ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ (Congress) ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಲೆ ಏರಿಕೆ ಮುಕ್ತ ಅಭಿಯಾನಕ್ಕೆ ಎಐಸಿಸಿನಿಂದ ಚಾಲನೆ ಸಿಕ್ಕಿದ್ದು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (DK Shivakumar), ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸಿಲಿಂಡರ್, ಬೈಕ್ಗೆಗಳಿಗೆ ಹೂವಿನ ಹಾರ ಹಾಕಿ ಬೈಕ್ಗಳನ್ನು ಎತ್ತಿನಗಾಡಿಯ ಮೇಲೆ ಇಟ್ಟು ಧರಣಿ ನಡೆಸುತ್ತಿದ್ದಾರೆ.
ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಇಂದು ರಾಜ್ಯಕ್ಕೆ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಲು ಆಗಮಿಸುತ್ತಿದ್ದಾರೆ. ಅತಿ ಹೆಚ್ಚು ನೊಂದಾಯಿಸಿದವರಿಗೆ ರಾಹುಲ್ ಅಭಿನಂದನೆ ಸಲ್ಲಿಸಲಾಗುತ್ತದೆ. ಜೂಮ್ ಮೂಲಕ ರಾಹುಲ್ ಅಭಿನಂದನೆ ಸಲ್ಲಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವೀಕ್ ಆಗಿದೆ. ಹೀಗಾಗಿ ಪಿಎಂ ಮತ್ತು ಕೇಂದ್ರ ಮಂತ್ರಿಗಳು ಆಗಮಿಸುತ್ತಿದ್ದಾರೆ ಎಂದರು.
ನೂರು ಬಾರಿ ಪಟ ಪಟ ಅಂತ ಚಪ್ಪಲಿ ಏಟಾದರೂ ತಿನ್ನಬಹುದು. ದುಡ್ಡಿನ ಏಟು ತಿನ್ನೋಕಾಗಲ್ಲ. ಚಪ್ಪಲಿ ಏಟು ಬಿದ್ದರೆ ಏನೋ ಮಾಡಿ ತೆಗೆಸ್ಕೋಬಹುದು. ಆದರೆ ದುಡ್ಡಿನ ಏಟು ಸಹಿಸಿಕೊಳ್ಳಲಾಗಲ್ಲ ಎಂದು ಮಾತನಾಡಿದ ಡಿಕೆಶಿ, ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಹೋಗಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ. ಗ್ಯಾಸ್ ಸಿಲಿಂಡರ್, ಬೈಕ್ ಕಾರಿಗೆ ಹಾರ ಹಾಕಿ ಪೂಜೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದೇವೆ. ಜನರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಗರಂ:
ವಿನೂತನ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಚಕ್ಕಡಿ ಗಾಡಿ ಮೇಲೆ ಸ್ಕೂಟರ್ ಇಟ್ಟು ಎಳೆದು ತಂದರು. ಚಕ್ಕಡಿ ಗಾಡಿ ಮೇಲೆ ಅಡುಗೆ ಸಿಲಿಂಡರ್ ಗಳನ್ನು ಜೋಡಿಸಿ ಆಕ್ರೋಶ ಕೇಂದ್ರ ಸರ್ಕಾರದ ವಿರುದ್ಧ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ
ಮಧ್ಯಪ್ರದೇಶದಲ್ಲಿ ಎರಡು ತಲೆ, ಮೂರು ಕೈಗಳು ಹೊಂದಿರುವ ಭಾಹಶಃ ಅವಳಿ ಮಗುವಿಗೆ ಜನ್ಮ ನೀಡಿದ ಮಹಿಳೆ
ಚಿಕ್ಕಬಳ್ಳಾಪುರದಲ್ಲಿ ಸಿಗರೇಟ್ ಕೇಳಿದ್ದವನಿಗೆ ಬುದ್ಧಿವಾದ ಹೇಳಿದ್ದಕ್ಕೆ ಚಾಕುವಿನಿಂದ ಇರಿತ!
Published On - 11:23 am, Thu, 31 March 22