ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ; ಸಿಲಿಂಡರ್, ಬೈಕ್​ಗಳಿಗೆ ಹೂವಿನ ಹಾರ ಹಾಕಿ ಧರಣಿ

ಡಿ ಕೆ ಶಿವಕುಮಾರ್ (DK Shivakumar), ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸಿಲಿಂಡರ್, ಬೈಕ್​ಗಳಿಗೆ ಹೂವಿನ ಹಾರ ಹಾಕಿ ಬೈಕ್​ಗಳನ್ನು ಎತ್ತಿನಗಾಡಿಯ ಮೇಲೆ ಇಟ್ಟು ಧರಣಿ ನಡೆಸುತ್ತಿದ್ದಾರೆ.

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ; ಸಿಲಿಂಡರ್, ಬೈಕ್​ಗಳಿಗೆ ಹೂವಿನ ಹಾರ ಹಾಕಿ ಧರಣಿ
ಸಿಲಿಂಡರ್​ಗೆ ಹೂ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ
Follow us
TV9 Web
| Updated By: sandhya thejappa

Updated on:Mar 31, 2022 | 11:53 AM

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ (Congress) ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಲೆ ಏರಿಕೆ ಮುಕ್ತ ಅಭಿಯಾನಕ್ಕೆ ಎಐಸಿಸಿನಿಂದ ಚಾಲನೆ ಸಿಕ್ಕಿದ್ದು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (DK Shivakumar), ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸಿಲಿಂಡರ್, ಬೈಕ್ಗೆ​ಗಳಿಗೆ ಹೂವಿನ ಹಾರ ಹಾಕಿ ಬೈಕ್​ಗಳನ್ನು ಎತ್ತಿನಗಾಡಿಯ ಮೇಲೆ ಇಟ್ಟು ಧರಣಿ ನಡೆಸುತ್ತಿದ್ದಾರೆ.

ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಇಂದು ರಾಜ್ಯಕ್ಕೆ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಲು ಆಗಮಿಸುತ್ತಿದ್ದಾರೆ. ಅತಿ ಹೆಚ್ಚು ನೊಂದಾಯಿಸಿದವರಿಗೆ ರಾಹುಲ್ ಅಭಿನಂದನೆ ಸಲ್ಲಿಸಲಾಗುತ್ತದೆ. ಜೂಮ್ ಮೂಲಕ ರಾಹುಲ್ ಅಭಿನಂದನೆ ಸಲ್ಲಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವೀಕ್ ಆಗಿದೆ. ಹೀಗಾಗಿ ಪಿಎಂ ಮತ್ತು ಕೇಂದ್ರ ಮಂತ್ರಿಗಳು ಆಗಮಿಸುತ್ತಿದ್ದಾರೆ ಎಂದರು.

ನೂರು ಬಾರಿ ಪಟ ಪಟ ಅಂತ ಚಪ್ಪಲಿ ಏಟಾದರೂ ತಿನ್ನಬಹುದು. ದುಡ್ಡಿನ ಏಟು ತಿನ್ನೋಕಾಗಲ್ಲ. ಚಪ್ಪಲಿ ಏಟು ಬಿದ್ದರೆ ಏನೋ ಮಾಡಿ ತೆಗೆಸ್ಕೋಬಹುದು. ಆದರೆ ದುಡ್ಡಿನ ಏಟು ಸಹಿಸಿಕೊಳ್ಳಲಾಗಲ್ಲ ಎಂದು ಮಾತನಾಡಿದ ಡಿಕೆಶಿ, ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಹೋಗಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ. ಗ್ಯಾಸ್ ಸಿಲಿಂಡರ್, ಬೈಕ್ ಕಾರಿಗೆ ಹಾರ ಹಾಕಿ ಪೂಜೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದೇವೆ. ಜನರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಗರಂ: ವಿನೂತನ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಚಕ್ಕಡಿ ಗಾಡಿ ಮೇಲೆ ಸ್ಕೂಟರ್ ಇಟ್ಟು ಎಳೆದು ತಂದರು. ಚಕ್ಕಡಿ ಗಾಡಿ ಮೇಲೆ ಅಡುಗೆ ಸಿಲಿಂಡರ್ ಗಳನ್ನು ಜೋಡಿಸಿ ಆಕ್ರೋಶ ಕೇಂದ್ರ ಸರ್ಕಾರದ ವಿರುದ್ಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಮಧ್ಯಪ್ರದೇಶದಲ್ಲಿ ಎರಡು ತಲೆ, ಮೂರು ಕೈಗಳು ಹೊಂದಿರುವ ಭಾಹಶಃ ಅವಳಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಬಳ್ಳಾಪುರದಲ್ಲಿ ಸಿಗರೇಟ್ ಕೇಳಿದ್ದವನಿಗೆ ಬುದ್ಧಿವಾದ ಹೇಳಿದ್ದಕ್ಕೆ ಚಾಕುವಿನಿಂದ ಇರಿತ!

Published On - 11:23 am, Thu, 31 March 22

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ