ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಜಂಟಿ ಸುದ್ದಿಗೋಷ್ಠಿ: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆ

ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮೂಲಕ ರಾಜ್ಯಕ್ಕೆ ಕಳಂಕ ತಂದಿದೆ. ಬೊಮ್ಮಾಯಿ ನೇತೃತ್ವದ ಸರ್ಕಾರ ವಚನಭ್ರಷ್ಟ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಜಂಟಿ ಸುದ್ದಿಗೋಷ್ಠಿ: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆ
ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 10, 2022 | 6:31 PM

ಬೆಂಗಳೂರು: ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮೂಲಕ ರಾಜ್ಯಕ್ಕೆ ಕಳಂಕ ತಂದಿದೆ. ಬೊಮ್ಮಾಯಿ ನೇತೃತ್ವದ ಸರ್ಕಾರ ವಚನಭ್ರಷ್ಟ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ವಾಗ್ದಾಳಿ ಮಾಡಿದರು. ನಗರದರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಬರುತ್ತಿದ್ದಾರೆ. ನಮಗೆಲ್ಲರಿಗೂ ಬಹಳ ಸಂತೋಷ. ಅವರು ಬರುವುದರಿಂದ ನಮಗೆ ಯಾವುದೇ ತಕರಾರಿಲ್ಲ. ಆದರೆ ಕಾರ್ಯಕ್ರಮವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ನಾಡಪ್ರಭು ಕೆಂಪೇಗೌಡ ಹೆಸರನ್ನು ಹಿಂದೆ ಯುಪಿಎ ಸರ್ಕಾರ ಇದ್ದಾಗ ನಾಮಕರಣ ಇಟ್ಟು ಘೋಷಣೆ ಮಾಡಿದೆವು. ಅದರ ಪ್ರತಿಮೆ ಆಗಿದೆ. ಎಲ್ಲ ನಮ್ಮ ಅಧಿಕಾರಿಗಳಿಗೆ ಹೇಳಿ ಸ್ವಸಹಾಯ ಗುಂಪುಗಳಿಗೆ ಹೇಳಿ ಕರೆಸಿಕೊಂಡು ಬರುತ್ತಿದ್ದಾರೆ. ಅವರಿಗೆ ಜನರ ಬೆಂಬಲ ಇಲ್ಲ ಅನ್ನೋದು ಗೊತ್ತಾಗುತ್ತಿದೆ. ಬಿಜೆಪಿ ಸರ್ಕಾರದ ಲೋಪಗಳನ್ನು ಬಿಜೆಪಿ ಕೊಟ್ಟ ಮಾತು ಈಡೇರಿಸಿಲ್ಲ ಅಂತ ನಾವು ಹಲವು ಪ್ರಶ್ನೆ ಕೇಳಿದೆವು ಆದರೆ ಇಲ್ಲಿಯವರೆಗೆ ಒಂದೂ ಉತ್ತರ ಕೊಟ್ಟಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

10% ಸರ್ಕಾರ ಅಂತ ಆರೋಪ ಮಾಡಿದಾಗ ನಮ್ಮ ಮೇಲೆ ಏನೂ ತನಿಖೆ ಮಾಡಲಿಲ್ಲ. ಪ್ರಧಾನಿಗೆ ಗುತ್ತಿಗೆದಾರರು ಬರೆದ ಪತ್ರ ಇವತ್ತಿಗೂ ಉತ್ತರ ಕೊಟ್ಟಿಲ್ಲ. ಇದಕ್ಕೆ ನಾಳೆ ಪ್ರಧಾನಿಗಳು ಉತ್ತರ ಕೊಡಬೇಕು. ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಕರ್ನಾಟಕ ಕಳಂಕಿತ ರಾಜ್ಯವಾಗಿದೆ ಎನ್ನುವುದಕ್ಕೆ ಹಲವು ಘಟನೆಗಳೇ ಸಾಕ್ಷಿ. ನಾ ಖಾವೂಂಗಾ ಖಾನೆ ದೂಂಗಾ ಅಂದ್ರಲ್ಲ ಈಗ ನಿಮ್ಮವರು ಏನು ತಿಂತಿದ್ದೀರಿ ಎಂದು ಪ್ರಶ್ನಿಸಿದರು. ನೀವು ವಚನ ಭ್ರಷ್ಟರಾಗಿದ್ದೀರಿ. ರೈತರ ಡಬಲ್ ಆದಾಯ ಅಂದ್ರಿ. ಅದು ಯಾವುದೂ ಆಗಲಿಲ್ಲ. ಇದಕ್ಕೆ ಸಂಬಂಧಿಸಿ ಪ್ರಧಾನಿಗೆ ಪತ್ರ ಬರೆಯುತ್ತಿದ್ದೀವಿ ಎಂದು ಹೇಳಿದರು.

10 ಲಕ್ಷ ಕೋಟಿ ಜಿಮ್​ನಲ್ಲಿ ತರಾತರಿಯಲ್ಲಿ ಬಂಡವಾಳ ಮಾತನಾಡಿದ್ದೀರಿ. ಇದು ಬರೀ ನಿಮ್ಮ ಪಬ್ಲಿಸಿಟಿ ಮಾಡಿಕೊಂಡರು. ಹೊರತು ಯಾವುದೂ ಕಾರ್ಯರೂಪಕ್ಕೆ ಬರುವುದಿಲ್ಲ. ನಮ್ಮ ಸರ್ಕಾರ ಬಂದಮೇಲೆ ಅದನ್ನು ರಿವ್ಯೂ ಮಾಡುತ್ತೇವೆ. ಅರ್ಜೆಂಟ್ ಅರ್ಜೆಂಟ್ ಆಗಿ ಟೆಂಡರ್ ಕರೆಯೋದಕ್ಕೆ ಮುಂದಾಗಿದ್ದಾರೆ. ಎಸ್ಟಿಮೇಷನ್ ಹೆಚ್ಚು ತೋರಿಸಿ ಕಲೆಕ್ಷನ್ ಮಾಡಿಕೊಳ್ಳಲು ಹೊರಟಿದ್ದೀರಿ. ಬರೀ ಪೇಪರ್​ನಲ್ಲಿ ಬಂಡವಾಳ ಆಗುತ್ತಿದೆ. ಹೊರತು ಯಾವುದೂ ಮೂಲಸೌಕರ್ಯ ಸೃಷ್ಟಿ ಆಗಿಲ್ಲ. ಗುಂಡಿ ಮುಚ್ಚುವುದಕ್ಕೆ ಆಗದವರು ಹಳೆಯ ಟೆಂಡರ್​ಗಳಿಗೆ ಯಾಕೆ ದುಡ್ಡು ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ಒಂದು ದಿನವೂ ಜನರ ಕಷ್ಟ ಕೇಳಲು ಬರಲಿಲ್ಲ: ಸಿದ್ದರಾಮಯ್ಯ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲು ಮೋದಿ ಬರುತ್ತಿದ್ದಾರೆ. ಪ್ರತಿಮೆ ಅನಾವರಣಕ್ಕೆ ನಾವು ಅಧಿಕಾರದಲ್ಲಿದ್ದಾಗ ಒತ್ತಾಯಿಸಿದ್ದೆವು. ದೇವನಹಳ್ಳಿ ಏರ್​ಪೋರ್ಟ್​​ಗೆ ಕೆಂಪೇಗೌಡರ ಹೆಸರಿಟ್ಟಿದ್ದೇ ನಾವು. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಪ್ರಧಾನಿ ಮೋದಿ ಕರೆಸುತ್ತಿದ್ದಾರೆ. ಬಿಎಸ್​ವೈ ಅವಧಿಯಿಂದ ಈವರೆಗೆ ನೆರೆಗೆ ಸಾವಿರಾರು ಕೋಟಿ ನಷ್ಟವಾಗಿದೆ. ಪ್ರಧಾನಿ ಮೋದಿ ಒಂದು ದಿನವೂ ಜನರ ಕಷ್ಟ ಕೇಳಲು ಬರಲಿಲ್ಲ. ನರೇಂದ್ರ ಮೋದಿ ಡಬಲ್ ಇಂಜಿನ್​ ಸರ್ಕಾರ ಅಂತಾರೆ. ಜನರ ಸಮಸ್ಯೆಗೆ ಡಬಲ್ ಇಂಜಿನ್ ಸರ್ಕಾರ ಯಾಕೆ ಸ್ಪಂದಿಸಲಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಪ್ರಧಾನಿ ಮೋದಿ ಭ್ರಷ್ಟಾಚಾರ ಆರೋಪದ ಬಗ್ಗೆ ಮಾತನಾಡುವುದಿಲ್ಲ. ಈಗಲೂ ಹೇಳುತ್ತೇನೆ ನಮ್ಮ ಅವಧಿಯ ಅಕ್ರಮಗಳಿದ್ದರೆ ತನಿಖೆ ಮಾಡಿಸಿ. ಮೋದಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದ್ದಾರೆ. ಅಗತ್ಯವಸ್ತುಗಳ ಬೆಲೆ ಏರಿಕೆ ಯಾಕೆ ಜಾಸ್ತಿ ಆಯ್ತು ಎಂದು ಹೇಳಬೇಕಲ್ಲ? ಇದನ್ನು ಪ್ರಶ್ನಿಸಿದರೆ ದೇಶದ್ರೋಹಿ ಅಂತಾ ಹೇಳುತ್ತಾರೆ. ಇದಕ್ಕೆಲ್ಲ ಉತ್ತರ ಕೊಡಿ ಎಂದು ಮೋದಿಗೆ ಪತ್ರ ಬರೆಯುತ್ತಿದ್ದೇವೆ ಎಂದು ಹೇಳಿದರು.

40% ಕಮಿಷನ್ ಆರೋಪಕ್ಕೆ ಮೋದಿ ಯಾಕೆ ಮೌನವಾಗಿದ್ದಾರೆ

40% ಕಮಿಷನ್ ಆರೋಪಕ್ಕೆ ಮೋದಿ ಯಾಕೆ ಮೌನವಾಗಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ 10% ಸರ್ಕಾರ ಎಂದು ಆರೋಪಿಸಿದ್ದರು. ಆಗ ನಾವು ದಾಖಲಾತಿ ಕೇಳಿದರೂ ಬಿಜೆಪಿ ಬಿಡುಗಡೆ ಮಾಡಲಿಲ್ಲ. 40% ಕಮಿಷನ್ ಬಗ್ಗೆ ಗುತ್ತಿಗೆದಾರ ಸಂಘ ಮೋದಿಗೆ ಪತ್ರ ಬರೆದಿದೆ. ಪತ್ರ ಬರೆದು 1.4 ವರ್ಷ ಕಳೆದರೂ ಏನಾದ್ರೂ ಕ್ರಮ ಕೈಗೊಂಡಿದ್ದಾರಾ? ಪತ್ರಕ್ಕೆ ಒಂದು ತನಿಖೆ ಅಥವಾ ವಿವರಣೆಯಾದರೂ ಕೇಳಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು.

40% ಕಮಿಷನ್ ಆರೋಪ ಬಗ್ಗೆ ಈವರೆಗೂ ಪ್ರತಿಕ್ರಿಯೆ ನೀಡಿಲ್ಲ. ಗುತ್ತಿಗೆದಾರರ ಸಂಘದ ಪತ್ರದ ಬಗ್ಗೆ ತನಿಖೆ ಮಾಡಬೇಕಲ್ಲವೇ? ಇದನ್ನು ಕೇಳಿದರೆ ಮುಖ್ಯಮಂತ್ರಿ ಬೊಮ್ಮಾಯಿ ದಾಖಲೆ ಕೇಳುತ್ತಾರೆ. ನನ್ನ ಮೇಲೆ ಆರೋಪ ಮಾಡಿದಾಗ ದಾಖಲೆ ಬಿಡುಗಡೆ ಮಾಡಿದ್ರಾ ಎಂದು ಸಿದ್ದರಾಮಯ್ಯ ಪಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:29 pm, Thu, 10 November 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?