ಮೊಮ್ಮಗನಿಗೆ 12ನೇ ತರಗತಿ ಪ್ರಮಾಣಪತ್ರ ವಿತರಿಸಿದ ಸಿದ್ದರಾಮಯ್ಯ

ನಗರದ ಕೆನಡಿಯನ್‌ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಭಾನುವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊ೦ಡು 12ನೇ ತರಗತಿ ಪೂರ್ಣಗೊಳಿಸಿದ ಮೊಮ್ಮಗ ಧವನ್‌ಗೆ ತಾವೇ ಪ್ರಮಾಣಪತ್ರವನ್ನು ನೀಡಿದರು.

ಮೊಮ್ಮಗನಿಗೆ 12ನೇ ತರಗತಿ ಪ್ರಮಾಣಪತ್ರ ವಿತರಿಸಿದ ಸಿದ್ದರಾಮಯ್ಯ
ಸಿದ್ದರಾಮಯ್ಯ, ಧವನ್ ರಾಕೇಶ್​
Follow us
ವಿವೇಕ ಬಿರಾದಾರ
|

Updated on: May 22, 2023 | 8:11 AM

ಬೆಂಗಳೂರು: ನಗರದ ಕೆನಡಿಯನ್‌ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಭಾನುವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪಾಲ್ಗೊ೦ಡು 12ನೇ ತರಗತಿ ಪೂರ್ಣಗೊಳಿಸಿದ ಮೊಮ್ಮಗ ಧವನ್‌ಗೆ (Dhawan Rakesh) ತಾವೇ ಪ್ರಮಾಣಪತ್ರವನ್ನು ನೀಡಿದರು. ಪದವಿ ಪಡೆದ 68 ವಿದ್ಯಾರ್ಥಿಗಳಲ್ಲಿ ಅವರ ಮೊಮ್ಮಗ ಧವನ್ ರಾಕೇಶ್ ಕೂಡ ಒಬ್ಬರು. ಈ ವೇಳೆ ಧವನ್​​ ​ಗೌನ್​​ ಮೇಲೆ ಕನ್ನಡ ಧ್ವಜವನ್ನು ಹಾಕಿಕೊಂಡಿದ್ದು ವಿಶೇಷವಾಗಿತ್ತು.

ಈ ಬಗ್ಗೆ ಟ್ವೀಟ್​ ಮಾಡಿದ ಸಿದ್ದರಾಮಯ್ಯ ಅವರು “ನನ್ನ ಮೊಮ್ಮಗ ಕೆನಿಡಿಯನ್​​ ಇಂಟರ್​​ ನ್ಯಾಶನಲ್​ ಶಾಲೆಯಲ್ಲಿ 12 ನೇ ತರಗತಿ ಪೂರ್ಣಗೊಳಿಸಿದ್ದಾನೆ. ಪದವಿ ತರಗತಿಗೆ ತೆರಳುತ್ತಿರುವ ವಿದ್ಯಾರ್ಥಿಗಳಿಗಾಗಿ ಶಾಲೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಿತ್ತು. ಈ ಸಮಾರಂಭದ ಭಾಗವಾಗಲು ನನಗೆ ಸಂತೋಷವಾಗಿದೆ” ಎಂದು ಟ್ವೀಟ್​ ಮಾಡಿದ್ದಾರೆ.

ಧವನ್ ಅವರು ದಿ. ರಾಕೇಶ್ ಅವರ ಪುತ್ರ, ಅವರು ಸಿದ್ದರಾಮಯ್ಯ ಅವರ ರಾಜಕೀಯ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ಯಲು ಸಿದ್ಧರಾಗಿದ್ದಾರೆ. ಧವನ್​ ಈಚೆಗೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತಮ್ಮ ತಾತ ಸಿದ್ದರಾಮಯ್ಯ ಅವರ ಪರವಾಗಿ ವರುಣಾದಲ್ಲಿ ಪ್ರಚಾರ ಮಾಡಿದ್ದರು.

ಮೊಮ್ಮಗ ರಾಜಕೀಯದಲ್ಲಿ ಆಸಕ್ತಿ ತೋರುತ್ತಿದ್ದಾನೆ, ಆದರೆ ಅವನಿಗೆ ಇನ್ನು ಕೇವಲ 17 ವರ್ಷ. ಅವನು ಕಾನೂನು ವಿದ್ಯಾಭ್ಯಾಸ ಮಾಡಬೇಕಿದೆ ಹೀಗಾಗಿ ವಿದ್ಯಾಭಾಸದಲ್ಲಿ ಹೆಚ್ಚಿನ ಗಮನ ಕೊಡಬೇಕಾಗಿದೆ ಎಂದು ಈ ಹಿಂದೆ ಸಿದ್ದರಾಮಯ್ಯ ಅವರು ಹೇಳಿದ್ದರು. ಇನ್ನು ಸಮಾರಂಭದಲ್ಲಿ ಲೇಖಕಿ ಹಾಗೂ ಪದ್ಮಭೂಷಣ ಪುರಸ್ಕೃತೆ ಸುಧಾಮೂರ್ತಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ