ಎಂಪಿ ರೇಣುಕಾಚಾರ್ಯ ಪುತ್ರಿಯ ಜಾತಿ ಪ್ರಮಾಣ ಪತ್ರದ ಬಗ್ಗೆ ವಿಧಾನಸಭೆಯಲ್ಲಿ ಜಟಾಪಟಿ; ಏನಿದು ವಿಚಾರ?

ರೇಣುಕಾಚಾರ್ಯ ಪುತ್ರಿ SC ಜಾತಿ ಪ್ರಮಾಣ ಪತ್ರ ಪಡೆದಿದ್ದರೆ, ಕಾನೂನು ಪ್ರಕಾರ ಏನು ನಡೆಯಬೇಕೋ ಅದು ಆಗಲಿ. ಅದಕ್ಕೆ ಸರ್ಕಾರ ಯಾವುದೇ ರೀತಿಯ ಅಡ್ಡಿಪಡಿಸುವುದಿಲ್ಲ ಎಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಎಂಪಿ ರೇಣುಕಾಚಾರ್ಯ ಪುತ್ರಿಯ ಜಾತಿ ಪ್ರಮಾಣ ಪತ್ರದ ಬಗ್ಗೆ ವಿಧಾನಸಭೆಯಲ್ಲಿ ಜಟಾಪಟಿ; ಏನಿದು ವಿಚಾರ?
ಎಂ.ಪಿ ರೇಣುಕಾಚಾರ್ಯ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Mar 23, 2022 | 2:17 PM

ಬೆಂಗಳೂರು: ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರದ ಬಗ್ಗೆ ವಿಧಾನಸಭೆಯಲ್ಲಿ ಜಟಾಪಟಿ ನಡೆದಿದೆ. ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳಿಂದ ಪಟ್ಟು ಹಿಡಿಯಲಾಗಿದೆ. ನಿನ್ನೆ ಚರ್ಚೆ ಮಾಡಿದ್ದಾರೆ, ಇಂದು ಮತ್ತೆ ಚರ್ಚೆ ಏಕೆ ಎಂದು ಇದಕ್ಕೆ ವಿಧಾನಸಭೆಯಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರದ ಬಗ್ಗೆ ಚರ್ಚೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ. ರೇಣುಕಾಚಾರ್ಯ ಪುತ್ರಿ SC ಜಾತಿ ಪ್ರಮಾಣ ಪತ್ರ ಪಡೆದಿದ್ದರೆ ತಪ್ಪು. ಅದರ ಬಗ್ಗೆ ಮತ್ತೆ ಸ್ಪಷ್ಟನೆ ನೀಡಬೇಕಾದ ಅಗತ್ಯವಿಲ್ಲ. ರೇಣುಕಾಚಾರ್ಯ, ನಾನು ಸೌಲಭ್ಯ ಪಡೆದಿಲ್ಲ ಎಂದು ಹೇಳುವ ಅಗತ್ಯ ಇರಲ್ಲ. ಜಾತಿ ಪ್ರಮಾಣ ಪತ್ರ ಪಡೆದಿದ್ದರೆ ಅದು ಅಪರಾಧ ಎಂದು ಪುನರುಚ್ಛರಿಸಿದ್ದಾರೆ.

ಪುತ್ರಿ ಜಾತಿ ಪ್ರಮಾಣ ಪತ್ರದ ಬಗ್ಗೆ ಮಾತನಾಡಿದ್ದ ರೇಣುಕಾಚಾರ್ಯ, ನಾನು‌ ಜಾತ್ಯತೀತ ವ್ಯಕ್ತಿ, ಯಾವುದೇ ಸವಲತ್ತು ಪಡೆದಿಲ್ಲ. ನನ್ನ ಸಹೋದರ ಜಾತಿ ಪ್ರಮಾಣ ಪತ್ರ ತೆಗೆದುಕೊಂಡಿದ್ದಾನೆ. ನನ್ನ ಮಗಳಿಗೂ ಜಾತಿ ಪ್ರಮಾಣ ಪತ್ರ ಸೋದರ ಕೊಡಿಸಿದ್ದ. ಜಾತಿ ಪ್ರಮಾಣ ಪತ್ರವನ್ನ ನಾನೇ ವಾಪಸ್​ ಮಾಡಿಸಿರುವೆ. ನಾನು ಯಾವುದೇ ಸವಲತ್ತು ಪಡೆದಿದ್ದರೆ ಗಲ್ಲಿಗೆ ಬೇಕಿದ್ರೆ ಏರಿಸಿ ಎಂದು ವಿಧಾನಸಭೆಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ರೇಣುಕಾಚಾರ್ಯ ಪುತ್ರಿ SC ಜಾತಿ ಪ್ರಮಾಣ ಪತ್ರ ಪಡೆದಿದ್ದರೆ, ಕಾನೂನು ಪ್ರಕಾರ ಏನು ನಡೆಯಬೇಕೋ ಅದು ಆಗಲಿ. ಅದಕ್ಕೆ ಸರ್ಕಾರ ಯಾವುದೇ ರೀತಿಯ ಅಡ್ಡಿಪಡಿಸುವುದಿಲ್ಲ. ಅವರು ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ. ಹೀಗಾಗಿ ಈ ಚರ್ಚೆ ಇಲ್ಲಿಗೆ ನಿಲ್ಲಿಸಿ ಎಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ರೇಣುಕಾಚಾರ್ಯ ವಿರುದ್ದ ಸದನದ ಬಾವಿಗಿಳಿದ ಕಾಂಗ್ರೆಸ್ ಸದಸ್ಯರು ‌‌ ಬೇಡ ಜಂಗಮ ಸರ್ಟಿಫಿಕೇಟ್ ಪಡೆದ ಬಗ್ಗೆ ರೇಣುಕಾಚಾರ್ಯ ಒಪ್ಕೊಂಡಿದ್ದಾರೆ. ಅದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸದನ ಬಾವಿಯಲ್ಲಿ ಧರಣಿ ನಡೆಸಿದ್ದಾರೆ. ಈ ವೇಳೆ ಸದನದಲ್ಲಿ ತೀವ್ರ ಗದ್ದಲ, ಕೋಲಾಹಲ ಉಂಟಾಗಿದೆ.

ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಹೊನ್ನಾಳಿಗೆ ಬಂದ್ರೆ ನನ್ನ ಕ್ಷೇತ್ರ ಬಿಟ್ಟುಕೊಡ್ತೇನೆ – ಶಾಸಕ M.P.ರೇಣುಕಾಚಾರ್ಯ

ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡದವರು ದೇಶವಿರೋಧಿಗಳು; ವಿವಾದಾತ್ಮಕ ಹೇಳಿಕೆ ಕೊಟ್ಟ ಶಾಸಕ ರೇಣುಕಾಚಾರ್ಯ

Published On - 2:16 pm, Wed, 23 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್