ಸ್ವಾಮೀಜಿಗಳ ಬಟ್ಟೆ ಹಿಜಾಬ್​​ಗೆ ಹೋಲಿಸಿ ಹೇಳಿಕೆ ವಿಚಾರ: ಟ್ವೀಟ್​ ಮಾಡಿ, ಅಪಪ್ರಚಾರವೆಂದ ವಿಪಕ್ಷ ನಾಯಕ ಸಿದ್ದರಾಮಯ್ಯ!

ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕೆಲ ಶ್ರೀಗಳಿಗೆ ಇದು ಅರ್ಥವಾಗಿರುವ ಕಾರಣ ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸ್ವಾಮೀಜಿಗಳ ಬಟ್ಟೆ ಹಿಜಾಬ್​​ಗೆ ಹೋಲಿಸಿ ಹೇಳಿಕೆ ವಿಚಾರ: ಟ್ವೀಟ್​ ಮಾಡಿ, ಅಪಪ್ರಚಾರವೆಂದ ವಿಪಕ್ಷ ನಾಯಕ ಸಿದ್ದರಾಮಯ್ಯ!
ಸಿದ್ದರಾಮಯ್ಯ
TV9kannada Web Team

| Edited By: preethi shettigar

Mar 25, 2022 | 10:24 PM

ಬೆಂಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್(Hijab)​ ಧರಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್​ (High Court) ನೀಡಿರುವ ತೀರ್ಪಿಗೆ ವಿರುದ್ಧವಾಗಿ ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಸ್ವಾಮೀಜಿಗಳು ತಲೆಯ ಮೇಲೆ ಪೇಟಾ ಹಾಕುವುದಿಲ್ಲವಾ? ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ಮಾತು ರಾಜ್ಯದಾದ್ಯಂತ ವಿವಾದ ಸೃಷ್ಟಿ ಮಾಡಿದ್ದು, ಅನೇಕ ಸ್ವಾಮೀಜಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಹೀಗಿರುವಾಗಲೇ ಸ್ವಾಮೀಜಿಗಳ ಬಟ್ಟೆ ಹಿಜಾಬ್​​ಗೆ ಹೋಲಿಸಿದ ತಮ್ಮ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಟ್ವೀಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕೆಲ ಶ್ರೀಗಳಿಗೆ ಇದು ಅರ್ಥವಾಗಿರುವ ಕಾರಣ ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ. ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಟ್ವೀಟ್​ ಮಾಡಿದ್ದಾರೆ.

ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಟ್ವೀಟ್​ ಮೂಲಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಮುಸಲ್ಮಾನರ ಟೋಪಿ ಕಾಣಲ್ವಾ‌? ಮುಸ್ಲಿಮರ ಯಾವ ಚಿಂತನೆಗಳು, ಕೃತ್ಯಗಳು ನಿಮಗೆ ಕಾಣಲ್ವಾ? ಸಿದ್ದರಾಮಯ್ಯಗೆ ಹಾಲವೀರಪ್ಪಜ್ಜ ಸ್ವಾಮೀಜಿ ನೇರ ಪ್ರಶ್ನೆ

ಸಿದ್ದರಾಮಯ್ಯ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್ ನಾಯಕರು; ಓಲೈಕೆ ಭರದಲ್ಲಿ ಏಕಾಂಗಿಯಾದ್ರಾ ಸಿದ್ದರಾಮಯ್ಯ?

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada