AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಪ್ರಾಧಿಕಾರ, ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100 ಕೋಟಿ ಅನುದಾನ

ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100 ಕೋಟಿ ರೂ. ಅನುದಾನ ಹಾಗೂ ರಾಜ್ಯದಲ್ಲಿರುವ ವಲ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 50 ಕೋಟಿ ರೂ. ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ.

Karnataka Budget 2023: ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಪ್ರಾಧಿಕಾರ, ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100 ಕೋಟಿ ಅನುದಾನ
ಚಾಮುಂಡಿ ಬೆಟ್ಟ, ಸಿದ್ದರಾಮಯ್ಯ
TV9 Web
| Updated By: ಆಯೇಷಾ ಬಾನು|

Updated on: Jul 07, 2023 | 4:13 PM

Share

ಬೆಂಗಳೂರು: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) 14ನೇ ಬಾರಿ ಬಜೆಟ್ ಮಂಡಿಸಿದ್ದಾರೆ(Karnataka Budget 2023). 3,27,747 ಕೋಟಿ ಗಾತ್ರದ ಬಜೆಟ್ ಅನ್ನು 2 ಗಂಟೆ 50 ನಿಮಿಷ ಓದಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ದೇವಸ್ಥಾನಗಳ ಅಭಿವೃದ್ದಿಗೂ ಅನುದಾನ ಮಿಸಲಿಡಲಾಗಿದೆ. ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯ ಹಾಗೂ ಚಾಮುಂಡಿ ಬೆಟ್ಟದ(Chamundi Betta) ಸಮಗ್ರ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮಕ್ಕೆ ಸೂಚಿಸಲಾಗಿದೆ.

ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ “3D ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ” ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಿ ಬಜೆಟ್​ನಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ಕ್ರೀಡಾ ವಲಯಕ್ಕೆ ಸಿಕ್ಕಿದ್ದೇನು? ಇಲ್ಲಿದೆ ವಿವರ

ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರ ಪ್ರಾರಂಭ ಮಾಡಲು ಸರ್ಕಾರ ನಿರ್ಧರಿಸಿದೆ. “ಸಿ” ವರ್ಗದ ಒಟ್ಟು 121 ಮುಜರಾಯಿ ದೇವಸ್ಥಾನಗಳಿಗೆ ಸಮಾನವಾಗಿ 15,000 ರೂ.ಗಳ ಸಹಾಯಾನುದಾನವನ್ನು ನೀಡಲಿದೆ. ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100 ಕೋಟಿ ರೂ. ಅನುದಾನ ಹಾಗೂ ರಾಜ್ಯದಲ್ಲಿರುವ ವಲ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 50 ಕೋಟಿ ರೂ. ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಮೈಸೂರು, ಕಲಬುರಗಿ ಮತ್ತು ಹುಬ್ಬಳ್ಳಿ ಗುರುದ್ವಾರಗಳ ಅಭಿವೃದ್ಧಿಗೆ ಐದು ಕೋಟಿ ರೂ. ಅನುದಾನ ಹಾಗೂ ಗುರುದ್ವಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಂಥಿಗಳಿಗೆ ಮಾಸಿಕ ಗೌರವಧನ ಸೌಲಭ್ಯ ನೀಡಲು ಬಜೆಟ್​ನಲ್ಲಿ ತಿಳಿಸಲಾಗಿದೆ.

ರಾಜ್ಯ ಬಜೆಟ್​ಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ