AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್ಯನ್ RSS’ ಸವಾಲನ್ನು ಮತ್ತೆ ಮುನ್ನೆಲೆಗೆ ತಂದ ಸಿದ್ದರಾಮಯ್ಯ; RSS’ ಭಯೋತ್ಪಾದಕ ಸಂಘಟನೆ ಎಂಬರ್ಥದಲ್ಲಿ ಸರಣಿ ಟ್ವೀಟ್

ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ‌ ಆತ್ಮಾವಲೋಕನ‌ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ.

'ಆರ್ಯನ್ RSS' ಸವಾಲನ್ನು ಮತ್ತೆ ಮುನ್ನೆಲೆಗೆ ತಂದ ಸಿದ್ದರಾಮಯ್ಯ; RSS' ಭಯೋತ್ಪಾದಕ ಸಂಘಟನೆ ಎಂಬರ್ಥದಲ್ಲಿ ಸರಣಿ ಟ್ವೀಟ್
ಸಿದ್ದರಾಮಯ್ಯ
TV9 Web
| Edited By: |

Updated on:Jun 02, 2022 | 11:36 AM

Share

ಬೆಂಗಳೂರು: ‘ಆರ್ಯನ್ RSS’ ಸವಾಲನ್ನು ಸಿದ್ದರಾಮಯ್ಯ ಮತ್ತೆ ಮುನ್ನೆಲೆಗೆ ತಂದಿದ್ದಾರೆ. RSS ಭಯೋತ್ಪಾದಕ ಸಂಘಟನೆ ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರೆ. ಆರ್.ಎಸ್.ಎಸ್ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ? ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ‌ ಆತ್ಮಾವಲೋಕನ‌ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ. ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ ಆರ್ಎಸ್ಎಸ್ ಬಗ್ಗೆ ಭಯ ಸಹಜ ಅಲ್ಲವೇ ಸದಾನಂದ ಗೌಡ ಅವರೇ? ಮೀಸಲಾತಿ, ಭೂಸುಧಾರಣೆಯಂತಹ ಬಹುಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ ಆರ್ಎಸ್ಎಸ್ ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ? ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್​ನಲ್ಲಿ ಎರಡು ದಿನ ನವ ಸಂಕಲ್ಪ ಶಿಬಿರ; ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದ ಡಿಕೆ ಶಿವಕುಮಾರ್

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ‌ ಸಮುದಾಯಗಳಂತೆ ನನಗೂ ಆರ್ಎಸ್ಎಸ್ ಬಗ್ಗೆ ಭಯ ಇದೆ. ಆರ್ಎಸ್ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರ್ಎಸ್ಎಸ್ ಮೇಲೆ ದೇಶದ ಮೊದಲ ಗೃಹಸಚಿವ‌ ವಲ್ಲಭಭಾಯಿ‌ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ. ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಸದಾನಂದ ಗೌಡ ಅವರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು. ಆರ್ಎಸ್ಎಸ್ ಕಂಡರೆ ನನಗೆ ಭಯ ಎಂದು‌ ಮಾಜಿ‌ ಮುಖ್ಯಮಂತ್ರಿ ಸದಾನಂದ ಗೌಡ ಅವರು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್ಎಸ್ಎಸ್ ಕಂಡರೆ ಭಯ ಇದೆ ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ RSS ಭಯೋತ್ಪಾದಕ ಸಂಘಟನೆ ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕೊಪ್ಪಳದ ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಆರೋಪ; ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಪತ್ನಿ ವಿರುದ್ಧ ಎಫ್ಐಆರ್ ದಾಖಲು

Published On - 11:36 am, Thu, 2 June 22

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್