ದೇವರಾಜ ಅರಸು ದಾಖಲೆ ಬ್ರೇಕ್: ಹೊಸ ಇತಿಹಾಸ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ದೇವರಾಜ ಅರಸು ಅವರ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. 2013ರಲ್ಲಿ ಮೊದಲ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ, 2013ರ ಮೇ 13ರಿಂದ 2018ರ ಮೇ 17ರವರೆಗೆ ಸಿಎಂ ಆಗಿ ಸೇವೆ ಸಲ್ಲಿಸಿದ್ದರು. ಆ ಬಳಿಕ 2023ರ ಮೇ 20ರಿಂದ 2ನೇ ಅವಧಿಗೆ ಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಂಗಳೂರು, ಜನವರಿ 06: ಸಿಎಂ ಆಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆಗಿದ್ದರು. ಇದೀಗ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಬ್ರೇಕ್ ಮಾಡಿದ್ದಾರೆ. 2013ರಲ್ಲಿ ಮೊದಲ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ, 2013ರ ಮೇ 13ರಿಂದ 2018ರ ಮೇ 17ರವರೆಗೆ ಸೇವೆ ಸಲ್ಲಿಸಿದ್ದರು. ಆ ಬಳಿಕ 2023ರ ಮೇ 20ರಿಂದ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಅವಧಿಯಲ್ಲೂ ಈಗಾಗಲೇ 963 ದಿನ ಪೂರೈಸಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳ ಪಟ್ಟಿಗೆ ಸೇರಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

