಗೆ ಸಂಪೂರ್ಣ ಮಾಹಿತಿ ಕೊಟ್ಟಿದ್ದರು. ಈ ವೇಳೆ ಭರವಸೆ ನೀಡಿದ್ದರೆ ಹಾಗೆ ನಡೆದುಕೊಳ್ಳೋದು ಸೂಕ್ತ ಎಂದು ರಾಹುಲ್​​ ಗಾಂಧಿಯೂ ಹೇಳಿದ್ದು, ಸಿಎಂ ಜೊತೆಗೆ ಸಭೆ ನಡೆದಾಗಲೂ ಅದನ್ನೇ ರಾಹುಲ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಕೊನೆಗೂ ತೆರೆ; ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಇನ್ನು ಎರಡು ಅವಧಿಯಲ್ಲಿ ಪಕ್ಷ ತಮ್ಮನ್ನು ಗೌರವದಿಂದ ನಡೆಸಿಕೊಂಡಿದೆ, ಹೀಗೆಯೇ ಮುಂದೆಯೂ ಗೌರವದಿಂದ ನಡೆಸಿಕೊಳ್ಳಲಿದೆ. ತಾವು ಮುಂದಿನ ಬೆಳವಣಿಗೆಗೆ ಅವಕಾಶ ಮಾಡಿಕೊಡಿ ಎಂದು ಸಿದ್ದರಾಮಯ್ಯನವರಿಗೆ ರಾಹುಲ್ ಗಾಂಧಿ ತಿಳಿಸಿದ್ದಾರೆ. ಈ ವೇಳೆ ಅಹಿಂದ ಮತ ಹಿಡಿದಿಟ್ಟುಕೊಳ್ಳಲು ತನ್ನ ಮುಂದುವರಿಕೆ ಅಗತ್ಯ ಎಂದು ಸಿದ್ದರಾಮಯ್ಯ ಮನವರಿಕೆ ಯತ್ನ ಮಾಡಿದ್ದರಾದರೂ ಅದನ್ನು ಬ್ಯಾಲೆನ್ಸ್ ಮಾಡಲು ಎಲ್ಲಾ ನಾಯಕರಿಗೂ ಜವಾಬ್ದಾರಿ ಹಂಚಿಕೆ ಮಾಡುವ ಭರವಸೆಯನ್ನು ಈ ವೇಳೆ ರಾಹುಲ್​​ ನೀಡಿದ್ದಾರೆ. ಹೀಗಾಗಿ ರಾಹುಲ್​ ಗಾಂಧಿ ಮಾತಿಗೆ ಕಟ್ಟುಬಿದ್ದು ಸಿಎಂ ಸ್ಥಾನ ತ್ಯಜಿಸಲು ನಿರ್ಧರಿಸಿರೋದಾಗಿ ಆಪ್ತ ಸಚಿವರ ಬಳಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರಂತೆ. ಜೊತೆಗೆ ಸಿದ್ದರಾಮಯ್ಯಗೆ ರಾಜ್ಯಸಭಾ ಸ್ಥಾನ ಮತ್ತು ಅವರ ಪುತ್ರ, ಎಂಎಲ್​​ಸಿ ಯತೀಂದ್ರಗೆ ಡಿಸಿಎಂ ಸ್ಥಾನದ ಭರವಸೆಯೂ ನಾಯಕರಿಂದ ಸಿಕ್ಕಿದೆ ಎಂಬ ಮಾಹಿತಿಯೂ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More