AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Verdict: ಹಿಜಾಬ್ ಪ್ರಕರಣ ತೀರ್ಪು ಪ್ರಕಟ; ಯಡಿಯೂರಪ್ಪ, ಸಿದ್ದರಾಮಯ್ಯ ಏನಂದ್ರು? ಇಲ್ಲಿದೆ ವಿವರ

ಹಿಜಾಬ್ ಧರಿಸಲಿ ಬಿಡಿ ಎಂದು ನಾವು ಹೇಳಿದ್ದೆವು. ಈಗ ಕೋರ್ಟ್ ಆದೇಶ ನೀಡಿದೆ, ಅದನ್ನ ಪಾಲಿಸಬೇಕು. ಇದರಿಂದಾಗಿ ನಮಗೆ ಕಪಾಳಮೋಕ್ಷ ಆಗಿದೆ ಎನ್ನಲಾಗಲ್ಲ ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Hijab Verdict: ಹಿಜಾಬ್ ಪ್ರಕರಣ ತೀರ್ಪು ಪ್ರಕಟ; ಯಡಿಯೂರಪ್ಪ, ಸಿದ್ದರಾಮಯ್ಯ ಏನಂದ್ರು? ಇಲ್ಲಿದೆ ವಿವರ
ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ
TV9 Web
| Updated By: ganapathi bhat|

Updated on:Mar 15, 2022 | 1:41 PM

Share

ಬೆಂಗಳೂರು: ಸಮವಸ್ತ್ರದ ಜತೆ ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾಗೊಂಡಿರುವ ಬಗ್ಗೆ ಕರ್ನಾಟಕ ರಾಜ್ಯದ ವಿವಿಧ ರಾಜಕೀಯ ನಾಯಕರು, ಧಾರ್ಮಿಕ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ ತೀರ್ಪನ್ನು ಎಲ್ಲರೂ ಗೌರವಿಸಬೇಕೆಂದು ಮನವಿ ಮಾಡುತ್ತೇನೆ. ಮತ್ತೆ ವಿವಾದ ಮಾಡುವುದಕ್ಕೆ ಹೋಗಬಾರದು ಎಂದು ರಾಜ್ಯದ ಜನತೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಕೋರ್ಟ್ ತೀರ್ಪಿನ ಪ್ರತಿ ನೀಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಹಿಜಾಬ್‌ನಿಂದ ಯಾರಿಗೂ ತೊಂದರೆಯಾಗಲ್ಲ ಎಂದಿದ್ದೆವು. ಈ ಹಿಂದೆಯೂ ಧರಿಸಿದ್ದರು, ಈಗಲೂ ಧರಿಸುತ್ತಿದ್ದಾರೆ. ಹಿಜಾಬ್ ಧರಿಸಲಿ ಬಿಡಿ ಎಂದು ನಾವು ಹೇಳಿದ್ದೆವು. ಈಗ ಕೋರ್ಟ್ ಆದೇಶ ನೀಡಿದೆ, ಅದನ್ನ ಪಾಲಿಸಬೇಕು. ಇದರಿಂದಾಗಿ ನಮಗೆ ಕಪಾಳಮೋಕ್ಷ ಆಗಿದೆ ಎನ್ನಲಾಗಲ್ಲ ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದೆ. ಸರ್ಕಾರ ರೂಪಿಸಿದ ನಿಯಮದ ಪರವಾಗಿ ತೀರ್ಪು ಬಂದಿದೆ. ಹೆಣ್ಣುಮಕ್ಕಳ ಶಿಕ್ಷಣದ ಹಕ್ಕನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಧರ್ಮ ಮತಾಂಧತೆ ಬೆಳೆಸಿಕೊಳ್ಳದೇ ಶಾಲೆಗಳಲ್ಲಿ ಸಹೋದರ, ಸಹೋದರಿಯರಂತೆ ಸಂಸ್ಕಾರದಿಂದ ಇರಬೇಕು. ನಾವೆಲ್ಲ ಭಾರತಮಾತೆ ಮಕ್ಕಳು ಎಂದು ಇರಬೇಕು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಇಡೀ ವಿಶ್ವಕ್ಕೆ ಮಾದರಿಯಾಗುವ ತೀರ್ಪು ಇದಾಗಿದೆ. ರಾಜ್ಯದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸಬಾರದು. ಗೊಂದಲ ಸೃಷ್ಟಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೈಕೋರ್ಟ್ ತೀರ್ಪು ಸ್ವಾಗತಿಸಿ ಸಚಿವ ಡಾ. ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು. ಎಲ್ಲ ವಿದ್ಯಾರ್ಥಿನಿಯರನ್ನು ಶಾಲೆಗೆ ಕಳಿಸಲು ಕ್ರಮಕೈಗೊಳ್ಳಬೇಕು. ಗೊಂದಲ ಬಿಟ್ಟು ವಿದ್ಯಾರ್ಥಿಗಳು ಶಾಲಾಕಾಲೇಜಿಗೆ ಬರುವಂತೆ ಕರೆ ನೀಡುತ್ತೇವೆ ಎಂದು ಹೈಕೋರ್ಟ್ ತೀರ್ಪಿನ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿ ಎಲ್ಲರೂ ಪಾಲಿಸಬೇಕು. ಯಾರಿಂದಲೂ ಸಹ ಈ ಬಗ್ಗೆ ಚರ್ಚೆ, ವಿಮರ್ಶೆ ಅಗತ್ಯ ಇಲ್ಲ. ಶಾಲೆ, ಕಾಲೇಜಿಗೆ ಅಧ್ಯಯನ ಮಾಡಲೆಂದು ಹೋಗುತ್ತಾರೆ. ಆದ್ದರಿಂದ ದಯವಿಟ್ಟು ಈ ಬಗ್ಗೆ ಹೆಚ್ಚು ಕೆದಕಲು ಹೋಗ್ಬೇಡಿ ಎಂದು ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಕೋರ್ಟ್ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು. ಈಗ ರಾಜ್ಯ ಸರ್ಕಾರದ ಜವಾಬ್ದಾರಿ ಹೆಚ್ಚಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳತ್ತ ಹೆಚ್ಚು ಗಮನ ಕೊಡಲಿ ಎಂದು ವಿಧಾನಸೌಧದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಹಲವು ಸಂಘಟನೆಗಳು ಶಾಂತಿ ಕದಡುವ ಕೆಲಸ ಮಾಡಿದ್ದವು. ವಿನಾಕಾರಣ ಶಾಂತಿ ಕದಡುವುದಕ್ಕೆ ಪ್ರಯತ್ನ ನಡೆಸಿದ್ದರು. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾದರೆ ಬಳಸಿಕೊಳ್ಳಬಹುದು. ಭಯೋತ್ಪಾದಕರನ್ನಾಗಿ ಬಳಸಿಕೊಳ್ಳುವ ಚಿಂತನೆ ನಡೆದಿತ್ತು. ಆದರೆ ಈಗ ಸರ್ಕಾರದ ನಿಲುವನ್ನು ಕೋರ್ಟ್ ಎತ್ತಿಹಿಡಿದಿದೆ. ಸಮವಸ್ತ್ರ ಕಡ್ಡಾಯ ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ತೀರ್ಪನ್ನು ಸ್ವಾಗತ ಮಾಡುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದರಿಂದ ಕಾಂಗ್ರೆಸ್ ಮುಖಂಡರಿಗೆ ಕಪಾಳಮೋಕ್ಷವಾಗಿದೆ. ಈಗಾಗಲೇ ಕಾಂಗ್ರೆಸ್‌ನಿಂದ SC, STಯವರು ದೂರವಾಗಿದ್ದಾರೆ. ಇನ್ನುಮುಂದೆ ಮುಸ್ಲಿಮರು ಕೂಡ ದೂರವಾಗುತ್ತಾರೆ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಹೈಕೋರ್ಟ್ ತೀರ್ಪನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು. ಎಲ್ಲರೂ ಕಡ್ಡಾಯವಾಗಿ ಸಮವಸ್ತ್ರವನ್ನು ಧರಿಸಬೇಕು. ಶಾಲೆಗಳಲ್ಲಿ ಉತ್ತಮವಾದ ವಾತಾವರಣ ನಿರ್ಮಾಣವಾಗಲಿ ಎಂದು ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಹೇಳಿದ್ದಾರೆ. ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್ ತೀರ್ಪು ಸ್ವಾಗತಿಸಿದೆ. ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಕಲಿಕೆಗೆ ಗಮನ ಕೊಡಿ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: Karnataka Hijab Verdict: ಹಿಜಾಬ್ ವಿವಾದ ಹಿಂದೂ-ಮುಸ್ಲಿಮರ ಬಿಕ್ಕಟ್ಟಲ್ಲ, ಸಾಂವಿಧಾನಿಕ ಬಿಕ್ಕಟ್ಟು: ಶಫಿ ಸಅದಿ

ಇದನ್ನೂ ಓದಿ: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು

Published On - 1:01 pm, Tue, 15 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ