ಕೋರ್ಟ್​​ ತೀರ್ಪಿನ ಬೆನ್ನಲ್ಲೇ ಡಿಸಿಎಂ, ಸಚಿವರ ಜತೆ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ

| Updated By: ರಮೇಶ್ ಬಿ. ಜವಳಗೇರಾ

Updated on: Sep 24, 2024 | 3:25 PM

ಪ್ರಾಸಿಕ್ಯೂಷನ್​ಗೆ ಅನುಮತಿ​ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಎಂ ಸಿದ್ದಾರಾಮಯ್ಯಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದರ ಬೆನ್ನಲ್ಲೇ ಇಂದು ಮಧ್ಯಾಹ್ನ 3 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರು ಸುದ್ದಿಗೋಷ್ಠಿ ನಡೆಸಿದ್ದು, ನೇರ ಪ್ರಸಾರ ಇಲ್ಲಿದೆ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ(Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್​ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಎಂ ಸಿದ್ದಾರಾಮಯ್ಯಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನಲೆ ನಾಳೆ (ಬುಧವಾರ) ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಇನ್ನು ಹೈಕೋರ್ಟ್​ ತೀರ್ಪಿನ ಬೆನ್ನಲ್ಲೇ ಇಂದು ಮಧ್ಯಾಹ್ನ 3 ಗಂಟೆಗೆ  ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸುದ್ದಿಗೋಷ್ಠಿ ಕರೆದಿದ್ದು, ನೇರ ಪ್ರಸಾರ ಇಲ್ಲಿದೆ.

ಲೈವ್​ ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Tue, 24 September 24