ಮನೆ ಮನೆಗೆ ಬರಲಿದೆ ಕ್ಲಿನಿಕ್, ಉಚಿತ ಔಷಧಿ; ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಪ್ಲಾನ್

ಮನೆ ಬಾಗಿಲಿಗೆ ಉಚಿತ ಔಷಧಿ ಹಾಗೂ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ. ಹೌದು ಮನೆ ಮನೆಗೆ ಬರ್ತಿದೆ ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ವ್ಯವಸ್ಥೆ. ಬಡ ಜನರ ಪಾಲಿಗೆ ಮಹತ್ವದ ಭಾಗ್ಯ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡಲು ಗೃಹ ಆರೋಗ್ಯ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಮನೆ ಮನೆಗೆ ಬರಲಿದೆ ಕ್ಲಿನಿಕ್, ಉಚಿತ ಔಷಧಿ; ಆರೋಗ್ಯ ಭಾಗ್ಯ ಯೋಜನೆ ಜಾರಿಗೆ  ಸಿದ್ದರಾಮಯ್ಯ ಸರ್ಕಾರ ಪ್ಲಾನ್
ಸಿಎಂ ಸಿದ್ದರಾಮಯ್ಯ
Follow us
Vinay Kashappanavar
| Updated By: ಆಯೇಷಾ ಬಾನು

Updated on: Sep 11, 2023 | 7:06 AM

ಬೆಂಗಳೂರು, ಸೆ.11: ಗೃಹ ಲಕ್ಷ್ಮಿ, ಗೃಹ ಜ್ಯೋತಿ ಗ್ಯಾರಂಟೀ ಮೇಲೆ ಗ್ಯಾರಂಟಿ ಕೊಟ್ಟು ಉಚಿತ ಯೋಜನೆಗಳ ಜಾರಿ ಮಾಡಿದ ಕಾಂಗ್ರೆಸ್ ಸರ್ಕಾರ(Congress Government) ಕೊಟ್ಟ ಆಶ್ವಾಸನೆ ಈಡೇರಿಸಿ ಜನರ ಮನಸ್ಸಿನಲ್ಲಿ ಗ್ಯಾರಂಟಿ ಸರ್ಕಾರ ಅಂತ ಅಚ್ಚೊತ್ತಿಕೊಳ್ಳುವ ಹೊಸ್ತಿಲಲ್ಲಿ ಇದೆ. ಈ ಮಧ್ಯೆಯೇ ಈಗ ಮತ್ತೊಂದು ಗ್ಯಾರಂಟಿ ಮಾದರಿಯಲ್ಲೇ ಯೋಜನೆ ಜಾರಿ ಮಾಡಲು ಮುಂದಾಗಿದ್ದು ಜನರಿಗೆ ಆರೋಗ್ಯ ಭಾಗ್ಯ(Arogya Bhagya) ನೀಡಲು ಸಿದ್ದರಾಮಯ್ಯ(Siddaramaiah) ಸರ್ಕಾರ ಮುಂದಾಗಿದೆ. ಇನ್ಮುಂದೆ ಮನೆ ಮನೆಗೆ ಕ್ಲಿನಿಕ್ ಬರಲಿದ್ದು ಚಿಕಿತ್ಸೆ ಜೊತೆ ಉಚಿತ ಔಷಧಿ ಕೂಡ ನಿಮ್ಮ ಮನೆ ಬಾಗಿಲಿಗೆ ಬರಲಿದೆ.

ಆರೋಗ್ಯವೇ ಭಾಗ್ಯ ಅಂತ ಎಷ್ಟೇ ಹೇಳಿದರೂ ಉತ್ತಮ ಆರೋಗ್ಯವನ್ನು ಕಾಪಾಡಿ ಕೊಳ್ಳುವಲ್ಲಿ ಜನ ಹಿಂದೇಟು ಹಾಕ್ತಾನೆ ಇರ್ತಾರೆ. ಅದರಲ್ಲಿಯೂ ಬಿಪಿ, ಶುಗರ್, ಕ್ಯಾನ್ಸರ್ ಅಂದ್ರೆ ಕಾಮನ್ ಅಂತ ನಿರ್ಲಕ್ಷ್ಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಕ್ಯಾಬಿನೆಟ್ ಅಲ್ಲಿ ಗ್ರೀನ್ ಸಿಗ್ನಲ್ ಸಿಕ್ಕರೆ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ.

ಸಿದ್ದರಾಮಯ್ಯ ಸರ್ಕಾರದಿಂದ ಜನರಿಗೆ ಸಿಗುತ್ತಿದೆ ಮತ್ತೊಂದು ಮಹತ್ವದ ಸ್ಕೀಂ

ಮನೆ ಬಾಗಿಲಿಗೆ ಉಚಿತ ಔಷಧಿ ಹಾಗೂ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ. ಹೌದು ಮನೆ ಮನೆಗೆ ಬರ್ತಿದೆ ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ವ್ಯವಸ್ಥೆ. ಬಡ ಜನರ ಪಾಲಿಗೆ ಮಹತ್ವದ ಭಾಗ್ಯ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡಲು ಗೃಹ ಆರೋಗ್ಯ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ. ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಮುಂದಾಗಿದೆ. ಯಾವುದೇ ದುಡ್ಡು ಇಲ್ಲದೇ ಈ ಭಾಗ್ಯ ನೀಡಲು ಮುಂದಾಗಿದೆ. ಇದಕ್ಕಾಗಿ ಮೊಬೈಲ್ ಯೂನಿಟ್ ಪ್ರತ್ಯೇಕ್ ಸಿಬ್ಬಂದಿ ನೇಮಕಾತಿ ವೈದ್ಯರ ನೇಮಕಾತಿಗೆ ಇಲಾಖೆ ಮುಂದಾಗಿದೆ. ಆರಂಭದಲ್ಲಿಯೇ ಖಾಯಿಲೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ಬಡ ಜನರ ಸಾವಿನ ಪ್ರಮಾಣ ಕಡಿಮೆ ಮಾಡಿ ಉತ್ತಮ ಆರೋಗ್ಯದ ಉದ್ದೇಶದಿಂದ ಈ ಯೋಜನೆಗೆ ಜಾರಿಗೆ ಇಲಾಖೆ ಮುಂದಾಗಿದೆ. ಈ ಗೃಹ ಆರೋಗ್ಯ ಯೋಜನೆ ಸೇವೆಯನ್ನು ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಆರಂಭ ಮಾಡಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನ ಮಿಮಿಕ್ರಿ ಮಾಡಿದ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಏನಿದು ಗೃಹ ಆರೋಗ್ಯ ಯೋಜನೆ

ಮನೆ ಬಾಗಿಲಿಗೆ ವೈದ್ಯರ ಕಳುಹಿಸಿ ಆರೋಗ್ಯ ತಪಾಸಣೆ ಮಾಡುವ ಯೋಜನೆ ಇದಾಗಿದೆ. ಈ ಹಿಂದೆ ಪ್ರತೀ 5 ಸಾವಿರ ಜನರಿಗೆ ಆರೋಗ್ಯ ಇಲಾಖೆಯ ವತಿಯಿಂದ ಆರೋಗ್ಯ ಕ್ಷೇಮ ಕೇಂದ್ರ ಸ್ಥಾಪನೆ ಮಾಡಲಾಗಿತ್ತು. ಅದೇ ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿ ಆಶಾ ಕಾರ್ಯಕರ್ತೆಯರ ಜೊತೆ ಮನೆ ಮನೆ ಭೇಟಿ ಮಾಡಿ ಚಿಕಿತ್ಸೆ ನೀಡಲಿದ್ದು ಮೊಬೈಲ್ ಕ್ಲಿನಿಕ್ ಗಳು ಮನೆ ಮನೆ ಮುಂದೆ ಬರಲಿದೆ. ಪ್ರತಿ ಮನೆಯ ಸದಸ್ಯರ ಬಿಪಿ, ಶುಗರ್, ಜ್ವರ, ಕ್ಯಾನ್ಸರ್ ಪರಿಶೀಲನೆ ನಡೆಯುತ್ತೆ . ಈ ಕಾಯಿಲೆಗಳು ಇರುವುದು ಪತ್ತೆ ಆದ್ರೆ ಮೊದಲು ಪ್ರಾಥಮಿಕ ಆರೋಗ್ಯ ಕೇಂದ್ರ ರೆಫರ್ ಮಾಡ್ತಾರೆ. ಬೇಕಾದ ಔಷಧಿ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ಪ್ರತೀ ತಿಂಗಳು ರವಾನೆ ಮಾಡಲಾಗುತ್ತೆ. ಡಯಾಬಿಟಿಸ್ ಅನ್ನ ಎಷ್ಟೋ ಜನ ನಿರ್ಲಕ್ಷ ಮಾಡ್ತಾರೆ, ಅದು ಮತ್ತೊಂದು ರೋಗಕ್ಕೆ ಟರ್ನ್ ಆಗುತ್ತೆ, ರೋಗ ಬರುವ ಮುಂಚೆಯೇ ಅಲರ್ಟ್ ಆಗಲು ಈ ಯೋಜನೆ ಲಾಭದಾಯಕವಾಗಿದೆ.

ಒಟ್ಟಿನಲ್ಲಿ ಚಿಕ್ಕ ಚಿಕ್ಕ ಕಾಯಿಲೆ ಅಂತ ನಿರ್ಲಕ್ಷ್ಯ ಮಾಡುವವರಿಗೆ ಈ ಯೋಜನೆ ಮೂಲಕ ದೊಡ್ಡ ಲಾಭವೇ ಆಗಲಿದೆ. ಕ್ಯಾಬಿನೆಟ್ ಅಲ್ಲಿ ಗ್ರೀನ್ ಸಿಗ್ನಲ್ ಸಿಕ್ರೆ ಇದೇ ಇನ್ನೊಂದು ತಿಂಗಳೊಳಗೆ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ ಗೃಹ ಆರೋಗ್ಯ ಯೋಜನೆ ಜಾರಿ ಆಗಲಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ